ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯನ್ನು ಭೇಟಿಯಾದ ಬಿಜೆಪಿ ನಾಯಕರು 
ರಾಜ್ಯ

Dharmasthala ಪ್ರಕರಣದಲ್ಲಿ 'ಬಹಳ ದೊಡ್ಡ ಪಿತೂರಿ'; ತನಿಖೆಯನ್ನು NIA ಅಥವಾ CBIಗೆ ವಹಿಸಬೇಕು: BY ವಿಜಯೇಂದ್ರ ಆಗ್ರಹ

ಕಳೆದ ಎರಡು ದಶಕಗಳಲ್ಲಿ ಧರ್ಮಸ್ಥಳದಲ್ಲಿ ನೂರಾರು ಅತ್ಯಾಚಾರ, ಕೊಲೆ ಮತ್ತು ರಹಸ್ಯ ಸಮಾಧಿ ಆರೋಪಗಳ ಹಿಂದೆ 'ಬಹಳ ದೊಡ್ಡ ಪಿತೂರಿ' ನಡೆದಿದೆ ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದು ಪ್ರಕರಣವನ್ನು NIA ಅಥವಾ CBIಗೆ ವಹಿಸಬೇಕೆಂದು ಒತ್ತಾಯಿಸಿದರು.

ಮಂಗಳೂರು: ಕಳೆದ ಎರಡು ದಶಕಗಳಲ್ಲಿ ಧರ್ಮಸ್ಥಳದಲ್ಲಿ ನೂರಾರು ಅತ್ಯಾಚಾರ, ಕೊಲೆ ಮತ್ತು ರಹಸ್ಯ ಸಮಾಧಿ ಆರೋಪಗಳ ಹಿಂದೆ 'ಬಹಳ ದೊಡ್ಡ ಪಿತೂರಿ' ನಡೆದಿದೆ ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದು ಪ್ರಕರಣವನ್ನು NIA ಅಥವಾ CBIಗೆ ವಹಿಸಬೇಕೆಂದು ಒತ್ತಾಯಿಸಿದ್ದು ರಾಜ್ಯ ಸರ್ಕಾರವು ಯಾವುದೇ ವಿಳಂಬವಿಲ್ಲದೆ, ಆದಷ್ಟು ಬೇಗ ತನಿಖೆಗೆ ಆದೇಶಿಸುತ್ತದೆ ಎಂದು ನಾನು ಭಾವಿಸಿದ್ದೇನೆ ಎಂದರು.

ಧರ್ಮಸ್ಥಳ ವಿರುದ್ಧದ ಪಿತೂರಿ ಮತ್ತು ಅಪಪ್ರಚಾರ ಅಭಿಯಾನವನ್ನು ಖಂಡಿಸಿ ವಿಜಯೇಂದ್ರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಬಿಜೆಪಿ ಶಾಸಕರು ಮತ್ತು ಹಲವು ನಾಯಕರು 'ಧರ್ಮಸ್ಥಳ ಚಲೋ' ನಡೆಸಲಿದ್ದಾರೆ. ಅದಕ್ಕೆ ಮುಂಚಿತವಾಗಿ, ನಾಯಕರು ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಅಲ್ಲಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ದೇವಾಲಯದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಸಹ ಭೇಟಿ ಮಾಡಿದರು. ಜಾತಿ, ಧರ್ಮ ಲೆಕ್ಕಿಸದೆ ಎಲ್ಲರೂ ಸಿಬಿಐ ಅಥವಾ ಎನ್ಐಎಯಿಂದ ಸಮಗ್ರ ತನಿಖೆಗೆ ಒತ್ತಾಯಿಸುತ್ತಿದ್ದಾರೆ. ಧರ್ಮಸ್ಥಳ ಪ್ರಸಂಗದಲ್ಲಿ ಇದು ಅತ್ಯಗತ್ಯ. ಇದು ಧರ್ಮಸ್ಥಳದ ಮಂಜುನಾಥನ ಎಲ್ಲಾ ಭಕ್ತರ ಬೇಡಿಕೆಯಾಗಿದೆ ಎಂದು ವಿಜಯೇಂದ್ರ ಹೇಳಿದರು.

