ಬಸವರಾಜ ಬೊಮ್ಮಾಯಿ 
ರಾಜಕೀಯ

ಕಾಂಗ್ರೆಸ್ಸಿನವರಿಗೆ ಕರ್ನಾಟಕ ಹಿಂಡುವ ಆಕಳು‌; CMಗೆ ಸಚಿವ ಸಂಪುಟದ ಮೇಲೆ ನಿಯಂತ್ರಣವಿಲ್ಲ: ಬಸವರಾಜ ಬೊಮ್ಮಾಯಿ

ನವೆಂಬರ್ ಕ್ರಾಂತಿ ಭ್ರಾಂತಿ ನೋಡಿದರೆ ಸರ್ಕಾರದ ಮೇಲೆ ಕರ್ನಾಟಕದ ಜನತೆಗೆ ಭ್ರಾಂತಿಯಾಗುತ್ತಿದೆ. ಕಾಂಗ್ರೆಸ್ಸಿನವರು ಆಡಳಿತವನ್ನೇ ಮರೆತುಬಿಟ್ಟಿದ್ದಾರೆ. ಅಭಿವೃದ್ಧಿಯಂತೂ ಮರೀಚಿಕೆಯಾಗಿದೆ. ಹಣಕಾಸು ವ್ಯವಸ್ಥೆ ಸರಿ ಇಲ್ಲ.

ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟ ಸದಸ್ಯರು ಹಾಗೂ ಅಧಿಕಾರಿಗಳ ಮೇಲೆ ತಮ್ಮ ನಿಯಂತ್ರಣ ಕಳೆದುಕೊಂಡಿದ್ದಾರೆ. ಎರಡೂವರೆ ವರ್ಷದಲ್ಲಿ ಒಂದೂ ಅಭಿವೃದ್ಧಿ ಕೆಲಸವಾಗಿಲ್ಲ. ಯಾವ ಪುರುಷಾರ್ಥಕ್ಕೆ ಈ ಎರಡೂವರೆ ವರ್ಷ ಅವಧಿ ಮುಗಿಸಿದರು ಎಂಬುದು ಜನತೆಗೆ ಹೇಳಬೇಕು ಎಂದರು.

ಕಾಂಗ್ರೆಸ್ ಹೈಕಮಾಂಡ್ ಎಲ್ಲಾ ಪಕ್ಷದ ಸದಸ್ಯರಿಗೆ ಸ್ಪಷ್ಟ ಸೂಚನೆಗಳನ್ನು ನೀಡಿದ್ದು, ನಾಯಕತ್ವ ಬದಲಾವಣೆಯ ಬಗ್ಗೆ ಮಾತನಾಡದಂತೆ ಕೇಳಿದೆ. ಆದರೆ ಸಚಿವರು ಮತ್ತು ಇತರ ನಾಯಕರು ಮೌನವಾಗಿದ್ದಾರೆ ಕೆಲವರು ಈ ವಿಷಯದ ಬಗ್ಗೆ ಮಾತನಾಡುತ್ತಲೇ ಇದ್ದಾರೆ ಎಂದು ಅವರು ಹೇಳಿದರು.

ನವೆಂಬರ್ ಕ್ರಾಂತಿ ಭ್ರಾಂತಿ ನೋಡಿದರೆ ಸರ್ಕಾರದ ಮೇಲೆ ಕರ್ನಾಟಕದ ಜನತೆಗೆ ಭ್ರಾಂತಿಯಾಗುತ್ತಿದೆ. ಕಾಂಗ್ರೆಸ್ಸಿನವರು ಆಡಳಿತವನ್ನೇ ಮರೆತುಬಿಟ್ಟಿದ್ದಾರೆ. ಅಭಿವೃದ್ಧಿಯಂತೂ ಮರೀಚಿಕೆಯಾಗಿದೆ. ಹಣಕಾಸು ವ್ಯವಸ್ಥೆ ಸರಿ ಇಲ್ಲ.

