ನೆಲಮಂಗಲ: ನೆಲಮಂಗಲ ತಾಲೂಕಿನ ಇಸ್ಲಾಂಪುರದಲ್ಲಿ ಮನೆ ಮುಂದೆ ನಿಂತಿದ್ದ ಗ್ರಾಮ ಪಂಚಾಯಿತಿ ಸದಸ್ಯ ಸಲೀಂ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ. ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ಗುಂಡು ಹಾರಿಸಿದ್ದರು. ಗುರಿ ಮಿಸ್ ಆಗಿ ಸಲೀಂ ಕೈಗೆ ಬಿದ್ದಿದ್ದು ಕೂಡಲೇ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಗಾಯಗೊಂಡಿರುವ ಸಲೀಂಗೆ ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ನೆಲಮಂಗಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ.