ಡಿ.ಕೆ. ಶಿವಕುಮಾರ್ 
ರಾಜ್ಯ

ಬೆಂಗಳೂರಿಗೆ ಬಿಜೆಪಿ ಸಂಸದನ ಕೊಡುಗೆ ಏನು? ಕರ್ನೂಲ್ ಬಸ್ ದುರಂತದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಸೂಚನೆ: ಡಿ.ಕೆ ಶಿವಕುಮಾರ್

ಲೋಕಸಭಾ ಸದಸ್ಯನಾಗಿ ಆತ ಕರ್ನಾಟಕಕ್ಕೆ ಎಷ್ಟು ಅನುದಾನ ತಂದಿದ್ದಾನೆ. ಎಷ್ಟು ಬಾರಿ ಪ್ರಧಾನಿಯವರನ್ನು ಭೇಟಿ ಮಾಡಿ ಬೆಂಗಳೂರಿನ ಅಭಿವೃದ್ಧಿಗೆ ಎಷ್ಟು ಅನುದಾನ ಕೋರಿದ್ದಾರೆ. ನಿಗದಿತವಾಗಿ ದೊರೆಯುವ ಅನುದಾನ ಬೇರೆ.

ಬೆಂಗಳೂರು: ಕರ್ನೂಲ್ ಬಸ್ ದುರಂತ, ಉನ್ನತ ಮಟ್ಟದ ತನಿಖೆ ನಡೆಸುವಂತೆ ಆಂಧ್ರ ಪ್ರದೇಶ ಸರ್ಕಾರಕ್ಕೆ ಹೇಳಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಕರ್ನೂಲ್ ನಲ್ಲಿ ಸಂಭವಿಸಿರುವ ಬಸ್ ದುರಂತದ ಬಗ್ಗೆ ಕೇಳಿದಾಗ, “ಕರ್ನೂಲ್ ನಲ್ಲಿ ಸಂಭವಿಸಿರುವ ಬಸ್ ಅಪಘಾತ ದುರಾದೃಷ್ಟಕರ.

ಇತ್ತೀಚೆಗೆ ಬೆಂಗಳೂರಿನಿಂದ ಹೈದರಾಬಾದ್ ಗೆ ತೆರಳುತ್ತಿದ್ದ ಗ್ರೀನ್ ಲೈನ್ ಬಸ್ ಕೂಡ ಇದೇ ರೀತಿ ದುರಂತಕ್ಕೆ ಒಳಗಾಗಿತ್ತು. ಆಗ ನಮ್ಮ ಪಕ್ಷದ ರಾಯಚೂರು ಅಧ್ಯಕ್ಷೆ ಚಾಲಕನನ್ನು ಎಚ್ಚರಿಸಿದ ಪರಿಣಾಮ, ಬಸ್ ನಲ್ಲಿದ್ದ 20 ಮೆಡಿಕಲ್ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದರು.

ಕೆಲವು ಸಣ್ಣಪುಟ್ಟ ಗಾಯಗಳಾಗಿದ್ದವು. ಆದರೆ ಆ ರಾಜ್ಯದ ಪೊಲೀಸರು ಅಗತ್ಯ ಕ್ರಮ ಕೈಗೊಂಡಿರಲಿಲ್ಲ. ನಾನು ರಾಯಚೂರಿಗೆ ಹೋದಾಗ ಅಲ್ಲಿ ಕೆಲವರು ನನಗೆ ಅದರ ವಿಡಿಯೋ ತೋರಿಸಿದರು. ಈ ದುರಂತ ಬೇರೆ ರಾಜ್ಯದಲ್ಲಿ ಆಗಿದ್ದರೂ ಈ ಬಗ್ಗೆ ಗಮನಹರಿಸುವಂತೆ ಸಾರಿಗೆ ಸಚಿವರು ಹಾಗೂ ಗೃಹ ಸಚಿವರಿಗೆ ಸೂಚಿಸುತ್ತೇವೆ. ಯಾವುದೇ ರಾಜ್ಯದ ಸರ್ಕಾರವಾಗಲಿ, ಈ ಬಗ್ಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು” ಎಂದು ತಿಳಿಸಿದರು.

“ಈ ಪ್ರಕರಣದಲ್ಲಿ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಹೀಗಾಗಿ ಅಪಘಾತಕ್ಕೆ ಕಾರಣ ತಿಳಿಯಲು ತನಿಖೆ ನಡೆಸಬೇಕಿದೆ. ಇದು ಸಣ್ಣ ಘಟನೆಯಲ್ಲ. ಇಂತಹ ದುರ್ಘಟನೆ ಮತ್ತೆ ಸಂಭವಿಸದಂತೆ ನೋಡಿಕೊಳ್ಳಬೇಕು” ಎಂದು ತಿಳಿಸಿದರು.

