ರಾಜ್ಯ ಸಚಿವ ಸಂಪುಟ ಸಭೆಯ ಸಾಂದರ್ಭಿಕ ಚಿತ್ರ 
ರಾಜ್ಯ

ವಯನಾಡ್ ಪ್ರವಾಸೋದ್ಯಮದ ಪರ ಜಾಹಿರಾತು: ವರದಿ ನೀಡುವಂತೆ KSTDC ಗೆ ರಾಜ್ಯ ಸರ್ಕಾರ ಸೂಚನೆ

ವಿವರಣೆ ನೀಡುವಂತೆ ಕೆಎಸ್‌ಟಿಡಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ. ಅಧಿಕಾರಿಗಳು ವಿವರಣೆ ನೀಡಿದ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು.

ಬೆಂಗಳೂರು: ವಯನಾಡ್ ಪ್ರವಾಸೋದ್ಯಮದ ಪರವಾಗಿ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಜಾಹೀರಾತು ನೀಡಿರುವುದು ರಾಜ್ಯಾದ್ಯಂತ ವ್ಯಾಪಕ ವಿರೋಧಕ್ಕೆ ಕಾರಣವಾಗಿದ್ದು, ಇದರ ಬೆನ್ನಲ್ಲೇ ವರದಿ ನೀಡುವಂತೆ ಕೆಎಸ್‌ಟಿಡಿಸಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಪ್ರವಾಸೋದ್ಯಮ ಸಚಿವ ಎಚ್‌ಕೆ ಪಾಟೀಲ್ ಅವರು ಪ್ರತಿಕ್ರಿಯಿಸಿ, ವಿವರಣೆ ನೀಡುವಂತೆ ಕೆಎಸ್‌ಟಿಡಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ. ಅಧಿಕಾರಿಗಳು ವಿವರಣೆ ನೀಡಿದ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ದಕ್ಷಿಣ ಭಾರತದ ಇತರ ರಾಜ್ಯಗಳಿಗೆ ಹೋಲಿಸಿದರೆ ವಯನಾಡನ್ನು ಪ್ರಚಾರ ಮಾಡುವಲ್ಲಿ ವಿಶೇಷ ಆಸಕ್ತಿ ತೋರಲಾಗುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿ, ಈ ಪ್ರಶ್ನೆ ಉದ್ಭವಿಸುವುದೇ ಇಲ್ಲ. ಜಾಹೀರಾತನ್ನು ಯಾವ ಕಾರಣಕ್ಕೆ ನೀಡಲಾಗಿದೆ. ಜಾಹೀರಾತು ಸಂಸ್ಥೆ ಹೀಗೇಕೆ ಮಾಡಿತು ಎಂಬುದನ್ನು ತಿಳಿದುಕೊಳ್ಳಬೇಕಾಗಿದೆ. ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ತಿಳಿಸಿದರು.

ಕೆಎಸ್‌ಟಿಡಿಸಿ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾತನಾಡಿ, ಇದು ಪ್ರವಾಸೋದ್ಯಮ ಪ್ಯಾಕೇಜ್ ಅನ್ನು ಪ್ರಚಾರ ಮಾಡುವ ಜಾಹೀರಾತಾಗಿದೆ. 2019, 2020, 2021 ಮತ್ತು ಅದರ ನಂತರವೂ ಈ ರೀತಿಯ ಜಾಹೀರಾತು ನೀಡಲಾಗಿದೆ ಎಂದು ಹೇಳಿದರು.

ನಾವು ಮಹಾರಾಷ್ಟ್ರ, ಶಿರಡಿ, ಪಾಂಡಪುರ, ರಾಮೇಶ್ವರಂ ಮತ್ತು ಊಟಿ ಸೇರಿದಂತೆ ಇತರ ಪ್ಯಾಕೇಜ್‌ಗಳನ್ನು ಪ್ರಚಾರ ಮಾಡುತ್ತೇವೆ. ಪ್ರವಾಸೋದ್ಯಮವನ್ನು ಉತ್ತೇಜಿಸಲು ಇದನ್ನು ಮಾಡಲಾಗಿದೆ. ಇದು ಹೊಸದೇನಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಾತಿ ಗಣತಿ: ಮನೆ ಮನೆ ಸಮೀಕ್ಷೆ ಮುಕ್ತಾಯ; ರಾಜ್ಯದ ಒಟ್ಟು ಜನಸಂಖ್ಯೆ ಎಷ್ಟು ಗೊತ್ತಾ?

ದೇಶದ ಮೊದಲ 'ಕಡುಬಡತನ ಮುಕ್ತ' ರಾಜ್ಯ: ಘೋಷಣೆಗೆ ಕೇರಳ ಸಜ್ಜು, ಆರ್ಥಿಕ ತಜ್ಞರ ಆಕ್ಷೇಪವೇನು?

ಸಿಎಂ ಆಗಿ ಡಿಕೆಶಿ ನವೆಂಬರ್ 21ಕ್ಕೆ ಪ್ರಮಾಣ ವಚನ: ವರದಿಗಾರರ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಸಿಡಿಮಿಡಿ!

ಕುಡಚಿ ಕಾಂಗ್ರೆಸ್ MLA​ ಪುತ್ರನಿಗೆ ಡಿಕೆ ಶಿವಕುಮಾರ್ ಹೆಸರು ನಾಮಕರಣ! ವಿಶೇಷ ಏನು ಗೊತ್ತಾ?

ಬೆಂಗಳೂರು: ಲವರ್ ಜೊತೆ ಸೇರಿ 'ತಾಯಿಯನ್ನೇ ಕೊಂದು' ಆತ್ಮಹತ್ಯೆಯ ನಾಟಕವಾಡಿದ್ದ ಮಗಳು! ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು ಹೇಗೆ ಗೊತ್ತಾ?

SCROLL FOR NEXT