ರಾಧಿಕಾ ಕುಮಾರಸ್ವಾಮಿ ಮತ್ತು ಜಮೀರ್ ಅಹ್ಮದ್ ಖಾನ್  
ರಾಜ್ಯ

ಸಚಿವ ಜಮೀರ್‌ ಗೆ 2 ಕೋಟಿ ರೂ ಸಾಲ: ನಟಿ ರಾಧಿಕಾ ಕುಮಾರಸ್ವಾಮಿ ವಿಚಾರಣೆ

ವಿಚಾರಣೆ ಸಂದರ್ಭದಲ್ಲಿ, ನಾನು 2012ರಲ್ಲಿ ಶಮಿಕಾ ಎಂಟರ್‌ಪ್ರೈಸಸ್‌ ಹೆಸರಿನಲ್ಲಿ ಯಶ್ ಹಾಗೂ ರಮ್ಯಾ ಅಭಿನಯದ ಲಕ್ಕಿ ಸಿನಿಮಾ ನಿರ್ಮಾಣ ಮಾಡಿದ್ದೆ.

ಬೆಂಗಳೂರು: ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರಿಗೆ 2.5 ಕೋಟಿ ರೂ. ಸಾಲ ಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಾಧಿಕಾ ಕುಮಾರಸ್ವಾಮಿ ಲೋಕಾಯುಕ್ತ ಪೊಲೀಸರ ವಿಚಾರಣೆ ಎದುರಿಸಿದ್ದಾರೆ.

ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು, ವಸತಿ ಸಚಿವರ ಆದಾಯದ ಮೂಲಗಳನ್ನು ಪರಿಶೀಲಿಸಿದಾಗ ಸಾಲ ನೀಡಿದ ವ್ಯಕ್ತಿಗಳ ಪಟ್ಟಿ ಸಿಕ್ಕಿದೆ. ಈ ಪಟ್ಟಿಯಲ್ಲಿ ರಾಧಿಕಾ ಕುಮಾರಸ್ವಾಮಿ ಅವರ ಹೆಸರು ಇದ್ದ ಕಾರಣ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ವಿಚಾರಣೆ ವೇಳೆ ರಾಧಿಕಾ, ದಶಕದ ಹಿಂದೆ ತಾವು ಸಚಿವ ಜಮೀರ್ ಅವರಿಗೆ ಸಾಲ ಕೊಟ್ಟಿದ್ದನ್ನು ಒಪ್ಪಿಕೊಂಡು ಹೇಳಿಕೆ ದಾಖಲಿಸಿದ್ದಾರೆ. ವಿಚಾರಣೆ ಸಂದರ್ಭದಲ್ಲಿ, ನಾನು 2012ರಲ್ಲಿ ಶಮಿಕಾ ಎಂಟರ್‌ಪ್ರೈಸಸ್‌ ಹೆಸರಿನಲ್ಲಿ ಯಶ್ ಹಾಗೂ ರಮ್ಯಾ ಅಭಿನಯದ ಲಕ್ಕಿ ಸಿನಿಮಾ ನಿರ್ಮಾಣ ಮಾಡಿದ್ದೆ. ಮನರಂಜನಾ ಚಾನೆಲ್‌ಗಳಿಗೆ ಈ ಸಿನಿಮಾದ ಸ್ಯಾಟಲೈಟ್ ಹಕ್ಕು ಹಾಗೂ ಚಲನಚಿತ್ರದ ಯಶಸ್ಸಿನಿಂದ ಸಂಪಾದಿಸಿದ ಹಣದಲ್ಲಿ ಆರ್ಥಿಕ ಸಂಕಷ್ಟದಲ್ಲಿದ್ದ ಜಮೀರ್‌ ಅಹ್ಮದ್‌ ಅವರಿಗೆ 2.5 ಕೋಟಿ ರೂಗಳನ್ನು ಸಾಲವಾಗಿ ನೀಡಿದ್ದೆ ಎಂದು ರಾಧಿಕಾ ತಿಳಿಸಿದ್ದಾರೆ ಎನ್ನಲಾಗಿದೆ.

2019ರಲ್ಲಿ ಐ ಮಾನಿಟರಿ ಅಡ್ವೈಸರಿ ಕಂಪನಿಯ ಬಹುಕೋಟಿ ವಂಚನೆ ಹಗರಣ ಬೆಳಕಿಗೆ ಬಂದಿತ್ತು. ಈ ಕಂಪನಿ ಜತೆ ನಂಟು ಹೊಂದಿದ್ದ ಆರೋಪದ ಮೇರೆಗೆ ಜಮೀರ್‌ ಖಾನ್‌ ಅವರ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು. ಇಡಿ ವರದಿಯ ಅನ್ವಯ ಆಗ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದ ಜಮೀರ್ ಖಾನ್‌ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಅಂದು ಅಸ್ತಿತ್ವದಲ್ಲಿದ್ದ ಭ್ರಷ್ಟಾಚಾರ ನಿಗ್ರಹ ದಳವು (ಎಸಿಬಿ) ಪ್ರಕರಣ ದಾಖಲಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Amritsar: ಉಗ್ರರ ದಾಳಿ ಸಂಚು ವಿಫಲ; ISI ಜೊತೆಗೆ ನಂಟು ಹೊಂದಿದ್ದ ಇಬ್ಬರ ಬಂಧನ; ರಾಕೆಟ್ ಚಾಲಿತ ಗ್ರೆನೇಡ್ ವಶಕ್ಕೆ!

ವ್ಲಾಡಿಮಿರ್ ಕ್ರಾಮ್ನಿಕ್ ವಂಚನೆ ಆರೋಪ: ಗ್ರ್ಯಾಂಡ್ ಮಾಸ್ಟರ್ ಡೇನಿಯಲ್ ನರೋಡಿಟ್ಸ್ಕಿ ಆತ್ಮಹತ್ಯೆ; ನಿಹಾಲ್ ಸರಿನ್ ಆಕ್ರೋಶ!

ಮಾನ್ಯ ವೀಸಾ ಹೊಂದಿದ್ದರೂ ಹಿಂದಿ ವಿದ್ವಾಂಸೆ ಫ್ರಾನ್ಸೆಸ್ಕಾ ಓರ್ಸಿನಿಗೆ ಭಾರತ ಪ್ರವೇಶಕ್ಕೆ ನಿರಾಕರಣೆ!

ಸೊಸೆ ಜೊತೆ ತಂದೆ ಅಕ್ರಮ ಸಂಬಂಧ: ಮಗನ ಕೊಲೆ ಆರೋಪ; ತಂದೆ ಮಾಜಿ DGP ಮುಸ್ತಫಾ, ತಾಯಿ, ಪತ್ನಿ ವಿರುದ್ಧ FIR!

India 'Proxy war': ಪಾಕಿಸ್ತಾನದ ಆರೋಪಕ್ಕೆ ಅಪ್ಘಾನಿಸ್ತಾನ ತಿರುಗೇಟು! ಹೇಳಿದ್ದೇನು? Video

SCROLL FOR NEXT