ರಾಜ್ಯ ಸರ್ಕಾರ ರಚಿಸಿರುವ ಎಸ್‌ಐಟಿ ತನಿಖೆಯ ಸಮಯದಲ್ಲಿ ಬಹಳಷ್ಟು ಸುಳ್ಳು ಪ್ರಚಾರವನ್ನು ನಡೆಸಲಾಗಿದೆ. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಸುಳ್ಳು ಪ್ರಚಾರವನ್ನು ನಡೆಸಿರುವ ರೀತಿ ಕೋಟ್ಯಂತರ ಭಕ್ತರು ಅಸಮಾಧಾನಗೊಂಡಿದ್ದು ಭಕ್ತರ ಭಾವನೆಗಳಿಗೆ ನೋವುಂಟು ಮಾಡಿದೆ ಎಂದರು. ಇನ್ನು ಧರ್ಮಸ್ಥಳ ವಿರುದ್ಧ ದೊಡ್ಡ ಪಿತೂರಿ ನಡೆದಿದೆ ಎಂದು ಹೇಳಿದ ಬಿಜೆಪಿ ಮುಖ್ಯಸ್ಥರು, ತನಿಖೆಗಾಗಿ ರಾಜ್ಯ ಸರ್ಕಾರದ ಮೇಲೆ ಎಡಪಂಥೀಯ ಗುಂಪುಗಳಿಂದ ಸಾಕಷ್ಟು ಒತ್ತಡವಿತ್ತು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿಕೊಂಡಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಅವರೇ ಧರ್ಮಸ್ಥಳದ ವಿಚಾರದಲ್ಲಿ ದೊಡ್ಡ ಪಿತೂರಿ ನಡೆದಿದೆ ಎಂದು ಹೇಳಿದ್ದಾರೆ ಎಂದರು.

ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಭಾನುವಾರ ಧರ್ಮಸ್ಥಳದಲ್ಲಿ ಇದೇ ರೀತಿಯ ಬೇಡಿಕೆಯೊಂದಿಗೆ 'ಧರ್ಮಸ್ಥಳ ಸತ್ಯಯಾತ್ರೆ' ನಡೆಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

GST 2.0: ಶಾಂಪುವಿನಿಂದ ಸಣ್ಣ ಕಾರುಗಳವರೆಗೆ, ಯಾವುದು ಅಗ್ಗ ಮತ್ತು ದುಬಾರಿ?

56th GST Council: ಇನ್ನು ಶೇ.5 ಮತ್ತು ಶೇ.18 ಎರಡು ಹಂತದ ತೆರಿಗೆ, ಸೆ.22ರಂದು ಜಾರಿ

GST 2.0: ಯಾವುದಕ್ಕೆ ತೆರಿಗೆ, ಯಾವುದಕ್ಕೆ ವಿನಾಯಿತಿ ಇಲ್ಲಿದೆ ಮಾಹಿತಿ...

ಮುಖ್ಯಮಂತ್ರಿ ಹುದ್ದೆಯಿಂದ ಫಡ್ನವೀಸ್ ಗೆ ಕೊಕ್: ರಾಷ್ಟ್ರ ರಾಜಕಾರಣಕ್ಕೆ 'ಮಹಾ'ಸಿಎಂ; ಬಿಜೆಪಿ ರಾಷ್ಟ್ರಾಧ್ಯಕ್ಷ ರೇಸ್ ನಲ್ಲಿ ರೂಪಾಲಾ !

ದೇಶವಾಸಿಗಳಿಗೆ ಗುಡ್ ನ್ಯೂಸ್: GST ಸ್ಲ್ಯಾಬ್‌ಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಎರಡೇ ತೆರಿಗೆ

SCROLL FOR NEXT