ಕೆ. ಎಂ. ಗಾಯಿತ್ರಿ  
ರಾಜ್ಯ

ಜೋಶಿ ಅವಧಿಯಲ್ಲಿ ಹಣ, ದುರ್ಬಳಕೆ ಆರೋಪ: ಕಸಾಪಗೆ ಆಡಳಿತಾಧಿಕಾರಿ ನೇಮಕ, ಕೆ. ಎಂ. ಗಾಯಿತ್ರಿ ಅಧಿಕಾರ ಸ್ವೀಕಾರ

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಣಕಾಸಿನ ಅವ್ಯವಹಾರ ಹಾಗೂ ಅಧಿಕಾರ ದುರ್ಬಳಕೆ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸಹಕಾರ ಇಲಾಖೆ ಕಳೆದ ಜುಲೈನಲ್ಲಿ ವಿಚಾರಣಾಧಿಕಾರಿಯನ್ನು ನೇಮಕ ಮಾಡಿತ್ತು.

ಬೆಂಗಳೂರು: ಡಾ. ಮಹೇಶ್ ಜೋಶಿ ಅಧ್ಯಕ್ಷರಾಗಿದ್ದ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಣ ಹಾಗೂ ಅಧಿಕಾರ ದುರ್ಬಳಕೆ ಆರೋಪ ಹಿನ್ನೆಲೆಯಲ್ಲಿ ಸರ್ಕಾರ ಆಡಳಿತಾಧಿಕಾರಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ. ಗಾಯಿತ್ರಿ ಅವರನ್ನು ನೇಮಿಸಿದ್ದು, ಅವರಿಂದು ಕಸಾಪ ಕೇಂದ್ರ ಕಚೇರಿಗೆ ತೆರಳಿ ಅಧಿಕಾರ ಸ್ವೀಕರಿಸಿದರು.

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಣಕಾಸಿನ ಅವ್ಯವಹಾರ ಹಾಗೂ ಅಧಿಕಾರ ದುರ್ಬಳಕೆ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸಹಕಾರ ಇಲಾಖೆ ಕಳೆದ ಜುಲೈನಲ್ಲಿ ವಿಚಾರಣಾಧಿಕಾರಿಯನ್ನು ನೇಮಕ ಮಾಡಿತ್ತು.

ವಿಚಾರಣೆಗೆ ಸಂಬಂಧಿಸಿದಂತೆ ಕಸಾಪದವರು ನಿಗದಿತ ಕಾಲಾವಧಿಯಲ್ಲಿ ಹಾಜರಾಗದಿರುವುದು, ಅಗತ್ಯ ದಾಖಲಾತಿಗಳನ್ನು ಒದಗಿಸದಿರುವ ಕಾರಣ ನೀಡಿ, ಆಡಳಿತಾಧಿಕಾರಿ ನೇಮಿಸುವಂತೆ ಸಹಕಾರ ಇಲಾಖೆ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು.

ಈ ಶಿಫಾರಸ್ಸಿನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಆಡಳಿತಾಧಿಕಾರಿ ನೇಮಕ ಮಾಡಿದೆ. ಮುಂದಿನ ಮೂರು ತಿಂಗಳು ಅಥವಾ ಕಸಾಪದ ಹಣಕಾಸಿನ ಅವ್ಯವಹಾರಕ್ಕೆ ಸಂಬಂಧಿಸಿದ ವಿಚಾರಣೆ ಮುಗಿಯುವವರೆಗೂ ಆಡಳಿತಾಧಿಕಾರಿಯಾಗಿ ಗಾಯಿತ್ರಿ ಅವರು ಕಾರ್ಯ ನಿರ್ವಹಿಸಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಿರ್ಬಂಧಗಳ ಭೀತಿ: ಭಾರತಕ್ಕೆ ರಷ್ಯಾ ಕಚ್ಚಾ ತೈಲ ತರುತ್ತಿದ್ದ ಟ್ಯಾಂಕರ್ ದಿಢೀರ್ ಪಥ ಬದಲು!

'ಏಳು ಹೊಚ್ಚ ಹೊಸ ವಿಮಾನಗಳನ್ನು ಹೊಡೆದುರುಳಿಸಲಾಯಿತು, ಭಾರತ-ಪಾಕ್ ಯುದ್ಧ ತಪ್ಪಿಸಿದ್ದು ನಾನೇ' : ಟ್ರಂಪ್ ಪುನರುಚ್ಛಾರ

India vs Australia, 1st T20I: ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ; ನಿತೀಶ್ ಕುಮಾರ್ ರೆಡ್ಡಿ ಔಟ್, ಕುಲದೀಪ್ ಯಾದವ್‌ಗೆ ಸ್ಥಾನ!

ಜಪಾನ್‌ ನೂತನ ಪ್ರಧಾನಿ ಸನೆ ತಕೈಚಿ ಜೊತೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತುಕತೆ

ಹರಿಯಾಣ: ಅಂಬಾಲಾ ವಾಯುನೆಲೆಗೆ ದ್ರೌಪದಿ ಮುರ್ಮು ಭೇಟಿ; ರಾಫೆಲ್ ನಲ್ಲಿ ಹಾರಾಟ ನಡೆಸಿ ದಾಖಲೆ ನಿರ್ಮಿಸಿದ ರಾಷ್ಟ್ರಪತಿ

SCROLL FOR NEXT