ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಾ ಸಂಘ (RSS) ಕಾರ್ಯಚಟುವಟಿಕೆಗಳನ್ನು ನಿಷೇಧಿಸಿದ್ದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಆರೋಪ ಪ್ರತ್ಯಾರೋಪಗಳು ಜೋರಾಗಿದೆ. ಇದರ ನಡುವೆ ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಟ್ರಸ್ಟ್ಗೆ RSS ಕಾರ್ಯಕರ್ತರೊಬ್ಬರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದ್ದು ಇದು ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ತಿಪಟೂರಿನ RSS ಸದಸ್ಯ ಡಾ. ಶ್ರೀಧರ್ ಕುಮಾರ್ ಅವರನ್ನು ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಟ್ರಸ್ಟ್ ಸದಸ್ಯರನ್ನಾಗಿ ಸರ್ಕಾರ ನೇಮಕ ಮಾಡಿದೆ. ಕೆಎನ್ ರಾಜಣ್ಣ ರಾಜೀನಾಮೆ ಬಳಿಕ ಸಹಕಾರ ಇಲಾಖೆ ಸಿಎಂ ಸಿದ್ದರಾಮಯ್ಯ ಬಳಿಯೇ ಇದ್ದು ಇದೀಗ ಅವರೇ ನೇಮಕ ಮಾಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೆ ಟ್ರಸ್ಟ್ನ ಮುಖ್ಯಸ್ಥರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ಶ್ರೀಧರ್ ಅವರ ಟ್ರಸ್ಟ್ ಸದಸ್ಯತ್ವ ವಾಪಸ್ ಪಡೆಯುಂತೆ ಆಗ್ರಹಿಸಿದ್ದಾರೆ.