ಸಾಂದರ್ಭಿಕ ಚಿತ್ರ 
ರಾಜ್ಯ

ಬಾಗಲಕೋಟೆ: 7ನೇ ತರಗತಿ ವಿದ್ಯಾರ್ಥಿನಿ ಎರಡು ತಿಂಗಳ ಗರ್ಭಿಣಿ; 8ನೇ ಕ್ಲಾಸ್ ಬಾಲಕನ ವಿರುದ್ಧ ಪೋಕ್ಸೋ ಕಾಯ್ದೆ ದಾಖಲು

ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆಗೆ, ಇಳಕಲ್ ಗ್ರಾಮೀಣ ಪೊಲೀಸರು ಅದೇ ಶಾಲೆಯ 8 ನೇ ತರಗತಿ ವಿದ್ಯಾರ್ಥಿನಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲ್ಲೂಕಿನ ಕಂದಗಲ್ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 7 ನೇ ತರಗತಿ ವಿದ್ಯಾರ್ಥಿನಿ ಎರಡು ತಿಂಗಳ ಗರ್ಭಿಣಿಯಾಗಿದ್ದಾಳೆ.

ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆಗೆ, ಇಳಕಲ್ ಗ್ರಾಮೀಣ ಪೊಲೀಸರು ಅದೇ ಶಾಲೆಯ 8 ನೇ ತರಗತಿ ವಿದ್ಯಾರ್ಥಿನಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಶಾಲಾ ಆವರಣದಲ್ಲಿ ಮತ್ತು ಲೋಕಾಪುರ ಬಳಿಯ ಹೊಲದಲ್ಲಿ ಬಾಲಕಿಯೊಂದಿಗೆ ಕೆಲವು ಬಾರಿ ದೈಹಿಕ ಸಂಪರ್ಕ ಹೊಂದಿದ್ದ ಎನ್ನಲಾಗಿದೆ.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಕರ್ನಾಟಕ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಶಶಿಧರ್ ಕೊಸಂಬೆ ಈ ಸಂಬಂಧ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.

ಬಾಲಕ ಅಪ್ರಾಪ್ತ ವಯಸ್ಕನಾಗಿರುವುದರಿಂದ, ಅವನನ್ನು ಕಾನೂನಿನೊಂದಿಗೆ ಸಂಘರ್ಷದಲ್ಲಿರುವ ಮಗು ಎಂದು ಪರಿಗಣಿಸಲಾಗುವುದು. ಶಶಿಧರ್ ಅವರು ಈಗಾಗಲೇ ಬಾಗಲಕೋಟೆ ಎಸ್‌ಪಿ ಜೊತೆ ಮಾತನಾಡಿದ್ದು, ಸೋಮವಾರ ಬಾಲಕನನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸುವಂತೆ ಕೇಳಿಕೊಂಡಿದ್ದಾರೆ. ನಂತರ, ಬಾಲಕನನ್ನು ವೀಕ್ಷಣಾ ಗೃಹಕ್ಕೆ ಕಳುಹಿಸಲಾಗುವುದು ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ 10ಕ್ಕೂ ಹೆಚ್ಚು ಮಹಿಳೆಯರು ಅಸ್ವಸ್ಥ; ಪುತ್ತೂರಿನಲ್ಲಿ ಆಗಿದ್ದೇನು?

ಬಿಜೆಪಿಯಿಂದಲೇ ಹಣ ಕಲೆಕ್ಷನ್: ಬಿಹಾರ ಚುನಾವಣೆಗೆ ರಾಜ್ಯದಿಂದ ಹಣ ಆರೋಪಕ್ಕೆ ಸಿಎಂ ತಿರುಗೇಟು

KL Rahulರನ್ನು ಹೀಗೆ ನಡೆಸಿಕೊಂಡಿದ್ದು ನಿಜಕ್ಕೂ ಹಾಸ್ಯಾಸ್ಪದ: ಮೂರ್ಖತನದ ನಿರ್ಧಾರ ಎಂದು ಟೀಕಿಸಿದ ಮಾಜಿ ನಾಯಕ

ಕಾಂಗ್ರೆಸ್-ಆರ್‌ಜೆಡಿಯಿಂದ 'ಪಿತೂರಿ'; ಬಿಹಾರ ಚುನಾವಣೆಯಿಂದ ಹಿಂದೆ ಸರಿದ ಜೆಎಂಎಂ

News headlines 20-10-2025| ದಕ್ಷಿಣ ಕನ್ನಡ ಜಿಲ್ಲೆಗೆ ವೈದ್ಯಕೀಯ ಕಾಲೇಜು ಘೋಷಣೆ, ಸುಳ್ಳು ಸುದ್ದಿ ಹರಡಿದರೆ ಕೇಸ್- ಸಿದ್ದರಾಮಯ್ಯ; ವೇತನ ನೀಡದೇ ಕಿರುಕುಳ: ಇಂಜಿನಿಯರ್ ಆತ್ಮಹತ್ಯೆ; ಅತಿವೃಷ್ಟಿ: ರಾಜ್ಯಕ್ಕೆ 300 ಕೋಟಿ, ಮಹಾರಾಷ್ಟ್ರಕ್ಕೆ 1,500 ಕೋಟಿ ರೂ ಕೇಂದ್ರ ಪರಿಹಾರ

SCROLL FOR NEXT