ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಖಾಸಗಿ ಸಂಸ್ಥೆಗಳ ಚಟುವಟಿಕೆಗಳಿಗೆ ಅನುಮತಿ ಕಡ್ಡಾಯ: ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ; ಮೇಲ್ಮನವಿ ಸಲ್ಲಿಸಲು ಸಿಎಂ ಸೂಚನೆ

ಸರ್ಕಾರಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಸಂಘಟನೆಗಳು ಯಾವುದೇ ಚಟುವಟಿಕೆಗಳನ್ನು ನಡೆಸಲು ಪೂರ್ವಾನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಇತ್ತೀಚಿಗೆ ಆದೇಶ ಹೊರಡಿಸಿತ್ತು.

ಬೆಂಗಳೂರು: ಸಾರ್ವಜನಿಕ ಅಥವಾ ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗಳನ್ನು ನಿಯಂತ್ರಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ನೀಡಿರುವ ತಡೆಯಾಜ್ಞೆ ವಿರುದ್ಧ ಮೇಲ್ಮನವಿ ಸಲ್ಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದಾರೆ.

ಸರ್ಕಾರಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಸಂಘಟನೆಗಳು ಯಾವುದೇ ಚಟುವಟಿಕೆಗಳನ್ನು ನಡೆಸಲು ಪೂರ್ವಾನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಇತ್ತೀಚಿಗೆ ಆದೇಶ ಹೊರಡಿಸಿತ್ತು. ಈ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತಡೆ ನೀಡಿದ್ದು, ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆಯಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, 'ವಿಭಾಗೀಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸುವಂತೆ ನಾನು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಧಾರವಾಡ ಹೈಕೋರ್ಟ್ ಏಕ ಸದಸ್ಯ ಪೀಠ ತಡೆಯಾಜ್ಞೆ ನೀಡಿದೆ. ಈ ಆದೇಶದ ವಿರುದ್ಧ ನಾವು ಮೇಲ್ಮನವಿ ಸಲ್ಲಿಸುತ್ತೇವೆ' ಎಂದು ತಿಳಿಸಿದರು.

ಖಾಸಗಿ ಸಂಸ್ಥೆಗಳು, ಸಂಘಟನೆಗಳು ಮತ್ತು ಗುಂಪುಗಳು ತಮ್ಮ ಚಟುವಟಿಕೆಗಳಿಗೆ ಸರ್ಕಾರಿ ಆಸ್ತಿ ಅಥವಾ ಸಾರ್ವಜನಿಕ ಸ್ಥಳಗಳನ್ನು ಬಳಸುವ ಮೊದಲು ಅನುಮತಿ ಪಡೆಯಬೇಕೆಂದು ಸರ್ಕಾರ ಅಕ್ಟೋಬರ್ 18 ರಂದು ಆದೇಶ ಹೊರಡಿಸಿತ್ತು.

ಸರ್ಕಾರ ಹೊರಡಿಸಿರುವ ಆದೇಶವು ನಿರ್ದಿಷ್ಟವಾಗಿ ಆರ್‌ಎಸ್‌ಎಸ್ ಅನ್ನು ಹೆಸರಿಸದಿದ್ದರೂ, ಹಿಂದೂ ಬಲಪಂಥೀಯ ಸಂಘಟನೆಯ ಚಟುವಟಿಕೆಗಳನ್ನು ನಿಯಂತ್ರಿಸುವ ಗುರಿಯನ್ನು ಹೊಂದಿದೆ ಎನ್ನುವ ಮಾತುಗಳು ಕೇಳಿಬಂದಿವೆ.

ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಹುಬ್ಬಳ್ಳಿಯ 'ಪುನಃಶ್ಚೇತನ ಸೇವಾ ಸಂಸ್ಥೆ'ಯ ಅಧ್ಯಕ್ಷ ವಿನಾಯಕ ಮತ್ತು ವಿ ಕೇರ್ ಫೌಂಡೇಶನ್ ಅಧ್ಯಕ್ಷ ಗಂಗಾಧರಯ್ಯ, ಧಾರವಾಡದ ರಾಜೀವ ಮಲ್ಹಾರ ಕುಲಕರ್ಣಿ ಹಾಗೂ ಬೆಳಗಾವಿಯ ಉಮಾ ಸತ್ಯಜಿತ್ ಚೌಹಾಣ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಮಂಗಳವಾರ ಬೆಳಗ್ಗೆ ವಿಚಾರಣೆ ನಡೆಸಿತು.

ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸುವಂತೆ ಕೋರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರವನ್ನು ಅನುಸರಿಸಿ ಇತ್ತೀಚೆಗೆ ನಡೆದ ಸಚಿವ ಸಂಪುಟದ ನಿರ್ಧಾರದ ಆಧಾರದ ಮೇಲೆ ಸರ್ಕಾರ ಈ ಆದೇಶ ಹೊರಡಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT