ಮಾಜಿ ಶಾಸಕ ಮಹಾಲಿಂಗಪ್ಪನಿಗೆ ತಿವಿಯುತ್ತಿರುವ ಹೋರಿಯ ಚಿತ್ರ 
ರಾಜ್ಯ

ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆ; ಮಾಜಿ ಶಾಸಕನಿಗೆ ತಿವಿದ ಹೋರಿ! Video ವೈರಲ್

ಎರಡು ದಿನಗಳ ಹಿಂದೆ ಬಳ್ಳಿಗಾವಿಯಲ್ಲಿ ಸಾಂಪ್ರಾದಾಯಿಕ ಗ್ರಾಮೀಣ ಕ್ರೀಡೆ ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸಲಾಗಿತ್ತು.

ಶಿವಮೊಗ್ಗ: ದೀಪಾವಳಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಮಾಜಿ ಶಾಸಕರೊಬ್ಬರಿಗೆ ಹೋರಿಯೊಂದು ತಿವಿದಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

ಎರಡು ದಿನಗಳ ಹಿಂದೆ ಬಳ್ಳಿಗಾವಿಯಲ್ಲಿ ಸಾಂಪ್ರಾದಾಯಿಕ ಗ್ರಾಮೀಣ ಕ್ರೀಡೆ ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸಲಾಗಿತ್ತು.

ಸ್ಪರ್ಧೆಯನ್ನು ವೀಕ್ಷಿಸಲು ಶಿಕಾರಿಪುರದ ಮಾಜಿ ಶಾಸಕ ಮಹಾಲಿಂಗಪ್ಪ ತೆರಳಿದ್ದರು. ಮನೆಯೊಂದರ ಬಾಗಿಲ ಮುಂದೆ ಹೋರಿ ಬೆದರಿಸುವ ಸ್ಪರ್ಧೆ ನೋಡುತ್ತಾ ನಿಂತಿದ್ದಾಗ ಅಲ್ಲಿಗೆ ಬಂದ ಹೋರಿ, ಒಂದೆರಡು ಬಾರಿ ಮಹಾಲಿಂಗಪ್ಪ ಅವರನ್ನು ತಿವಿದು ಎತ್ತಿಹಾಕಿದೆ.

ಸ್ಥಳೀಯರು ಈ ದೃಶ್ಯವನ್ನು ತಮ್ಮ ಫೋನ್‌ಗಳಲ್ಲಿ ರೆಕಾರ್ಡ್ ಮಾಡಿದ್ದಾರೆ. ಮನೆಯೊಂದರ ಬಾಗಿಲತ್ತ ಇದ್ದ ಮಹಾಲಿಂಗಪ್ಪ ಅವರಿಗೆ ಬಿಳಿ ಬೂದು ಬಣ್ಣದ ಹೋರಿ ಎರಡು ಬಾರಿ ಕೊಂಬಿನಿಂದ ತಿವಿದಿದ್ದೆ. ತದನಂತರ ಅವರು ಅಂಗಾತ ಮಲಗಿದ್ದಾರೆ. ನಂತರ ಹೋರಿ ಅಲ್ಲಿಂದ ಬೇರೆಡೆಗೆ ಓಡಿದೆ.

ಮಾಜಿ ಶಾಸಕರಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ಅಪಾಯದಿಂದ ಪಾರಾಗಿದ್ದಾರೆ. ಕೆಲ ದಿನಗಳ ಹಿಂದೆ ಹಾವೇರಿ ಜಿಲ್ಲೆಯಲ್ಲಿ ನಡೆದ ಹೋರಿಯಲ್ಲಿ ನಾಲ್ವರು ಬಲಿಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?