ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿರುವ ಟಿಪ್ಪು ಸುಲ್ತಾನ್ (Tipu Sultan) ಸಮ್ಮರ್ ಪ್ಯಾಲೆಸ್ ನ ಗೋಡೆ ಮೇಲೆ ಕುಖ್ಯಾತ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಹೆಸರು ಬರೆಯಲಾಗಿದೆ. ಭಾರತೀಯ ಪುರಾತತ್ವ ಹಾಗೂ ಸರ್ವೇಕ್ಷಣ ಇಲಾಖೆ ಅಧೀನದ ಪ್ಯಾಲೆಸ್ನ ಮೇಲೆ ದೊಡ್ಡದಾಗಿ ಲಾರೆನ್ಸ್ ಬಿಷ್ಣೋಯ್ ಎಂದು ಬರೆಯಲಾಗಿದ್ದು ಇದು ಟಿಪ್ಪು ಅಭಿಮಾನಿಗಳು ಮತ್ತು ಪ್ರವಾಸಿಗರ ಅಸಮಾಧಾನಕ್ಕೆ ಕಾರಣವಾಗಿದೆ. ಅಲ್ಲದೆ ಆರೋಪಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.