ಸಿಎಂ ಸಿದ್ದರಾಮಯ್ಯ 
ರಾಜ್ಯ

ನಮ್ಮ ಸರ್ಕಾರ ಜಾತಿ ನೋಡಲ್ಲ, ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ

ಸರ್ವ ಶ್ರಮಿಕ ವರ್ಗವನ್ನು ಗಮನದಲ್ಲಿ ಇಟ್ಟುಕೊಂಡು ಮೊದಲ ಬಾರಿ ಸಿಎಂ ಆದಾಗ ನಾನು ಹತ್ತು ಹಲವು ಭಾಗ್ಯಗಳನ್ನು ಕಲ್ಪಿಸಿದೆ.

ಮೈಸೂರು: ಜಾತಿ ಭೇದವಿಲ್ಲದೆ ಎಲ್ಲಾ ಸಮುದಾಯಗಳ ಸಮಗ್ರ ಅಭಿವೃದ್ಧಿ ಮಾಡುವುದಷ್ಟೇ ನಮ್ಮ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು.

ಜಿಲ್ಲಾಡಳಿತ ಆಯೋಜಿಸಿದ್ದ ಭಗೀರಥ ಜಯಂತಿ ಆಚರಣೆಯನ್ನು ಉದ್ಘಾಟಿಸಿ ನಂತರ ಉಪ್ಪಾರ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಈ ನೆಲದ ದಾರ್ಶನಿಕರು, ಮಹಾನುಭಾವರ ಮನುಕುಲದ ಕೊಡುಗೆ ಗಮನಿಸಿ ಅವರೆಲ್ಲರ ಜಯಂತಿಯನ್ನು ಸರ್ಕಾರವೇ ಆಚರಿಸುತ್ತಿದೆ. ಜೊತೆಗೆ ಇವರೆಲ್ಲರೂ ಜಾತ್ಯತೀತ ಮನೋಭಾವದಿಂದ ನೀಡಿದ ಮೌಲ್ಯಗಳ ಆಧಾರದಲ್ಲಿ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸುತ್ತದೆ ಎಂದು ಹೇಳಿದರು.

ಚತುರ್ವರ್ಣ ವ್ಯವಸ್ಥೆಯ ಅಡಿಯಲ್ಲಿ ಶೂದ್ರರಿಗೆ ಶಿಕ್ಷಣದ ಅವಕಾಶವೇ ಇರಲಿಲ್ಲ. ಇದರಿಂದಾಗಿ ಶೂದ್ರರಿಗೆ ದುಡಿಯುವ ಅವಕಾಶವೇ ಇಲ್ಲದಂತಾಯಿತು. ಶೂದ್ರರಲ್ಲಿ ಉಪ್ಪಾರ ಸಮುದಾಯ ಅತೀ ಹಿಂದುಳಿದ ಸಮುದಾಯವಾಗಿದೆ. ಅಂಬೇಡ್ಕರ್ ಅವರು ನೀಡಿರುವ "ಶಿಕ್ಷಣ-ಸಂಘಟನೆ-ಹೋರಾಟ ಎನ್ನುವ ಮಂತ್ರವನ್ನು ಪಾಲಿಸುವ ಮೂಲಕ ಉಪ್ಪಾರ ಸಮುದಾಯ ಆರ್ಥಿಕವಾಗಿ ಸಬಲರಾಗಬೇಕು. ಈ ಉದ್ದೇಶದಿಂದಲೇ ಉಪ್ಪಾರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದ್ದೇವೆಂದು ತಿಳಿಸಿದರು.

