ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬರಹಗಾರ್ತಿ, ಕಾರ್ಯಕರ್ತೆ ಮತ್ತು ವಕೀಲೆ ಬಾನು ಮುಷ್ತಾಕ್ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದಾರೆ ಎಂಬ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಪುರುಷೋತ್ತಮ ಆಚಾರ್ಯ ಎಂದು ಗುರ್ತಿಸಲಾಗಿದೆ.
ವ್ಯಕ್ತಿ ಫೇಸ್‌ಬುಕ್ ಖಾತೆಯ ಮೂಲಕ ಬಾನು ಮುಷ್ತಾಕ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಆಕ್ಷೇಪಾರ್ಹ ವಿಷಯವನ್ನು ಪೋಸ್ಟ್ ಮಾಡಿದ್ದಾರೆನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ವ್ಯಕ್ತಿಯ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) (ಅಪರಾಧ ಸಂಖ್ಯೆ 112/2025) ಸೆಕ್ಷನ್ 296, 196, ಮತ್ತು 354 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಇದಲ್ಲದೆ,ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ನ ಸೆಕ್ಷನ್ 353(3) ಮತ್ತು 353(4) (ಅಪರಾಧ ಸಂಖ್ಯೆ 55/2025) ಅಡಿಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.
ಪ್ರಕರಣ ದಾಖಲಾಗುತ್ತಿದ್ದಂತೆಯೇ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ಕೋಶದ ಸಹಾಯದಿಂದ, ಸುಳ್ಯ ಪೊಲೀಸರು ವ್ಯಕ್ತಿಯನ್ನು ಬಂಧನಕ್ಕೊಳಪಡಿಸಿದ್ದಾರೆ.