ಹಿಮಂತ ಶರ್ಮಾ ಮತ್ತು ಪ್ರಿಯಾಂಕ್ ಖರ್ಗೆ 
ರಾಜ್ಯ

ಥರ್ಡ್‌ ಕ್ಲಾಸ್‌ ವಂಚಕನಿಂದ ನಾವು ಇನ್ನೇನು ನಿರೀಕ್ಷಿಸಲು ಸಾಧ್ಯ: ಅಸ್ಸಾಂ CM ಹಿಮಂತ ಶರ್ಮಾಗೆ ಪ್ರಿಯಾಂಕ್ ತಪರಾಕಿ; Video

ದೊಡ್ಡ ಕೈಗಾರಿಕೆಗಳ ಸ್ಥಾಪಿಸಲು ಈಶಾನ್ಯ ರಾಜ್ಯಗಳಲ್ಲಿ ಪ್ರತಿಭೆಗಳ ಕೊರೆತೆಯಿದೆ ಎಂಬ ಪ್ರಿಯಾಂಕ್‌ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಬಿಸ್ವಾ, ಪ್ರಿಯಾಂಕ್ ಅವರನ್ನು ‘ಫಸ್ಟ್ ಕ್ಲಾಸ್ ಮುಠ್ಠಾಳ’ ಎಂದು ಕರೆದಿದ್ದರು.

ಬೆಂಗಳೂರು: ತಮ್ಮನ್ನು ಮೊದಲ ದರ್ಜೆಯ ಮುಠ್ಠಾಳ ಎಂದು ಕರೆದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಒಬ್ಬ ಮೂರನೇ ದರ್ಜೆ ವಂಚಕ ಎಂದು ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.

ಅಸ್ಸಾಂನಲ್ಲಿ ಸೆಮಿಕಂಡಕ್ಟರ್‌ ಘಟಕ ಸ್ಥಾಪನೆಗೆ ಅನುಮತಿ ದೊರೆತ ವಿಚಾರವಾಗಿ ಇಬ್ಬರು ನಾಯಕರ ನಡುವೆ ವಾಗ್ವಾದ ನಡೆಯುತ್ತಿದ್ದು, ವೈಯಕ್ತಿಕ ನಿಂದನೆಗೆ ಇಳಿಯುವವರೆಗೆ ತಲುಪಿದೆ. ದೊಡ್ಡ ಕೈಗಾರಿಕೆಗಳ ಸ್ಥಾಪಿಸಲು ಈಶಾನ್ಯ ರಾಜ್ಯಗಳಲ್ಲಿ ಪ್ರತಿಭೆಗಳ ಕೊರೆತೆಯಿದೆ ಎಂಬ ಪ್ರಿಯಾಂಕ್‌ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಬಿಸ್ವಾ, ಪ್ರಿಯಾಂಕ್ ಅವರನ್ನು ‘ಫಸ್ಟ್ ಕ್ಲಾಸ್ ಮುಠ್ಠಾಳ’ ಎಂದು ಕರೆದಿದ್ದರು.

ಈ ಹೇಳಿಕೆಗೆ ಬುಧವಾರ ಪ್ರತಿಕ್ರಿಯಿಸಿರುವ ಪ್ರಿಯಾಂಕ್‌ ಖರ್ಗೆ, ಅಸ್ಸಾಂ ಸಿಎಂ ಒಬ್ಬ ‘ಮೂರನೇ ದರ್ಜೆ ವಂಚಕ’ ಎಂದು ಲೇವಡಿ ಮಾಡಿದ್ದಾರೆ. ಬಿಸ್ವಾ ಅವರ ಭಾಷೆ ಅವರ ಹತಾಶೆಯನ್ನು ತೋರಿಸುತ್ತದೆ. ಇದು ಅವರ ವರ್ಗದ ವಿಶೇಷ ಹಕ್ಕು ಮತ್ತು ಅವರು ಅಧಿಕಾರದಲ್ಲಿರುವುದರಿಂದ ಪಡೆದ ವಿಶೇಷ ಹಕ್ಕನ್ನು ತೋರಿಸುತ್ತದೆ. ಇಲ್ಲದಿದ್ದರೆ, ಇದರಲ್ಲಿ ಏನೂ ಇಲ್ಲ, ಮೂರನೇ ದರ್ಜೆಯ ವಂಚಕನಿಂದ ನಾವು ಇನ್ನೇನು ನಿರೀಕ್ಷಿಸಬಹುದು ಎಂದು ಪ್ರಿಯಾಂಕ್‌ ತಿರುಗೇಟು ನೀಡಿದ್ದಾರೆ.

ಅವರು ನನ್ನ ಹೇಳಿಕೆಯನ್ನು ತಿರುಚಿ ರಾಜಕೀಯ ಮಾಡುತ್ತಿದ್ದಾರೆ ಎಂಬುದು ಇದರಿಂದ ಸ್ಪಷ್ಟವಾಗುತ್ತಿದೆ. ತರಬೇತಿ ಪಡೆದುಕೊಳ್ಳಲು ಅನೇಕ ಅಸ್ಸಾಮಿಗರು ಬೆಂಗಳೂರಿಗೆ ಬರುತ್ತಿದ್ದಾರೆ ಎಂದು ಅವರೇ(ಬಿಸ್ವಾ) ಟ್ವೀಟ್ ಮಾಡಿದ್ದರು. ನಾವು ಅವರನ್ನು ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ.

ಪ್ರಿಯಾಂಕ್ ಖರ್ಗೆ ಅವರು ಭಾನುವಾರದಂದು, "ಗುಜರಾತ್ ಮತ್ತು ಅಸ್ಸಾಂನಲ್ಲಿ ಏನಿದೆ? ಅಲ್ಲಿ ಪ್ರತಿಭೆ ಇದೆಯೇ?" ಎಂದು ಪ್ರಶ್ನಿಸುವ ಮೂಲಕ ವಿವಾದ ಸೃಷ್ಟಿಸಿದ್ದರು. ಸೆಮಿಕಂಡಕ್ಟರ್ ಉದ್ಯಮಗಳನ್ನು ಬೆಂಗಳೂರಿನ ಬದಲು ಈ ರಾಜ್ಯಗಳಲ್ಲಿ ಸ್ಥಾಪಿಸುವ ಸರ್ಕಾರದ ನಿರ್ಧಾರವನ್ನು ಅವರು ಪ್ರಶ್ನಿಸಿದ್ದರು. ಅವರ ಈ ಹೇಳಿಕೆಗಳು ರಾಜಕೀಯ ವಿರೋಧಿಗಳಿಂದ ತೀವ್ರ ಟೀಕೆಗೆ ಗುರಿಯಾಗಿದ್ದು, ಇತರ ರಾಜ್ಯಗಳಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!