ಸರ್ವ ಶ್ರಮಿಕ ವರ್ಗವನ್ನು ಗಮನದಲ್ಲಿ ಇಟ್ಟುಕೊಂಡು ಮೊದಲ ಬಾರಿ ಸಿಎಂ ಆದಾಗ ನಾನು ಹತ್ತು ಹಲವು ಭಾಗ್ಯಗಳನ್ನು ಕಲ್ಪಿಸಿದೆ. ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದರ ಪರಿಣಾಮ ಪ್ರತೀ ಕುಟುಂಬಕ್ಕೆ 5 ರಿಂದ 6 ಸಾವಿರ ರೂಪಾಯಿಯ ನೆರವು ಪ್ರತೀ ತಿಂಗಳು ದೊರೆಯುತ್ತಿದೆ. ಆರ್ಥಿಕ ಅಸಮಾನತೆ ಸುಮ್ಮನೆ ಭಾಷಣ ಮಾಡಿದರೆ ಹೋಗಲ್ಲ. ಕಾರ್ಯಕ್ರಮ ರೂಪಿಸಿ ಜಾರಿಗೆ ತರುವುದು ಮುಖ್ಯ. ಇದಕ್ಕಾಗಿ ನಮ್ಮ ಸರ್ಕಾರ ನಿಂತರವಾಗಿ ಶ್ರಮಿಸುತ್ತಿದೆ ಎಂದರು.

ಉಪ್ಪಾರ ಸಮುದಾಯದ ಕುಲಶಾಸ್ತೀಯ ಅಧ್ಯಯನದ ಆಧಾರದಲ್ಲಿ ಮುಂದಿನ‌ ಕ್ರಮ ವಹಿಸಲಾಗುವುದು. ಉಪ್ಪಾರ ಭವನ‌ಗಳಿಗೆ ಹಣ ಒದಗಿಸಲಾಗುವುದು.‌ ಆದರೆ, ನೀವು ಕೂಡ ನಿಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಿಕ್ಷಿತರನ್ನಾಗಿ ಮಾಡುತ್ತೇವೆ ಎನ್ನುವ ಶಪಥ ಮಾಡಬೇಕು. ನಾವು ನಿಮ್ಮ ಜೊತೆ ಗಟ್ಟಿಯಾಗಿ ನಿಂತಿದ್ದೇವೆ, ನೀವು ನಮ್ಮ ಜೊತೆ ಭದ್ರವಾಗಿ‌ ನಿಲ್ಲಿ. ಬದಲಾವಣೆ ಖಂಡಿತವಾಗಿ ಬರಲಿದೆ ಎಂದು ಭರವಸೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ತಂದೆಯ ರಾಜಕೀಯ ಜೀವನ ಮುಗಿಯಿತು; ಸತೀಶ್ ಜಾರಕಿಹೊಳಿ 'ಉತ್ತರಾಧಿಕಾರಿ': ಯತೀಂದ್ರ ಸಿದ್ದರಾಮಯ್ಯ ಹೇಳಿಕೆ; ಡಿಕೆಶಿ ಬಣಕ್ಕೆ ಶಾಕ್!

PoK: ಎಲ್‌ಒಸಿ ಉದ್ದಕ್ಕೂ ಭಯೋತ್ಪಾದಕ ಶಿಬಿರಗಳು, ಉಡಾವಣಾ ಪ್ಯಾಡ್‌ಗಳು ಮತ್ತೆ ತಲೆ ಎತ್ತುತ್ತಿವೆ; ಗುಪ್ತಚರ ವರದಿ

ದೀಪ ಹಚ್ಚೋಣ, ಇದು ಬೆಳಕಿನ ಅನ್ವೇಷಣೆಯೆಂಬ ಅನಂತ ಯಾನ (ತೆರೆದ ಕಿಟಕಿ)

'ಇಸ್ಲಾಂ ರಾಜಕೀಯ' ಸನಾತನ ಧರ್ಮಕ್ಕೆ ಅತ್ಯಂತ ಅಪಾಯಕಾರಿ; ಹಲಾಲ್ ಬಗ್ಗೆ ಎಚ್ಚರ: ಸಿಎಂ ಯೋಗಿ ಆದಿತ್ಯನಾಥ್

PNB ವಂಚನೆ ಪ್ರಕರಣ: ಮೆಹುಲ್ ಚೋಕ್ಸಿ ಗಡಿಪಾರಿಗೆ ಬೆಲ್ಜಿಯಂ ಕೋರ್ಟ್ ಅನುಮೋದನೆ; 8 ವರ್ಷ ಭಾರತ ನಡೆಸಿದ್ದ ಹೋರಾಟ ಸಫಲ!

SCROLL FOR NEXT