ಅಮಿತ್ ಮಾಳಸೇರ್ 
ರಾಜ್ಯ

ಕಾರವಾರ: ಊಟ ಮಾಡುವಾಗ ಗಂಟಲಲ್ಲಿ ಅನ್ನದ ಅಗುಳು ಸಿಲುಕಿ ಯುವಕ ಸಾವು

ವೃತ್ತಿಯಲ್ಲಿ ಕಾರು ಚಾಲಕರಾಗಿ ಜೀವನ ಸಾಗಿಸುತ್ತಿದ್ದ ಅಮಿತ್, ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ವೈದ್ಯರಿಂದ ಚಿಕಿತ್ಸೆ ಸಹ ಪಡೆಯುತ್ತಿದ್ದರು.

ಕಾರವಾರ: ಮನೆಯಲ್ಲಿ ಎಂದಿನಂತೆ ಊಟ ಮಾಡುತ್ತಿದ್ದಾಗ ಅನ್ನದ ಅಗಳು ಗಂಟಲಿನಲ್ಲಿ ಸಿಲುಕಿದ ಕಾರಣದಿಂದ ಉಸಿರುಗಟ್ಟಿ ಯುವಕನೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾದಲ್ಲಿ ನಡೆದಿದೆ.

ಯುವಕನನ್ನು ಬಿಣಗಾ ಮಾಳಸವಾಡ ನಿವಾಸಿ, 38 ವರ್ಷದ ಅಮಿತ್ ಮಾಳಸೇರ್ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಕಾರು ಚಾಲಕರಾಗಿ ಜೀವನ ಸಾಗಿಸುತ್ತಿದ್ದ ಅಮಿತ್, ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ವೈದ್ಯರಿಂದ ಚಿಕಿತ್ಸೆ ಸಹ ಪಡೆಯುತ್ತಿದ್ದರು. ತಮ್ಮ ಮನೆಯಲ್ಲಿ ಊಟ ಮಾಡುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಅಮಿತ್ ಭಾನುವಾರ ಮನೆಯಲ್ಲಿ ಊಟ ಮಾಡುತ್ತಿದ್ದಾಗ ಅನ್ನದ ಅಗಳೊಂದು ಗಂಟಲಲ್ಲಿ ಸಿಲುಕಿತ್ತು. ತಕ್ಷಣ ಮನೆಯವರು ಅಮಿತ್‌ಗೆ ನೀರು ಕುಡಿಸಿದ್ದು, ಆತ ಅಲ್ಲೇ ಕುಸಿದು ಬಿದಿದ್ದ. ಕೂಡಲೇ ಆತನನ್ನು ಅಂಬುಲೆನ್ಸ್ ಮೂಲಕ ಕಾರವಾರದ ಕ್ರಿಮ್ಸ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೇ ವೈದ್ಯರು ಪರೀಕ್ಷಿಸಿದಾಗ ಗಂಟಲಲ್ಲಿ ಅನ್ನದ ಅಗಳು ಸಿಲುಕಿ ಅಮಿತ್ ಮೃತಪಟ್ಟಿದ್ದಾನೆಂದು ದೃಢಪಡಿಸಿದ್ದಾರೆ. ಘಟನೆ ಸಂಬಂಧ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್