ಇನ್ನು ಪಕ್ಷದಲ್ಲಿ ನಾಯಕತ್ವ ವಿಚಾರವಾಗಿ ನೀಡುತ್ತಿರುವ ಹೇಳಿಕೆ ಬಗ್ಗೆ ಕೇಳಿದಾಗ, “ಶಿಸ್ತು ನಮ್ಮ ಪಕ್ಷದ ಆದ್ಯತೆ. ಈ ವಿಚಾರವಾಗಿ ನಾನು ಈಗ ಮಾತನಾಡುವುದಿಲ್ಲ. ಯಾರ ಬಳಿ ಚರ್ಚೆ ಮಾಡಬೇಕೋ ಮಾತನಾಡುತ್ತೇನೆ” ಎಂದು ತಿಳಿಸಿದರು.

ಕಳೆದ ಎರಡು ವರ್ಷಗಳಿಂದ ಕಾಂಗ್ರೆಸ್ ಸರ್ಕಾರ ರಾಜ್ಯದ ಅಭಿವೃದ್ಧಿ ಕಡೆಗಣಿಸಿದೆ ಎನ್ನುವ ಆರೋಪದ ಬಗ್ಗೆ ಕೇಳಿದಾಗ,‌ "ಲೋಕಸಭಾ ಸದಸ್ಯನಾಗಿ ಆತ ಕರ್ನಾಟಕಕ್ಕೆ ಎಷ್ಟು ಅನುದಾನ ತಂದಿದ್ದಾನೆ. ಎಷ್ಟು ಬಾರಿ ಪ್ರಧಾನಿಯವರನ್ನು ಭೇಟಿ ಮಾಡಿ ಬೆಂಗಳೂರಿನ ಅಭಿವೃದ್ಧಿಗೆ ಎಷ್ಟು ಅನುದಾನ ಕೋರಿದ್ದಾರೆ.

ನಿಗದಿತವಾಗಿ ದೊರೆಯುವ ಅನುದಾನ ಬೇರೆ. ಆದರೆ ವಿಶೇಷ ಅನುದಾನದ ಬಗ್ಗೆ ನಾನು ಪ್ರಶ್ನೆ ಮಾಡುತ್ತಿದ್ದೇನೆ. ಬೆಂಗಳೂರಿನ ಜನ ಆತನಿಗೆ ಮತ ನೀಡಿದ್ದಾರೆ. ಬೆಂಗಳೂರಿಗೆ ಆತನ ಕೊಡುಗೆ ಏನೆಂದು ಉತ್ತರಿಸಲಿ" ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮತ್ತೊಬ್ಬ ಏಕನಾಥ ಶಿಂಧೆ ಹುಟ್ಟಲು ಸಾಧ್ಯವಿಲ್ಲ; 'ನವೆಂಬರ್ ಕ್ರಾಂತಿ'ಗೆ ಕಾಂಗ್ರೆಸ್ ಅವಕಾಶ ನೀಡಲ್ಲ!

ನಾಳೆಯಿಂದಲೇ ರಾಷ್ಟ್ರವ್ಯಾಪಿ SIR: ಮೊದಲ ಹಂತದಲ್ಲಿ ಕೇರಳ, ತಮಿಳುನಾಡು, ಬಂಗಾಳ ಸೇರಿ 12 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ಶುದ್ಧೀಕರಣ

ಜಗತ್ತಿನ ಯಾವುದೇ ಭಾಗ ತಲುಪಿ ಧ್ವಂಸ ಮಾಡಬಲ್ಲ ರಷ್ಯಾದ ಬ್ಯೂರೆವೆಸ್ಟ್ನಿಕ್ ಪರಮಾಣು ಕ್ಷಿಪಣಿ ಪರೀಕ್ಷೆ ಯಶಸ್ವಿ; ಅಮೆರಿಕಾಗೆ ಢವ ಢವ, ತಣ್ಣಗಾದ ಟ್ರಂಪ್!

ಕೇಜ್ರಿವಾಲ್ ಗೆ ಬೇಲ್, SIR, ಆರ್ಟಿಕಲ್ 370, ವಾಕ್ ಸ್ವಾತಂತ್ರ್ಯದ ಬಗ್ಗೆ ತೀರ್ಪು..: ನೂತನ ಸಿಜೆಐ ಟ್ರ್ಯಾಕ್ ರೆಕಾರ್ಡ್ ಹೀಗಿದೆ...

ಹುಬ್ಬಳ್ಳಿಯ ಉದ್ಯಮಿ, ಗುತ್ತಿಗೆದಾರ ಆನಂದ ಹೂವಿನಹಡಗಲಿ ಲಾಡ್ಜ್‌ನಲ್ಲಿ ಆತ್ಮಹತ್ಯೆ!

SCROLL FOR NEXT