ಸಾರ್ವಜನಿಕರೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ 
ರಾಜ್ಯ

'ಬಿ ಖಾತಾದಿಂದ ಎ ಖಾತಾ'ಗೆ ಪರಿವರ್ತನೆಗೆ ಟೀಕೆ: ಕುಮಾರಸ್ವಾಮಿ ಖಾಲಿ ಟ್ರಂಕ್ ಎಂದ ಡಿಸಿಎಂ ಡಿಕೆಶಿ!

ಕಬ್ಬನ್ ಪಾರ್ಕ್ ನಲ್ಲಿ ಭಾನುವಾರ ನಡೆದ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಡಿಕೆ ಶಿವಕುಮಾರ್, ವಿದ್ಯಾವಂತರು 'ಎ ಖಾತಾ ಪರಿವರ್ತನೆ' ಒಪ್ಪುತ್ತಿರುವುದಕ್ಕೆ ಧನ್ಯವಾದ ಹೇಳಿದರು.

ಬೆಂಗಳೂರು: "ಬೆಂಗಳೂರಿನ ಬಿ ಖಾತಾ ಆಸ್ತಿಗಳನ್ನು ಎ ಖಾತಾಗೆ ಪರಿವರ್ತನೆ ಮಾಡುತ್ತಿರುವ ಬಗ್ಗೆ ಇಲ್ಲಸಲ್ಲದ ಟೀಕೆ ಮಾಡುತ್ತಿರುವ ಕುಮಾರಸ್ವಾಮಿ ಖಾಲಿ ಟ್ರಂಕ್ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು.

ಕಬ್ಬನ್ ಪಾರ್ಕ್ ನಲ್ಲಿ ಭಾನುವಾರ ನಡೆದ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಡಿಕೆ ಶಿವಕುಮಾರ್, ವಿದ್ಯಾವಂತರು 'ಎ ಖಾತಾ ಪರಿವರ್ತನೆ' ಒಪ್ಪುತ್ತಿರುವುದಕ್ಕೆ ಧನ್ಯವಾದ ಹೇಳಿದರು.

ಈ ವೇಳೆ ನಾಗರಿಕರೊಬ್ಬರು, ಸರ್ಕಾರ ಎಲ್ಲಾ ಆಸ್ತಿಗಳನ್ನು ಎ ಖಾತಾ ಆಗಿ ಪರಿವರ್ತನೆ ಮಾಡುತ್ತಿರುವುದು ಒಳ್ಳೆಯ ಕೆಲಸ. ಈ ಪರಿವರ್ತನೆಗಾಗಿ ಅನೇಕರು, ಹಲವು ವರ್ಷಗಳಿಂದ ಕಾಯುತ್ತಿದ್ದರು ಎಂದು ಸರ್ಕಾರದ ತೀರ್ಮಾನವನ್ನು ಸ್ವಾಗತಿಸಿ, ಮುಕ್ತವಾಗಿ ಪ್ರಶಂಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ, "ಎ ಖಾತಾ ನಿಮ್ಮ ಆಸ್ತಿ ದಾಖಲೆ. ಸಾರ್ವಜನಿಕರ ಆಸ್ತಿ ದಾಖಲೆಗಳನ್ನು ಸರಿಪಡಿಸಿ, ಅವುಗಳನ್ನು ಜನರಿಗೆ ನೀಡುವುದು ನಮ್ಮ ಸರ್ಕಾರದ ಆರನೇ ಗ್ಯಾರಂಟಿ. ಇದಕ್ಕಾಗಿ ನಾವು ಕೇವಲ ಶೇ.5 ರಷ್ಟು ಮಾತ್ರ ಅಭಿವೃದ್ಧಿ ಶುಲ್ಕ ಪಾವತಿ ಮಾಡುವಂತೆ ಕೇಳಿದ್ದೇವೆ. ನಿಮ್ಮಂತಹ ಪ್ರಜ್ಞಾವಂತ ನಾಗರೀಕರು ಇದನ್ನು ಸ್ವಾಗತಿಸಿರುವುದಕ್ಕೆ ಧನ್ಯವಾದ ಎಂದರು.

ರಾಜ್ಯ ಸರ್ಕಾರ ಬಿ ಖಾತಾದಿಂದ ಎ ಖಾತಾ ಮಾಡುವ ಯೋಜನೆಗೆ ಜನರನ್ನು ಮೋಸ ಮಾಡುವ ಬಹುದೊಡ್ಡ ಲೂಟಿ ಎಂದು ಕೇಂದ್ರ ಸಚಿವ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಶುಕ್ರವಾರ ಟೀಕಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ ಪಂಚಾಯಿತಿ ಪ್ರತಿನಿಧಿಗಳಿಗೆ ಭತ್ಯೆ ಹೆಚ್ಚಳ, ಪಿಂಚಣಿ, ವಿಮೆ ಸೌಲಭ್ಯ: ತೇಜಸ್ವಿ ಯಾದವ್

ದೆಹಲಿಗೆ ಭೇಟಿ ನೀಡುವುದು ಸಾಮಾನ್ಯ, ಸಂಪುಟ ಪುನರ್ ರಚನೆ ಕುರಿತು ಸಿಎಂ ಮಾತನಾಡುತ್ತಾರೆ: ಡಿಕೆ ಶಿವಕುಮಾರ್

Cabinet reshuffle: ಡಿಸೆಂಬರ್ ನಲ್ಲಿ ಸಚಿವ ಸಂಪುಟ ಪುನಾರಚನೆ; ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ರಾ?

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ವಿಫಲರಾಗಬೇಕೆಂದು ಬಯಸುವ ಆಯ್ಕೆದಾರರು ಇದ್ದಾರೆ: ಮೊಹಮ್ಮದ್ ಕೈಫ್

ಅಮೆರಿಕ ಬೆದರಿಕೆಗೆ ಬಗ್ಗದ ಭಾರತ; ಅಕ್ಟೋಬರ್ ನಲ್ಲಿ ರಷ್ಯಾದಿಂದ ತೈಲ ಆಮದು ಪ್ರಮಾಣ ಇನ್ನೂ ಹೆಚ್ಚಳ!

SCROLL FOR NEXT