ಈರುಳ್ಳಿ (ಸಾಂದರ್ಭಿಕ ಚಿತ್ರ) 
ರಾಜ್ಯ

ಈರುಳ್ಳಿ ಬೆಲೆ ಕುಸಿತ: PDPS ಅಡಿ ಖರೀದಿಗೆ ಸರ್ಕಾರ ಯತ್ನ

ರಾಜ್ಯದಲ್ಲಿ ಇತ್ತೀಚೆಗೆ ಬಿದ್ದ ಮಳೆಯಿಂದಾಗಿ ಬೆಳೆ ಹಾನಿಯಾಗಿದ್ದು, ಈರುಳ್ಳಿ ಬೆಲೆ ಕುಸಿತವಾಗಿದೆ. ಹೀಗಾಗಿ, ಪಿಡಿಪಿಎಸ್ ಅಡಿಯಲ್ಲಿ ಬೆಳೆಗಳ ಖರೀದಿಸಲು ಕೇಂದ್ರಕ್ಕೆ ಪತ್ರ ಬರೆಯುತ್ತೇವೆ.

ಬೆಂಗಳೂರು: ಈರುಳ್ಳಿ ಬೆಲೆ ಕುಸಿತದ ಕಾರಣ ಪಿಡಿಪಿಎಸ್‌ (ಪ್ರೈಸ್‌ ಡಿಫಿಷಿಯನ್ಸಿ ಪ್ರೊಕ್ಯುರ್‌ಮೆಂಟ್ ಸ್ಕೀಮ್) ಅಡಿ ಈರುಳ್ಳಿ ಖರೀದಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಈ ಕುರಿತು ಸಚಿವ ಶಿವಾನಂದ ಪಾಟೀಲ್ ಅವರು ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಇತ್ತೀಚೆಗೆ ಬಿದ್ದ ಮಳೆಯಿಂದಾಗಿ ಬೆಳೆ ಹಾನಿಯಾಗಿದ್ದು, ಈರುಳ್ಳಿ ಬೆಲೆ ಕುಸಿತವಾಗಿದೆ. ಹೀಗಾಗಿ, ಪಿಡಿಪಿಎಸ್ ಅಡಿಯಲ್ಲಿ ಬೆಳೆಗಳ ಖರೀದಿಸಲು ಕೇಂದ್ರಕ್ಕೆ ಪತ್ರ ಬರೆಯುತ್ತೇವೆಂದು ಹೇಳಿದ್ದಾರೆ.

ವಿಜಯಪುರ, ಚಿತ್ರದುರ್ಗ, ವಿಜಯನಗರ, ಬೆಳಗಾವಿ, ಧಾರವಾಡ, ಕೊಪ್ಪಳ ಮತ್ತು ಗದಗ ಜಿಲ್ಲೆಗಳಲ್ಲಿ 2.05 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಈರುಳ್ಳಿ ಬೆಳೆಯಲಾಗುತ್ತಿದೆ. ರಾಜ್ಯವು 27 ಲಕ್ಷ ಟನ್ ಉತ್ಪಾದಿಸುತ್ತದೆ. ಬೆಳೆ ಕೊಯ್ಲಿಗೆ ಸಿದ್ಧವಾಗಿದೆ. ಆದರೆ ಅಕಾಲಿಕ ಮಳೆಯಿಂದ ಈರುಳ್ಳಿ ಹಾನಿಯಾಗಿದೆ. ಇದರಿಂದಾಗಿ ಬೆಲೆಗಳು ಕುಸಿದಿದೆ.

ಈ ನಡುವೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದ್ದು, ಕೆಲವರು ಮಾರುಕಟ್ಟೆ ಹಸ್ತಕ್ಷೇಪ ಯೋಜನೆ (ಎಂಐಎಸ್) ಅಡಿಯಲ್ಲಿ ಈರುಳ್ಳಿ ಖರೀದಿಗೆ ಒಲವು ತೋರಿದರೆ, ಇತರರು ಪಿಡಿಪಿಎಸ್‌ಗೆ ಆದ್ಯತೆ ನೀಡಿದರು. ಆದ್ದರಿಂದ ಕೇಂದ್ರಕ್ಕೆ ಬರೆಯಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್: ನಾವು ಯುದ್ಧದಲ್ಲಿದ್ದೇವೆ; ಟ್ರಂಪ್ ಮಾರ್ಮಿಕ ನುಡಿ, ಸಂಘರ್ಷ ಮತ್ತಷ್ಟು ಉದ್ನಿಗ್ನ ಸಾಧ್ಯತೆ

'ಸಿಎಂ ಸಿದ್ದರಾಮಯ್ಯ ತಮ್ಮ ಮಗನನ್ನು ವಸೂಲಿ ಮಾಡಲು ರಾಜಕೀಯಕ್ಕೆ ಕರೆತಂದಿದ್ದಾರೆ': ಹೆಚ್ ಡಿ ಕುಮಾರಸ್ವಾಮಿ

Kerala: ಕಾಂಗ್ರೆಸ್ ಸಂಸದ Shashi Tharoor ಬೆಂಗಾವಲು ಪಡೆ ತಡೆದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ

ಮಹಾರಾಷ್ಟ್ರ: ನಾಸಿಕ್ ಬಳಿ ಬಾವಿಗೆ ಬಿದ್ದ ಕಾರು; ಒಂದೇ ಕುಟುಂಬದ 9 ಮಂದಿ ಸಾವು-Video

ಗಡಿ ನುಗ್ಗಿ RSS ಶಿಬಿರ-ಮನೆಗಳ ಮೇಲೆ ನೇರ ದಾಳಿ: ಮತ್ತೆ ಬಾಲ ಬಿಚ್ಚಿದ ಪಾಕ್‌; ಭಾರತಕ್ಕೆ ಗೊಡ್ಡು ಬೆದರಿಕೆ

SCROLL FOR NEXT