ಆರೋಪಿ ಪವಿತ್ರ ಗೌಡ 
ರಾಜ್ಯ

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಎ1 ಆರೋಪಿ ಪವಿತ್ರಾ ಗೌಡ ಹೊಸ ಜಾಮೀನು ಅರ್ಜಿ ಮತ್ತೆ ವಜಾ!

ಇತ್ತೀಚಿಗೆ ನಟ ದರ್ಶನ್ ಅವರ ಆಪ್ತರಾದ ಪವಿತ್ರ ಗೌಡ ಜಾಮೀನು ಕೋರಿ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲುಪಾಲಾಗಿರುವ ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು 57ನೇ ಸೆಷನ್ಸ್ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರಿಗೆ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದನೆಂಬ ಕಾರಣಕ್ಕಾಗಿ, ನಟ ದರ್ಶನ್ ಹಾಗೂ ಅವರ ಗ್ಯಾಂಗ್ ಅಪಹರಿಸಿ ಬೆಂಗಳೂರಿಗೆ ತಂದು, ಪಟ್ಟಣಗೆರೆಯಲ್ಲಿನ ಶೆಡ್‌ನಲ್ಲಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದರು. ಈ ಪ್ರಕರಣದಲ್ಲಿ ಪವಿತ್ರಾ ಗೌಡ ಪ್ರಮುಖ ಆರೋಪಿಯಾಗಿದ್ದಾರೆ.

ಇತ್ತೀಚಿಗೆ ನಟ ದರ್ಶನ್ ಅವರ ಆಪ್ತರಾದ ಪವಿತ್ರ ಗೌಡ ಜಾಮೀನು ಕೋರಿ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಅವರ ಪರ ವಾದಿಸಿದ ವಕೀಲ ಬಾಲನ್, ಸುಪ್ರೀಂಕೋರ್ಟ್ ಈ ಹಿಂದೆ ನೀಡಿದ್ದ ಆದೇಶವನ್ನು ಪ್ರಶ್ನಿಸದಿದ್ದರೂ ಚಾರ್ಜ್ ಶೀಟ್ ಸಲ್ಲಿಕೆಯಲ್ಲಿ ತಾಂತ್ರಿಕ ದೋಷಗಳಿವೆ. crpc ಅಡಿಯಲ್ಲಿ ಚಾರ್ಜ್ ಶೀಟ್ ಸಲ್ಲಿಸದೆ BNSS ಅಡಿಯಲ್ಲಿ ಚಾರ್ಚ್ ಶೀಟ್ ಸಲ್ಲಿಸಿರುವುದರಿಂದ ಕಾನೂನು ಪ್ರಕಾರ ಅಮಾನ್ಯವಾಗಿದೆ. ಹೀಗಾಗಿ ಪವಿತ್ರ ಗೌಡ ಅವರಿಗೆ ಜಾಮೀನು ನೀಡಬೇಕು ಎಂದು ವಾದಿಸಿದರು.

ಆರೋಪಿ ಪರ ವಕೀಲರ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪ್ರಾಸಿಕ್ಯೂಷನ್ ವಕೀಲ ಸಚಿನ್, ಜಾಮೀನು ನೀಡದಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು.

ವಾದ ವಿವಾದ ಆಲಿಸಿದ ನ್ಯಾಯಾಧೀಶರು, ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ. ಈ ಹಿಂದೆ ಕರ್ನಾಟಕ ಹೈಕೋರ್ಟ್ ಎಲ್ಲಾ ಆರೋಪಿಗಳಿಗೆ ನೀಡಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿತ್ತು. ಕೂಡಲೇ ಆರೆಸ್ಟ್ ಮಾಡುವಂತೆ ಸೂಚಿಸಿತ್ತು. ತದನಂತರ ಆಗಸ್ಟ್ 14 ರಿಂದ ಪವಿತ್ರ ಗೌಡ ಮತ್ತೆ ಜೈಲು ಸೇರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ "ಐತಿಹಾಸಿಕ ನಿರ್ಧಾರ"; ಐದು ಪಾಲಿಕೆಗೆ ಆಯುಕ್ತರ ನೇಮಕ

ದಶಕಗಳ ಪ್ರಯತ್ನಕ್ಕೆ Trump ಕೊಳ್ಳಿ ಇಟ್ಟಿದ್ದಾರೆ: ಅಧ್ಯಕ್ಷನ ಆತುರ ನಿರ್ಧಾರಗಳೇ ಭಾರತ-ರಷ್ಯಾ-ಚೀನಾ ದೋಸ್ತಿಗೆ ಕಾರಣ!

ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್?: ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ವರ್ಲ್ಡ್ ಟ್ರಾನ್ಸ್‌ಪ್ಲಾಂಟ್ ಗೇಮ್ಸ್: 63 ಪದಕ ಪಡೆದು ಮಿಂಚಿದ ಭಾರತದ ಕ್ರೀಡಾಪಟುಗಳು!

Cricket: 'Alcohol, Pornography...': ಡ್ರೀಮ್11 ಹೊರಕ್ಕೆ, ಜೆರ್ಸಿ ಸ್ಪಾನ್ಸರ್‌ಗೆ BCCI ಅರ್ಜಿ ಆಹ್ವಾನ, ಡೆಡ್‌ಲೈನ್ ನಿಗದಿ, ಅರ್ಹತೆ ಏನು?

SCROLL FOR NEXT