ನಮ್ಮ ಮೆಟ್ರೋ ಹಳದಿ ಮಾರ್ಗ 
ರಾಜ್ಯ

ನವೆಂಬರ್ 1 ರಿಂದ ಪ್ರಯಾಣಿಕರಿಗೆ ಸಿಹಿಸುದ್ದಿ; ಹಳದಿ ಮಾರ್ಗದ ಬಗ್ಗೆ ಮಹತ್ವದ ಮಾಹಿತಿ ನೀಡಿದ BMRCL!

'ಇದರಿಂದಾಗಿ ಪ್ರಯಾಣಿಕರಿಗೆ ಕಡಿಮೆ ಅವಧಿಯಲ್ಲಿ ಸುಗಮ ಮತ್ತು ನಿರಂತರ ಸೇವೆ ನೀಡಲು ಸಹಾಯಕವಾಗಲಿದೆ. ಈ ಬದಲಾವಣೆಯು ಎಲ್ಲ ದಿನಗಳಿಗೆ ಅನ್ವಯವಾಗುತ್ತದೆ'.

ಬೆಂಗಳೂರು: 70ನೇ ಕನ್ನಡ ರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ, ನವೆಂಬರ್ 1 ರಿಂದ ಹಳದಿ ಮಾರ್ಗದಲ್ಲಿ ಐದನೇ ಮೆಟ್ರೋ ರೈಲು ಸೇವೆ ಆರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ಶುಕ್ರವಾರ ಘೋಷಿಸಿದೆ.

ಈ ಹೊಸ ರೈಲಿನ ಸೇರ್ಪಡೆಯೊಂದಿಗೆ, ಹಳದಿ ಮಾರ್ಗದಲ್ಲಿ ಪೀಕ್ ಅವರ್‌ನಲ್ಲಿ ರೈಲುಗಳ ಆವರ್ತನವು 19 ನಿಮಿಷಗಳಿಗೆ ಬದಲಾಗಿ ಪ್ರತಿ 15 ನಿಮಿಷಕ್ಕೆ ರೈಲುಗಳು ಚಲಿಸಲಿವೆ ಎಂದು ಅದು ಹೇಳಿದೆ.

'ಇದರಿಂದಾಗಿ ಪ್ರಯಾಣಿಕರಿಗೆ ಕಡಿಮೆ ಅವಧಿಯಲ್ಲಿ ಸುಗಮ ಮತ್ತು ನಿರಂತರ ಸೇವೆ ನೀಡಲು ಸಹಾಯಕವಾಗಲಿದೆ. ಈ ಬದಲಾವಣೆಯು ಎಲ್ಲ ದಿನಗಳಿಗೆ ಅನ್ವಯವಾಗುತ್ತದೆ' ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಹೇಳಿಕೆಯಲ್ಲಿ ತಿಳಿಸಿದೆ.

ಆರ್‌ವಿ ರಸ್ತೆ ಮತ್ತು ಬೊಮ್ಮಸಂದ್ರ ಟರ್ಮಿನಲ್‌ಗಳಿಂದ ಹೊರಡುವ ಮೊದಲ ಮತ್ತು ಕೊನೆಯ ರೈಲುಗಳ ಸಮಯಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಪ್ರಯಾಣಿಕರು ಈ ಸುಧಾರಿತ ಮೆಟ್ರೋ ಸೇವೆಗಳ ಸದುಪಯೋಗ ಪಡೆಯುವಂತೆ ಎಂದು ನಿಗಮ ಸೂಚಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel