ಪರಪ್ಪನ ಅಗ್ರಹಾರ ಕೇಂದ್ರೀಯ ಕಾರಾಗೃಹ 
ರಾಜ್ಯ

ಪರಪ್ಪನ ಅಗ್ರಹಾರ ಕಾರಾಗೃಹ: ಒಳ ಉಡುಪಿನಲ್ಲಿ ಮೊಬೈಲ್ ಕಳ್ಳ ಸಾಗಣೆಗೆ ಯತ್ನ; ಜೈಲು ವೀಕ್ಷಕ ಬಂಧನ

ಅಮರ್ ಅಕ್ಟೋಬರ್‌ 23ರಂದು ಕರ್ತವ್ಯಕ್ಕೆ ಆಗಮಿಸಿದ್ದಾನೆ. ಈ ವೇಳೆ ಪ್ರವೇಶದ್ವಾರದಲ್ಲಿದ್ದ ಕೆಎಸ್‌ಐಎಸ್‌ಎಫ್ ಸಿಬ್ಬಂದಿ ತಪಾಸಣೆಗೆ ಒಳಪಡಿಸಲು ಮುಂದಾಗಿದ್ದಾರೆ.

ಬೆಂಗಳೂರು: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಒಳ ಉಡುಪಿನಲ್ಲಿಟ್ಟುಕೊಂಡು ಮೊಬೈಲ್ ಕಳ್ಳಸಾಗಣೆ ಮಾಡುತತಿದ್ದ ಜೈಲಿನ ವೀಕ್ಷಕನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತ ಜೈಲು ಸಿಬ್ಬಂದಿಯನ್ನು ಅಮರ್ ಪ್ರಾಂಜೆ (29) ಎಂದು ಗುರ್ತಿಸಲಾಗಿದೆ. ಅಮರ್ ಅಕ್ಟೋಬರ್‌ 23ರಂದು ಕರ್ತವ್ಯಕ್ಕೆ ಆಗಮಿಸಿದ್ದಾನೆ. ಈ ವೇಳೆ ಪ್ರವೇಶದ್ವಾರದಲ್ಲಿದ್ದ ಕೆಎಸ್‌ಐಎಸ್‌ಎಫ್ ಸಿಬ್ಬಂದಿ ತಪಾಸಣೆಗೆ ಒಳಪಡಿಸಲು ಮುಂದಾಗಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಆತ ವಾಪಸ್‌ ಹೋಗಲು ಮುಂದಾಗಿದ್ದಾನೆ.

ಇದರಿಂದ ಅನುಮಾನಗೊಂಡ ಸಿಬ್ಬಂದಿ ಅವನನ್ನು ಹಿಡಿದು ತಪಾಸಣೆ ನಡೆಸಿದಾಗ ಒಳುಡುಪಿನಲ್ಲಿ ಒಂದು ಸ್ಮಾರ್ಟ್‌ಫೋನ್‌, ಇಯರ್‌ ಫೋನ್‌ ಪತ್ತೆಯಾಗಿದೆ.

ತಕ್ಷಣ ಜೈಲಿನ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಅಮರ್ ಪ್ರಾಂಜೆಯನ್ನ ಬಂಧಿಸಿದ್ದಾರೆ. ಈ ಸಂಬಂಧ ಜೈಲು ಅಧೀಕ್ಷಕ ಹೆಚ್.ಎ ಪರಮೇಶ್ ನೀಡಿದ ದೂರಿನ ಮೇರೆಗೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವ್ಯಕ್ತಿಯ ವಿರುದ್ಧ ಕರ್ನಾಟಕ ಕಾರಾಗೃಹ ಕಾಯ್ದೆಯ ಸೆಕ್ಷನ್ 42 ಮತ್ತು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 323 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪರೀಕ್ಷೆ ಅಕ್ರಮ; ಜಾರ್ಖಂಡ್ ಸಿಎಂ ಸೊರೇನ್, ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಪ್ರತಿಕೃತಿ ದಹಿಸಿ JPSC-JSSC ಆಕಾಂಕ್ಷಿಗಳ ಪ್ರತಿಭಟನೆ

NLSIU ಘಟಿಕೋತ್ಸವ: NALSAR ಮಾದರಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳಿಗೆ ಆಹ್ವಾನ ವಿರೋಧಿಸಿದ ಬೆಂಗಳೂರು ಉನ್ನತ ಕಾನೂನು ಕಾಲೇಜು!

ಪಂಜಾಬ್: ತಪ್ಪಿದ ಭಾರಿ ಅನಾಹುತ; ಉಗ್ರ ದಾಳಿ ಸಂಚು ವಿಫಲ, 690 ಗ್ರಾಂ IED ಪೊಲೀಸ್ ವಶಕ್ಕೆ

SIR ಪ್ರಕ್ರಿಯೆ ಯಶಸ್ಸು: ಬಿಹಾರ ಚುನಾವಣೆ ಅಮೆರಿಕ, ಇಂಗ್ಲೆಂಡ್, ಫ್ರಾನ್ಸ್ ಮತ್ತು ಜಪಾನ್‌ಗಳನ್ನು ಮೀರಿಸಿದೆ: CEC ಜ್ಞಾನೇಶ್ ಕುಮಾರ್

ಭಾರತದ ಹೊಸ ಶಕ್ತಿ ಪ್ರದರ್ಶನ: ಜೆಟ್ ಚಾಲಿತ ಸ್ವದೇಶಿ 'ದಿವ್ಯಾಸ್ತ್ರ Mk3' ಮೊದಲ ಪರೀಕ್ಷೆ ಯಶಸ್ವಿ! Video