ಜಾತಿ ಗಣತಿ (ಸಂಗ್ರಹ ಚಿತ್ರ) 
ರಾಜ್ಯ

ಜಾತಿಗಣತಿ: ಮನೆ ಮನೆ ಸಮೀಕ್ಷೆಗಿಂದು ತೆರೆ; Online ಸಮೀಕ್ಷೆ ನವೆಂಬರ್ 10 ರವರೆಗೆ ವಿಸ್ತರಣೆ..!

ಹೆಚ್ಚಿನ ಮಾಹಿತಿಗೆ 80507 70004 ಸಂಖ್ಯೆಯ ಸಹಾಯವಾಣಿಗೆ ಕರೆ ಮಾಡಬಹುದು ಎಂದು ಆಯೋಗ ತಿಳಿಸಿದೆ.

ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ 22ರಿಂದ ಆರಂಭವಾಗಿದ್ದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮನೆ ಮನೆ ಗಣತಿ ಕಾರ್ಯಕ್ಕೆ ಶುಕ್ರವಾರ ತೆರೆಬೀಳಲಿದ್ದು, ಗಣತಿಯಲ್ಲಿ ಭಾಗವಹಿಸಲು ಸಾಧ್ಯವಾಗದೆ ಇರುವವರಿಗಾಗಿ ನವೆಂಬರ್ 10ರ ವರೆಗೆ ಆನ್ಲೈನ್ ಸಮೀಕ್ಷೆ ಅವಧಿ ವಿಸ್ತರಣೆ ಮಾಡಲಾಗಿದೆ.

ಸರ್ಕಾರದ ಆದೇಶ ಸಂಖ್ಯೆ: ಹಿಂವಕ 289 ಬಿಸಿಎ 2025, ದಿನಾಂಕ:13.08.2025 ರ ಅನ್ವಯ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜನರ (ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ) ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ದಿನಾಂಕ: 22.09.2025 ರಿಂದ ಪ್ರಾರಂಭಿಸಲಾಗಿದ್ದು, ದಿನಾಂಕ:31.10.2025 ರಂದು ಮುಕ್ತಾಯಗೊಳ್ಳಲಿದೆ.

ವಿವಿಧ ಕಾರಣಗಳಿಂದಾಗಿ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವವರಿಗೆ ಅವಕಾಶ ನೀಡುವ ಹಿನ್ನೆಲೆಯಲ್ಲಿ https://kscbcselfdeclaration.karnataka.gov.in Online ಮೂಲಕ ಸ್ವಯಂ ಪಾಲ್ಗೊಳ್ಳುವ ಅವಧಿಯನ್ನು ದಿನಾಂಕ: 10.11.2025 ರ ವರೆಗೆ ಅಂತಿಮವಾಗಿ ವಿಸ್ತರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗೆ 80507 70004 ಸಂಖ್ಯೆಯ ಸಹಾಯವಾಣಿಗೆ ಕರೆ ಮಾಡಬಹುದು ಎಂದು ಆಯೋಗ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಾತಿ ಗಣತಿ: ಮನೆ ಮನೆ ಸಮೀಕ್ಷೆ ಮುಕ್ತಾಯ; ರಾಜ್ಯದ ಒಟ್ಟು ಜನಸಂಖ್ಯೆ ಎಷ್ಟು ಗೊತ್ತಾ?

ದೇಶದ ಮೊದಲ 'ಕಡುಬಡತನ ಮುಕ್ತ' ರಾಜ್ಯ: ಘೋಷಣೆಗೆ ಕೇರಳ ಸಜ್ಜು, ಆರ್ಥಿಕ ತಜ್ಞರ ಆಕ್ಷೇಪವೇನು?

ಸಿಎಂ ಆಗಿ ಡಿಕೆಶಿ ನವೆಂಬರ್ 21ಕ್ಕೆ ಪ್ರಮಾಣ ವಚನ: ವರದಿಗಾರರ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಸಿಡಿಮಿಡಿ!

'ಬೇರೆಯವರಿಗೆ ಗುರಿಯಿಟ್ಟ ಗುಂಡು': ಸೌದಿಯಲ್ಲಿ ಸಾಯುವ ಮುನ್ನ ಜಾರ್ಖಂಡ್ ವ್ಯಕ್ತಿ ತನ್ನ ಹೆಂಡತಿಗೆ ಕಳುಹಿಸಿದ ಕೊನೆಯ ಸಂದೇಶ!

'ಆ ಘಟನೆ' ನೆನೆದರೆ ಈಗಲೂ ಮೈ ನಡಗುತ್ತದೆ: ಹಿಂದೂಗಳಿಂದ ನನ್ನ ಕುಟುಂಬದ ರಕ್ಷಣೆ- ಕೇಂದ್ರ ಸಚಿವ ಹರ್ದಿಪ್ ಸಿಂಗ್ ಪುರಿ

SCROLL FOR NEXT