J&K Crime Branch lodges FIRs against 2 notorious fraudsters in land scam 
ರಾಜ್ಯ

ಮಹಿಳೆ ಮೇಲೆ ಹಲ್ಲೆ, ಜಾತಿ ನಿಂದನೆ: ದಿಯಾ ಚಿತ್ರ ನಿರ್ಮಾಪಕ ಕೃಷ್ಣ ಚೈತನ್ಯ ಸೇರಿ ಇತರರ ವಿರುದ್ಧ FIR ದಾಖಲು

ರಾಜ್ಯಸರ್ಕಾರ ಡಿಸಿಆರ್‌ಇ ಠಾಣೆಗಳಿಗೆ ಮಾನ್ಯತೆ ನೀಡಿದ ಬಳಿಕ ರಾಜಧಾನಿಯಲ್ಲಿ ಜಾತಿ ದೌರ್ಜನ್ಯ ಸಂಬಂಧ ದಾಖಲಾದ ಮೊದಲ ಪ್ರಕರಣ ಇದಾಗಿದೆ.

ಬೆಂಗಳೂರು: ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ ಅವಾಚ್ಯಶಬ್ಧಗಳಿಂದ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ದಿಯಾ ಚಿತ್ರ ನಿರ್ಮಾಪಕ ಕೃಷ್ಣಚೈತನ್ಯ ಸೇರಿ ಇತರರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಪೂರ್ವವಿಭಾಗದ ನಾಗರಿಕ ಹಕ್ಕು ಜಾರಿನಿರ್ದೇಶನಾಲಯ (ಡಿಸಿಆರ್‌ಇ) ಠಾಣೆಯಲ್ಲಿ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.

ರಾಜ್ಯಸರ್ಕಾರ ಡಿಸಿಆರ್‌ಇ ಠಾಣೆಗಳಿಗೆ ಮಾನ್ಯತೆ ನೀಡಿದ ಬಳಿಕ ರಾಜಧಾನಿಯಲ್ಲಿ ಜಾತಿ ದೌರ್ಜನ್ಯ ಸಂಬಂಧ ದಾಖಲಾದ ಮೊದಲ ಪ್ರಕರಣ ಇದಾಗಿದೆ.

ನೇತಾಜಿ ನಗರದ ನಿವಾಸಿಯಾಗಿರುವ ಮಹಿಳೆಯೊಬ್ಬರು ದೂರು ನೀಡಿದ್ದು, ದೂರಿನ ಅನ್ವಯ ಚಿತ್ರ ನಿರ್ಮಾಪಕ ಕೃಷ್ಣಚೈತನ್ಯ, ಸತ್ಯನಾರಾಯಣ ರೆಡ್ಡಿ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆ, ಅತಿಕ್ರಮ ಪ್ರವೇಶ, ಹಲ್ಲೆ, ಮಹಿಳೆಯ ಘನತೆಗೆ ಧಕ್ಕೆ ತಂದ ಆರೋಪಗಳ ಅನ್ವಯ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವರ್ತೂರು ಹೋಬಳಿ ಕಸವನಹಳ್ಳಿ ಗ್ರಾಮದಲ್ಲಿರುವ 3 ಎಕರೆ 35 ಗುಂಟೆ ಜಮೀನನ್ನು ಭೋಗ್ಯಕ್ಕೆ ಪಡೆದಿರುವ ಮಹಿಳೆ, ಭೂಮಿಯಲ್ಲಿ ನರ್ಸರಿ ನಡೆಸುತ್ತಿದ್ದಾರೆ.

