ಹೆಚ್ ಡಿ ಕುಮಾರಸ್ವಾಮಿ  
ರಾಜ್ಯ

'ಓಪನ್ನಾಗಿ ಹೇಳ್ತಿದ್ದೀನಿ, ಯಾರೂ ಬಿ ಖಾತಾದಿಂದ ಎ ಖಾತಾಗೆ ದುಡ್ಡು ಕಟ್ಟಬೇಡಿ; ಇದು ಸರ್ಕಾರದ ಬಹುದೊಡ್ಡ ಲೂಟಿ': ಹೆಚ್.ಡಿ ಕುಮಾರಸ್ವಾಮಿ

6ನೇ ಗ್ಯಾರಂಟಿ, ಜನತೆಗೆ ಟೋಪಿ ಹಾಕುವ ಯೋಜನೆ, ಈ ಯೋಜನೆಯಿಂದ ಜನರಿಗೆ ಅನುಕೂಲಕ್ಕಿಂತ ಹೊರೆಯೇ ಹೆಚ್ಚಾಗಲಿದೆ ಎಂದು ಆರೋಪಿಸಿದರು.

ಬೆಂಗಳೂರು: ರಾಜ್ಯ ಸರ್ಕಾರ ಬಿ ಖಾತಾದಿಂದ ಎ ಖಾತಾ ಮಾಡುವ ಯೋಜನೆಗೆ ಜನರನ್ನು ಮೋಸ ಮಾಡುವ ಬಹುದೊಡ್ಡ ಲೂಟಿ ಎಂದು ಕೇಂದ್ರ ಸಚಿವ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.

ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು “ಇದು ಸರ್ಕಾರದ 6ನೇ ಗ್ಯಾರಂಟಿ, ಜನತೆಗೆ ಟೋಪಿ ಹಾಕುವ ಯೋಜನೆ, ಈ ಯೋಜನೆಯಿಂದ ಜನರಿಗೆ ಅನುಕೂಲಕ್ಕಿಂತ ಹೊರೆಯೇ ಹೆಚ್ಚಾಗಲಿದೆ" ಎಂದು ಆರೋಪಿಸಿದರು.

ಕಾಂಗ್ರೆಸ್ A-ಖಾತಾ B-ಖಾತಾದಲ್ಲಿ ಜನರ ಲೂಟಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದು ಕಾಂಗ್ರೆಸ್ ಪಕ್ಷ ಈಗಾಗಲೇ ರಾಜ್ಯ ಸರ್ಕಾರದ ಖಜಾನೆ ಖಾಲಿ ಮಾಡಿದೆ. ಈಗ A-ಖಾತಾ B-ಖಾತಾದಲ್ಲಿ ಜನರನ್ನು ಲೂಟಿ ಮಾಡಲು ಮುಂದಾಗಿದ್ದಾರೆ. ಬೆಸ್ಕಾಂನಲ್ಲಿ 3–4 ಲಕ್ಷ ಅರ್ಜಿಗಳು ಬಂದಿವೆ ಎಂದು ಹೇಳುತ್ತಾರೆ. ಆದರೆ ಇದರಿಂದ ಜನರಿಗೆ ಯಾವ ಪ್ರಯೋಜನವೂ ಆಗುವುದಿಲ್ಲ. ಸರ್ಕಾರ ಶೇಕಡಾ 5ರಷ್ಟು ಹೆಚ್ಚುವರಿ ಶುಲ್ಕ ಹೇರುತ್ತಿದೆ. ಇದು ಜನರಿಗೆ ಹೊರೆಯಾಗಲಿದೆ, ನಾನು ಓಪನ್ ಆಗಿಯೇ ಹೇಳುತ್ತಿದ್ದೀನಿ, ಇನ್ನೆರಡು ವರ್ಷ ಸುಮ್ನಿರಿ, ಎ ಖಾತಾ, ಬಿ ಖಾತಾದ ಮೋಸದ ಬಲೆಗೆ ಬೀಳಬೇಡಿ ಎಂದರು.

ಬಿ ಖಾತಾ ಸಮಸ್ಯೆ 1995ರಿಂದಲೂ ಇದೆ. 1997ರಲ್ಲಿ ಈ ಬಗ್ಗೆ ಆದೇಶ ಹೊರಬಂದಿತ್ತು. ನಮ್ಮ ಆಡಳಿತದಲ್ಲಿ ನಗರಾಭಿವೃದ್ಧಿಗೆ ಹಲವಾರು ಕ್ರಮ ಕೈಗೊಂಡಿದ್ದೇವೆ. 7 ನಗರಸಭೆಗಳನ್ನು 9ಕ್ಕೆ ಏರಿಸಿದ್ದೇವೆ, 68 ವಾರ್ಡ್‌ಗಳನ್ನು 98ಕ್ಕೆ ವಿಸ್ತರಿಸಿದ್ದೇವೆ, 110 ಹಳ್ಳಿಗಳನ್ನು ಬಿಬಿಎಂಪಿಗೆ ಸೇರಿಸಿದ್ದೇವೆ. ಐದು ವರ್ಷಗಳಲ್ಲಿ ಸುಮಾರು 25 ಸಾವಿರ ಕೋಟಿ ಅನುದಾನ ತಂದಿದ್ದೆವು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಚೀನಾದಲ್ಲಿ ಪ್ರಧಾನಿ ಮೋದಿ ಹತ್ಯೆಗೆ ಸಂಚು: ಕಾರಲ್ಲಿ ಕರೆದೊಯ್ದು ಪಾರುಮಾಡಿದ ಪುಟಿನ್; ಢಾಕಾದಲ್ಲಿ US ಅಧಿಕಾರಿ ನಿಗೂಢ ಸಾವು ಬಿಚ್ಚಿಟ್ಟ ಸ್ಫೋಟಕ ರಹಸ್ಯ!

ನನ್ನ ಹೇಳಿಕೆಗೆ ನಾನೂ ಈಗಲೂ ಬದ್ಧ, ಆದ್ರೆ ಸಿದ್ದರಾಮಯ್ಯ 5 ವರ್ಷ ಸಿಎಂ: ಯತೀಂದ್ರ

BBK12: 'ಮಿಸ್ಟರ್ ಸುಧಿ.. 'ಸೆಡೆ' ಅಂದ್ರೇನು?': ಮತ್ತೆ ರಕ್ಷಿತಾ ವಿಚಾರವಾಗಿ ಅಶ್ವಿನಿ ಗೌಡ-ಸುಧಿಗೆ ಕಿಚ್ಚಾ ಸುದೀಪ್ ಫುಲ್ ಕ್ಲಾಸ್! video

ಆಸಿಸ್ ಮಹಿಳಾ ಕ್ರಿಕೆಟ್ ಆಟಗಾರ್ತಿಯರಿಗೆ ಲೈಂಗಿಕ ಕಿರುಕುಳ: BCCI ಪ್ರತಿಕ್ರಿಯೆ; ಆಸ್ಟ್ರೇಲಿಯಾ ಹೇಳಿದ್ದೇನು?

ಖ್ಯಾತ ಖಗೋಳ ತಜ್ಞ, ದಿ. ಜಯಂತ್ ನಾರ್ಲಿಕರ್ ಗೆ ವಿಜ್ಞಾನ ರತ್ನ ಪ್ರಶಸ್ತಿ

SCROLL FOR NEXT