ಪತಿಗೆ ಥಳಿಸಿದ ಪತ್ನಿ 
ರಾಜ್ಯ

ಬೆಳಗಾವಿ: ಲಾಡ್ಜ್‌ನಲ್ಲಿ ಪ್ರೇಯಸಿ ಜೊತೆ ಸರಸ; ರೆಡ್‌ಹ್ಯಾಂಡ್‌ ಆಗಿ ಪತ್ನಿ ಕೈಗೆ ಸಿಕ್ಕಿಬಿದ್ದ ಪತಿ; Video ವೈರಲ್!

ಬೆಳಗಾವಿಯ ಚಿಕ್ಕೋಡಿಯಲ್ಲಿ ಘಟನೆ ನಡೆದಿದ್ದು ಪತಿಯನ್ನು ದರದರನೆ ರಸ್ತೆಗೆ ಎಳೆದು ತಂದು ಚಪ್ಪಲಿಯಿಂದ ಸಾರ್ವಜನಿಕವಾಗಿ ಥಳಿಸಿದ್ದಾಳೆ.

ಬೆಳಗಾವಿ: ಲಾಡ್ಜ್‌ನಲ್ಲಿ ಪ್ರೇಯಸಿ ಜೊತೆ ಸರಸವಾಡುತ್ತಿದ್ದಾಗ ಪತಿಯೊಬ್ಬ ಪತ್ನಿ ಕೈಗೆ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾನೆ. ಬೆಳಗಾವಿಯ ಚಿಕ್ಕೋಡಿಯಲ್ಲಿ ಘಟನೆ ನಡೆದಿದ್ದು ಪತಿಯನ್ನು ಕಂಡ ಪತ್ನಿ ಆತನನ್ನು ದರದರನೆ ರಸ್ತೆಗೆ ಎಳೆದು ತಂದು ಚಪ್ಪಲಿಯಿಂದ ಸಾರ್ವಜನಿಕವಾಗಿ ಸ್ಥಳದಲ್ಲೇ ಥಳಿಸಿದ್ದಾಳೆ.

ಚಿಕ್ಕೋಡಿ ಪಟ್ಟಣದ ಬಸ್ ನಿಲ್ದಾಣದ ಎದುರಿನ ಲಾಡ್ಜ್‌ನಲ್ಲಿ ಚಿಕ್ಕೋಡಿ ನಿವಾಸಿ ಅವಿನಾಶ್ ಭೋಸಲೆ ಎಂಬಾತ ರೂಂ ಬುಕ್ ಮಾಡಿ ಪ್ರೇಯಸಿ ಜೊತೆ ತಂಗಿದ್ದನು. ಈ ವಿಷಯ ಗೊತ್ತಾದ ಕೂಡಲೇ ಪತ್ನಿ ಲಾಡ್ಜ್ ಗೆ ಬಂದಿದ್ದು ಪತಿಯನ್ನು ನೋಡಿ ಆಕ್ರೋಶಗೊಂಡಿದ್ದಾಳೆ. ಕೂಡಲೇ ಆತನನ್ನು ಅಲ್ಲಿಂದ ಹೊರಗೆ ಎಳೆದೊಯ್ದು ಚಪ್ಪಲಿಯಿಂದ ಥಳಿಸಿದ್ದಾಳೆ. ಈ ದೃಶ್ಯವನ್ನು ಸಾರ್ವಜನಿಕರು ನಿಂತುಕೊಂಡು ನೋಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಇನ್ನು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಹಿಳೆಯನ್ನು ಸಮಾಧಾನ ಪಡಿಸಿ ಪರಿಸ್ಥಿತಿಯನ್ನು ನಿಭಾಯಿಸಿದರು. ಸದ್ಯ ಈ ವಿಡಿಯೋ ವೈರಲ್ ಆಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಕಿನಾಡಗೆ ಅಪ್ಪಳಿಸಿದ Cyclone Montha: 3-4 ಗಂಟೆಗಳ ಕಾಲ ಭಾರಿ ಮಳೆ; ಗಂಟೆಗೆ 110 ಕಿ.ಮೀ ವೇಗ!

ಕದನ ವಿರಾಮ ಉಲ್ಲಂಘನೆ: ಗಾಜಾಪಟ್ಟಿ ಮೇಲೆ ಪ್ರಬಲ ದಾಳಿಗೆ ಆದೇಶಿಸಿದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು!

ಇಂಡಿಯಾ ಬ್ಲಾಕ್ ಪ್ರಣಾಳಿಕೆ 'ಬಿಹಾರ್ ಕಾ ತೇಜಸ್ವಿ ಪ್ರಾಣ್' ಬಿಡುಗಡೆ; ಪ್ರತಿ ಕುಟುಂಬಕ್ಕೂ ಸರ್ಕಾರಿ ನೌಕರಿ ಭರವಸೆ!

'ಕರ್ಮ ರಿಟರ್ನ್ಸ್': 'The Kerala Files' ವಿರೋಧಿಸಿದ್ದ CPM ನಾಯಕನಿಗೂ ತಟ್ಟಿದ love Jihad ಬಿಸಿ, ಪುತ್ರಿಯ video ವೈರಲ್!

ಕೇಂದ್ರ ಚುನಾವಣಾ ಆಯುಕ್ತರು ರಾಜಕೀಯ ಪುಢಾರಿ: ನಾಲಿಗೆ ಹರಿಬಿಟ್ಟ ಯತೀಂದ್ರ ಸಿದ್ದರಾಮಯ್ಯ

SCROLL FOR NEXT