ಅಂಬಿಕಾ ಸೋನಿ ಭೇಟಿ ಮಾಡಿದ ಡಿ.ಕೆ ಶಿವಕುಮಾರ್ 
ರಾಜ್ಯ

ಸಿಎಂ ಹೇಳಿದ ಮೇಲೆ ಇನ್ನೇನಿದೆ? ಹೇಗೆ ಹೇಳುತ್ತಾರೋ ಹಾಗೆ ನಡೆಯುತ್ತೇವೆ: ದೆಹಲಿ ಭೇಟಿ ಬಳಿಕ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ

ನಮ್ಮ ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯೆಯಾದ ಅಂಬಿಕಾ ಸೋನಿಯವರ ಮನೆಗೆ ಭೇಟಿ ನೀಡಿದ್ದೆ. ಅವರ ಪತಿ ತೀರಿಕೊಂಡಿದ್ದರು. ಹೀಗಾಗಿ ಸಂತಾಪ ಸೂಚಿಸಲು ಅವರ ಮನೆಗೆ ಭೇಟಿ ನೀಡಿದ್ದೆ.

ಬೆಂಗಳೂರು: ಸಿಎಂ ಹೇಳಿದ ಮೇಲೆ ಮುಗಿಯಿತು. ಅವರು ಹೇಳಿದ ಮೇಲೆ ಇನ್ನೇನಿದೆ? ಅವರು ಹೇಗೆ ಹೇಳುತ್ತಾರೋ ಹಾಗೆ ನಾವು ಕೇಳುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಸೋಮವಾರ ಪ್ರತಿಕ್ರಿಯಿಸಿದರು. ಹೈಕಮಾಂಡ್ ಒಪ್ಪಿದರೇ ನಾನೇ ಪೂರ್ಣಾವಧಿ ಮುಖ್ಯಮಂತ್ರಿ ಆಗಿರುತ್ತೇನೆ" ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು ಈ ರೀತಿ ಉತ್ತರಿಸಿದರು.

ದೆಹಲಿ ಭೇಟಿ ಬಗ್ಗೆ ಕೇಳಿದಾಗ, "ನಮ್ಮ ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯೆಯಾದ ಅಂಬಿಕಾ ಸೋನಿಯವರ ಮನೆಗೆ ಭೇಟಿ ನೀಡಿದ್ದೆ. ಅವರ ಪತಿ ತೀರಿಕೊಂಡಿದ್ದರು. ಹೀಗಾಗಿ ಸಂತಾಪ ಸೂಚಿಸಲು ಅವರ ಮನೆಗೆ ಭೇಟಿ ನೀಡಿದ್ದೆ. ನಾನು ತಿಹಾರ್ ಜೈಲಿನಲ್ಲಿದ್ದಾಗ ಅವರು ಸೋನಿಯಗಾಂಧಿ ಅವರ ಜೊತೆ ಬಂದು ನನ್ನನ್ನು ಭೇಟಿ ಮಾಡಿದ್ದರು.

ನನಗೂ ಅವರಿಗೂ ಬಹಳ ಆತ್ಮೀಯತೆ. ನಮ್ಮ ಪಕ್ಷದ ನಾಯಕರು ಅವರು. ಎಸ್.ಎಂ.ಕೃಷ್ಣ ಅವರು ಅಧಿಕಾರದಲ್ಲಿದ್ದಾಗ ನಮಗೆ ಪ್ರಧಾನ ಕಾರ್ಯದರ್ಶಿಯಾಗಿದ್ದರು. ನನ್ನನ್ನು ತಮ್ಮನಂತೆ ಕಂಡಿದ್ದರು, ನನ್ನ ಕೆಲಸಗಳಿಗೆ ಪ್ರೋತ್ಸಾಹ ನೀಡುತ್ತಿದ್ದರು. ಹಾಗಾಗಿ ನಾನು ಅವರ ಮನೆಗೆ ಭೇಟಿ ನೀಡಿದ್ದೆ ಎಂದು ತಿಳಿಸಿದರು.

ನೀವು ಹೈಕಮಾಂಡ್ ಭೇಟಿಗೆ ದಿಲ್ಲಿಗೆ ಹೋಗಿದ್ದಿರಿ ಎಂದು ಚರ್ಚೆಯಾಗುತ್ತಿದೆಯಲ್ಲ ಎಂದು ಕೇಳಿದಾಗ, "ನಾನು ದಿಲ್ಲಿಗೆ ಹೋಗಿದ್ದ ವಿಷಯ, ಕೆಲಸದ ಬಗ್ಗೆ ಮಾತ್ರ ಹೇಳಬಲ್ಲೆ. ಹೈಕಮಾಂಡ್ ಭೇಟಿ ಬಗ್ಗೆ ನೀವು ಮಾಧ್ಯಮದವರು, ಸಾರ್ವಜನಿಕರು, ಇನ್ನೂ ಬೇರೆಯವರು ಏನು ಬೇಕಾದರೂ ಚರ್ಚೆ ಮಾಡಿಕೊಳ್ಳಿ. ಯಾರು ಬೇಕಾದರೂ ಮಾತಾಡಿಕೊಳ್ಳಲಿ. ನನಗದು ಸಂಬಂಧ ಪಡದ ವಿಷಯ" ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಿರ್ಬಂಧಗಳ ಭೀತಿ: ಭಾರತಕ್ಕೆ ರಷ್ಯಾ ಕಚ್ಚಾ ತೈಲ ತರುತ್ತಿದ್ದ ಟ್ಯಾಂಕರ್ ದಿಢೀರ್ ಪಥ ಬದಲು!

'ಏಳು ಹೊಚ್ಚ ಹೊಸ ವಿಮಾನಗಳನ್ನು ಹೊಡೆದುರುಳಿಸಲಾಯಿತು, ಭಾರತ-ಪಾಕ್ ಯುದ್ಧ ತಪ್ಪಿಸಿದ್ದು ನಾನೇ' : ಟ್ರಂಪ್ ಪುನರುಚ್ಛಾರ

ಅಲ್ ಖೈದಾ ಜೊತೆ ನಂಟು ಹೊಂದಿದ್ದ ಪುಣೆ ಟೆಕ್ಕಿ ಬಂಧನ; ಈತನಿಗೆ ಬಿನ್ ಲ್ಯಾಡನ್ನೇ ಆದರ್ಶ ವ್ಯಕ್ತಿ!

India vs Australia, 1st T20I: ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ; ನಿತೀಶ್ ಕುಮಾರ್ ರೆಡ್ಡಿ ಔಟ್, ಕುಲದೀಪ್ ಯಾದವ್‌ಗೆ ಸ್ಥಾನ!

'ರೂಬಿ' ಮೂಲಕ ಕನ್ನಡ ಚಿತ್ರರಂಗಕ್ಕೆ ಹಿಮೇಶ್ ರೇಶಮಿಯಾ ಎಂಟ್ರಿ

SCROLL FOR NEXT