ಆ.10ರಂದು ಜಮೀನಿನ ಬಳಿ ಕಾರಿನಲ್ಲಿ ಆಗಮಿಸಿದ್ದ ಕೃಷ್ಣಚೈತನ್ಯ, ಸತ್ಯನಾರಾಯಣ ರೆಡ್ಡಿ ಹಾಗೂ ಇತರರು ಬೀಗವನ್ನು ಮುರಿದು ಒಳಬಂದು, ಮಹಿಳೆಗೆ ಅವಾಚ್ಯಶಬ್ಧಗಳಿಂದ ಜಾತಿನಿಂದನೆ ಮಾಡಿದ್ದಾರೆ. ಜೊತೆಗೆ, ದೇಹದ ಖಾಸಗಿ ಅಂಗಗಳನ್ನು ಮುಟ್ಟಿ ಹಲ್ಲೆ ನಡೆಸಿ, ಜಮೀನು ಸ್ಥಳ ಬಿಟ್ಟುಕೊಡದಿದ್ದರೆ ಕೊಲೆ ಮಾಡುವ ಬೆದರಿಕೆ ಒಡ್ಡಿದ್ದಾರೆ ಎಂದು ದೂರಿನಲ್ಲಿ ಮಹಿಳೆ ಆರೋಪಿಸಿದ್ದಾರೆ.

ಸಂತ್ರಸ್ತ ಮಹಿಳೆ ಆರಂಭದಲ್ಲಿ ಬೆಳ್ಳಂದೂರು ಠಾಣೆಯಲ್ಲಿ ದೂರು ನೀಡಲು ತೆರಳಿದ್ದು ಅಲ್ಲಿನ ಪೊಲೀಸರು ಪ್ರಕರಣ ದಾಖಲಿಸಿಕೊಂಡಿಲ್ಲ. ಹಲವು ಬಾರಿ ದೂರು ನೀಡಿದರೂ ಸಬೂಬು ಹೇಳಿದ್ದಾರೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಮೇಲಿನ ದೌರ್ಜನ್ಯ ತಡೆ ಕಾಯಿದೆ ಪ್ರಕರಣಗಳ ತನಿಖೆ ಸಲುವಾಗಿಯೇ ಸ್ಥಾಪಿಸಲಾಗಿರುವ ಡಿಸಿಆರ್‌ಇ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ,

ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ ಮತ್ತು ವಿಚಾರಣೆಗಾಗಿ ಆರೋಪಿಗಳಿಗೆ ನೋಟಿಸ್ ನೀಡಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕಾ ಮೇಲೆ ಭಾರತ ನಂಬಲಸಾಧ್ಯ ತೆರಿಗೆಯನ್ನು ವಿಧಿಸಿದ್ದು, ಇದು ವಿಶ್ವದಲ್ಲೇ ಅತ್ಯಧಿಕ: ಸುಂಕಾಸ್ತ್ರ ಕ್ರಮಕ್ಕೆ ಟ್ರಂಪ್ ಸಮರ್ಥನೆ

ನಿಮ್ಮ-ಭಾರತ ಸಂಬಂಧಕ್ಕೆ ನಮ್ಮ ತಕರಾರಿಲ್ಲ ಆದರೆ, ನಮ್ಮ ಬಾಂಧವ್ಯ ಗಟ್ಟಿಗೊಳಿಸೋಣ: ರಷ್ಯಾಗೆ ಪಾಕ್ ಮನವಿ

ಎರಡು ಗಂಟೆ ಮಳೆ - 20 ಕಿ.ಮೀ. ಟ್ರಾಫಿಕ್ ಜಾಮ್: ಮಿಲೇನಿಯಮ್ ಸಿಟಿ ನಗರಾಭಿವೃದ್ಧಿ ಟ್ರಿಪಲ್ ಎಂಜಿನ್ ಮಾದರಿ: BJP ಕಾಲೆಳೆದ ಕಾಂಗ್ರೆಸ್!

'ಸ್ವಾತಂತ್ರ್ಯ ಹೋರಾಟದಲ್ಲಿ ಯಾರ ಮನೆ ನಾಯಿ ಭಾಗವಹಿಸಿತ್ತೆಂದು ಬಹಿರಂಗ ಪಡಿಸಲಿ: ರಾಜ್ಯ ಸರ್ಕಾರದಲ್ಲಿ ಬಚ್ಚಲುಬಾಯಿ ಮಂತ್ರಿಗಳು!'

ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ "ಐತಿಹಾಸಿಕ ನಿರ್ಧಾರ"; ಐದು ಪಾಲಿಕೆಗೆ ಆಯುಕ್ತರ ನೇಮಕ

SCROLL FOR NEXT