ಬೆಂಗಳೂರು: ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬೆಂಗಳೂರಿನ ವಿಶ್ವವಿದ್ಯಾಲಯದ ಮಾಜಿ ಕುಲಸಚಿವ ಪ್ರೊ. ಬಿ.ಸಿ ಮೈಲಾರಪ್ಪ ಅವರನ್ನು ಬಸವೇಶ್ವರನಗರದ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಮಹಿಳೆ ನೀಡಿದ ದೂರು ಆಧಾರದಲ್ಲಿ ಬಿ.ಸಿ ಮೈಲಾರಪ್ಪ ಅವರನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸಂತ್ರಸ್ತೆ 2022ರ ನವೆಂಬರ್ ನಲ್ಲಿ ಅಂದಿನ ಬೆಂಗಳೂರು ವಿ.ವಿ ನಿರ್ದೇಶಕರಾದ ಪ್ರೊ. ಬಿ.ಸಿ ಮೈಲಾರಪ್ಪ ನಡೆಸುತ್ತಿದ್ದ ಕರ್ನಾಟಕ ರಾಜ್ಯ ಹರಿಜನ ಸೇವಕ ಸಂಘದಲ್ಲಿ ಕೆಲಸಕ್ಕೆ ಸೇರಿದ್ದರು. ಕೆಲಸಕ್ಕೆ ಸೇರಿದ ಮೇಲೆ ಮೈಲಾರಪ್ಪ ಮಹಿಳೆಗೆ ಲೈಂಗಿಕ ಸಂಪರ್ಕ ಬೆಳೆಸುವಂತೆ ಒತ್ತಡ ಏರುತ್ತಿದ್ದರು. ಹೀಗಾಗಿ ಮಹಿಳೆ ಪೊಲೀಸರಿಗೆ ದೂರು ನೀಡಿದ್ದರು.