ಮಳೆಯ ಸಾಂದರ್ಭಿಕ ಚಿತ್ರ  
ರಾಜ್ಯ

Karnataka Rains: ವಾಯುಭಾರ ಕುಸಿತ; ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ಮಳೆ

ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಹವಾಮಾನದಲ್ಲಿ ಬದಲಾವಣೆ ಆಗಿದೆ. ಅ. 27 ರಂದು ಭಾರೀ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು: ದೀಪಾವಳಿ ಹಬ್ಬ ಮುಗಿದರೂ ಮಳೆಯಾಗುತ್ತಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ ಒಂದು ವಾರದ ಮಟ್ಟಿಗೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳ ಬಹುತೇಕ ಕಡೆ, ಉತ್ತರ ಒಳನಾಡು ಕೆಲವು ಕಡೆ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಹವಾಮಾನದಲ್ಲಿ ಬದಲಾವಣೆ ಆಗಿದೆ. ಅ. 27 ರಂದು ಭಾರೀ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಸಹಜವಾಗಿದ್ದು, ಹಗುರದಿಂದ ಸಾಧಾರಣ ಮಳೆ ಸರ್ವೇ ಸಾಮಾನ್ಯವಾಗಿದೆ. ಬೆಂಗಳೂರಿಗೆ ಅಕ್ಟೋಬರ್ 25 ಹಾಗೂ 26 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಕರ್ನಾಟಕದ ಜಿಲ್ಲೆಗಳಿಗೆ ಅಕ್ಟೋಬರ್ 26 ರಂದು ಯೆಲ್ಲೋ ಹಾಗೂ 27 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಒಟ್ಟಿನಲ್ಲಿ, ಮುಂದಿನ ಏಳು ದಿನಗಳ ಕಾಲ ಕರ್ನಾಟಕದ ವಿವಿಧೆಡೆ ವರ್ಷಧಾರೆ ಬಹುತೇಕ ಖಚಿತ ಎಂಬ ಸುಳಿವನ್ನು ಹವಾಮಾನ ಇಲಾಖೆ ನೀಡಿದೆ.

ಅಕ್ಟೋಬರ್ 24 ರಿಂದ ನವೆಂಬರ್ 2 ರವರೆಗೆ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಕೆಲವೊಮ್ಮೆ ವ್ಯಾಪಕವಾಗಿ ಹಾಗೂ ಕೆಲವೊಮ್ಮೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಅಕ್ಟೋಬರ್ 28 ರಂದು ಅಲ್ಲಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಎಕ್ಸ್ ಸಂದೇಶದಲ್ಲಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಭಾರತ ಜತೆಗಿನ ಸಂಬಂಧಕ್ಕೆ ಧಕ್ಕೆ ತಂದು ಪಾಕ್‌ ಜೊತೆ ಸ್ನೇಹ ಇಲ್ಲ': ಅಮೆರಿಕ ಕಾರ್ಯದರ್ಶಿ ಮಾರ್ಕೋ ರುಬಿಯೋ

ಅಲ್ಬೇನಿಯಾದ ಎಐ ಸಚಿವೆ ಈಗ ಗರ್ಭಿಣಿ, 83 ಮಕ್ಕಳ ತಾಯಿ..: ಅಲ್ಬೇನಿಯಾ ಪ್ರಧಾನಿ ಎಡಿ ರಾಮ ವಿಲಕ್ಷಣ ಘೋಷಣೆ!

ICC Womens World Cup 2025: ಭಾರತ-ಬಾಂಗ್ಲಾದೇಶ ಪಂದ್ಯ ಮಳೆಗಾಹುತಿಚ ಸೆಮೀಸ್ ನಲ್ಲಿ ಇಂಡಿಯಾ-ಆಸಿಸ್ ಮುಖಾಮುಖಿ!

ದೇಶಾದ್ಯಂತ SIR ಪ್ರಯೋಗ: ಮೊದಲ ಹಂತದಲ್ಲಿ ಬಂಗಾಳ, ಕೇರಳ, ತಮಿಳುನಾಡು; ನಾಳೆ ಕೇಂದ್ರ ಚುನಾವಣಾ ಆಯೋಗ ಮಹತ್ವದ ಸುದ್ದಿಗೋಷ್ಠಿ

ಭಯೋತ್ಪಾದಕರ ಪಟ್ಟಿಗೆ Bollywood ನಟ ಸಲ್ಮಾನ್ ಖಾನ್ ಹೆಸರು ಸೇರಿಸಿದ ಪಾಕಿಸ್ತಾನ!

SCROLL FOR NEXT