ಹೀಗಾಗಿ ಡ್ರಾಮಾ ಮಾಡಿಕೊಂಡು ಹೊರಟಿದ್ದಾರೆ. ಸಿಎಂ ಸಿದ್ದರಾಮಯ್ಯ ಒಂದು ಹೇಳಿದರೆ, ಡಿಸಿಎಂ ಡಿ.ಕೆ. ಶಿವಕುಮಾರ್ ಅದಕ್ಕೆ ತದ್ವಿರುದ್ಧವಾಗಿ ಹೇಳುತ್ತಾರೆ. ಮಂತ್ರಿಗಳು ಇನ್ನೊಂದು ರೀತಿಯ ಹೇಳಿಕೆ ನೀಡುತ್ತಾರೆ ಎಂದರು.

ಬಿಹಾರ ಚುನಾವಣೆಗೆ ರಾಜ್ಯದಿಂದ ಹಣ ಸಂದಾಯವಾಗುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ರಾಜ್ಯದಲ್ಲಿದ್ದಾಗ ಯಾವಾಗಲೂ ಇಲ್ಲಿಂದ ಹಣ ಕಳಿಸುವ ಪರಂಪರ ಇದೆ. ತೆಲಂಗಾಣ ರಾಜ್ಯದಲ್ಲೂ ದುಡ್ಡಿಲ್ಲ. ಕಾಂಗ್ರೆಸ್ಸಿನವರಿಗೆ ಕರ್ನಾಟಕ ಹಿಂಡುವ ಆಕಳಾಗಿದೆ‌ ಎಂದರು.

ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎಂಬ ಕೂಗು ಕೇಳಿ ಬರುತ್ತಿರುವ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ದಲಿತ ಸಿಎಂ ಆಗಲಿ ಅದಕ್ಕೆ ಸಂತೋಷ. ಆದರೆ, ಇದ್ದ ಸಿಎಂ ಅವರೇ ಕೆಲಸ ಮಾಡುತ್ತಿಲ್ಲ. ಕರ್ನಾಟಕದ ಹಣೆಬರಹ ಕಾಂಗ್ರೆಸ್‌ ಕೈಯಲ್ಲಿ ಎಂದೆಂದೂ ಉದ್ಧಾರವಾಗಲು ಸಾಧ್ಯವಿಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video: 17 ಮಕ್ಕಳು ಸೇರಿ 19 ಜನರನ್ನು ಒತ್ತೆಯಾಳಾಗಿ ಇಟ್ಟುಕೊಂಡಿದ್ದ ವ್ಯಕ್ತಿ ಮುಂಬೈ ಪೊಲೀಸ್ ಗುಂಡಿಗೆ ಬಲಿ!

2025 ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ನಟ ಪ್ರಕಾಶ್‌ ರಾಜ್‌ ಸೇರಿ 70 ಮಂದಿ ಆಯ್ಕೆ

Bihar Poll: ನಿತೀಶ್ ಕುಮಾರ್ ಸಿಎಂ ಆಗಲ್ವಾ? ದೊಡ್ಡ ಸುಳಿವು ನೀಡಿದ ಅಮಿತ್ ಶಾ!

ಡಿಕೆಶಿ, ತೇಜಸ್ವಿ ಸೂರ್ಯ ಜಟಾಪಟಿ; ಬೆಂಗಳೂರಿನಲ್ಲಿ ಟನಲ್ ರಸ್ತೆ ಬಗ್ಗೆ ಕೇಂದ್ರ ಸಚಿವ ಖಟ್ಟರ್ ಹೇಳಿದ್ದೇನು?

ಮಹಾರಾಷ್ಟ್ರದ ಎಲ್ಲಾ ಶಾಲೆಗಳಿಗೆ 'ವಂದೇ ಮಾತರಂ' ಪೂರ್ಣ ಹಾಡಲು ಸೂಚನೆ

SCROLL FOR NEXT