ಪ್ರಿಯಾಂಕ್ ಖರ್ಗೆ 
ರಾಜ್ಯ

ಸಮೃದ್ಧಿ ಯೋಜನೆಗೆ 205 ಗ್ರಾಮ ಪಂಚಾಯ್ತಿ ಆಯ್ಕೆ; ಆಪ್ಟಿಕಲ್ ಫೈಬರ್ ಕೇಬಲ್‌ ಬಳಸಿ ಹೈ-ಸ್ಪೀಡ್ ಇಂಟರ್ನೆಟ್ ಸೌಲಭ್ಯ: ಪ್ರಿಯಾಂಕ್ ಖರ್ಗೆ

ಗ್ರಾಮೀಣ ಪ್ರದೇಶಗಳಲ್ಲಿ ಟೆಲಿಕಾಂ ಆಧಾರಿತ ಡಿಜಿಟಲ್ ಮೂಲಸೌಕರ್ಯವನ್ನು ಕಾರ್ಯಗತಗೊಳಿಸಲು SGPP ವಿನ್ಯಾಸಗೊಳಿಸಲಾಗಿದೆ ಎಂದು ಖರ್ಗೆ ತಿಳಿಸಿದ್ದಾರೆ.

ಬೆಂಗಳೂರು: ಸಮೃದ್ಧಿ ಗ್ರಾಮ ಪಂಚಾಯತ್ ಯೋಜನೆ ಅಡಿಯಲ್ಲಿ ಸರ್ಕಾರ 205 ಗ್ರಾಮ ಪಂಚಾಯತ್‌ಗಳನ್ನು ಆಯ್ಕೆ ಮಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ಹೇಳಿದ್ದಾರೆ.

ಆಪ್ಟಿಕಲ್ ಫೈಬರ್ ಕೇಬಲ್‌ಗಳನ್ನು (OFCs) ಬಳಸಿಕೊಂಡು ಗ್ರಾಮೀಣ ಪ್ರದೇಶಗಳಿಗೆ ಹೈ-ಸ್ಪೀಡ್ ಇಂಟರ್ನೆಟ್ ಒದಗಿಸುವುದು ಗುರಿಯಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಟೆಲಿಕಾಂ ಆಧಾರಿತ ಡಿಜಿಟಲ್ ಮೂಲಸೌಕರ್ಯವನ್ನು ಕಾರ್ಯಗತಗೊಳಿಸಲು SGPP ವಿನ್ಯಾಸಗೊಳಿಸಲಾಗಿದೆ ಎಂದು ಖರ್ಗೆ ತಿಳಿಸಿದ್ದಾರೆ.

ಇದು ಡಿಜಿಟಲ್ ಸೇವೆಗಳ ವಿತರಣೆಯನ್ನು ಸುಗಮಗೊಳಿಸುತ್ತದೆ ಮತ್ತು ಸೇವೆ ಸಲ್ಲಿಸದ ಪ್ರದೇಶಗಳಲ್ಲಿ ಆರ್ಥಿಕ ಅವಕಾಶಗಳನ್ನು ವಿಸ್ತರಿಸುತ್ತದೆ ಎಂದು ಅವರು ಹೇಳಿದರು. ಗ್ರಾಮ ಪಂಚಾಯತಿ ಅಧ್ಯಕ್ಷರು ಅಥವಾ ಚುನಾಯಿತ ಪ್ರತಿನಿಧಿ ಇಲ್ಲದಿದ್ದ ಪಕ್ಷದಲ್ಲಿ ಆಡಳಿತಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿಗಳನ್ನು ರಚಿಸಲಾಗುತ್ತಿದ್ದು, ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಾರೆ ಹಾಗೂ ಸಮಿತಿಯಲ್ಲಿ 4 ಮಂದಿ ಸದಸ್ಯರಿರುತ್ತಾರೆ ಎಂದು ಸಚಿವರು ಹೇಳಿದ್ದಾರೆ.

ಹೈ-ಸ್ಪೀಡ್ ಬ್ರಾಡ್‌ಬ್ಯಾಂಡ್ ಪ್ರವೇಶದ ಪ್ರಯೋಜನಗಳ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ತಳಮಟ್ಟದಲ್ಲಿ ಅದರ ಅತ್ಯುತ್ತಮ ಬಳಕೆಯನ್ನು ಖಚಿತಪಡಿಸಿಕೊಳ್ಳುವುದು ಅವರ ಪ್ರಾಥಮಿಕ ಉದ್ದೇಶವಾಗಿದೆ.

ಅಲ್ಲದೇ, ಬ್ರಾಡ್‍ಬ್ಯಾಂಡ್ ವಿಸ್ತರಣೆ ಹಾಗೂ ಡಿಜಿಟಲ್ ಲಭ್ಯತೆಯನ್ನು ಸುಧಾರಿಸುವತ್ತ ಕಾರ್ಯನಿರ್ವಹಿಸುವುದು.

ಹಳ್ಳಿಗಳಲ್ಲಿ ಹೆಚ್ಚಿನ ವೇಗದ ಬ್ರಾಡ್‍ಬ್ಯಾಂಡ್ ಮೂಲಕ ಒದಗಿಸಬಹುದಾದ ಸೇವೆಗಳು ಮತ್ತು ಬಳಕೆಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಅನ್ವೇಷಣೆ ಮಾಡುವುದು, ಶಾಲೆಗಳು, ಆಸ್ಪತ್ರೆಗಳು ಮತ್ತು ಇತರ ಸಾರ್ವಜನಿಕ ಸ್ಥಳಗಳಲ್ಲಿ ಐಸಿಟಿ ಉಪಕರಣಗಳನ್ನು ಸ್ಥಾಪಿಸುವ ಸಾಧ್ಯತೆಗಳನ್ನು ಪರಿಶೀಲಿಸುವುದು ಸೇರಿದಂತೆ ಸಂಬಂಧಿಸಿದ ಮತ್ತಿತರ ಹೊಣೆಯನ್ನು ಸಮಿತಿಗಳಿಗೆ ನಿಡಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಸ್ವತಂತ್ರ ಭಾರತದ ಅತಿದೊಡ್ಡ ಸುಧಾರಣೆ"- GST ಸುಧಾರಣೆ ಶ್ಲಾಘಿಸಿದ ಪ್ರಧಾನಿ ಮೋದಿ

ಜಿಎಸ್‌ಟಿ ಕಡಿತ ಲಾಭ ಗ್ರಾಹಕರಿಗೆ ವರ್ಗಾಯಿಸುವುದಾಗಿ ಮುಖೇಶ್ ಅಂಬಾನಿ ಭರವಸೆ

ಕನಕಪುರದಲ್ಲಿ ಮೆಡಿಕಲ್ ಕಾಲೇಜ್; ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಸಂಪುಟ ಅಸ್ತು

ADR report: ದೇಶದಲ್ಲಿ ಶೇ. 47 ರಷ್ಟು ಸಚಿವರ ಮೇಲೆ ಕ್ರಿಮಿನಲ್ ಆರೋಪ, ಬಿಲಿಯನೇರ್ ಪೈಕಿ ಕರ್ನಾಟಕಕ್ಕೆ ಮೊದಲ ಸ್ಥಾನ, ಡಿಕೆಶಿ ಎಷ್ಟನೇ ಶ್ರೀಮಂತ?

ಉಕ್ರೇನ್‌ನಲ್ಲಿ ಶಾಂತಿ ನೆಲೆಸಲು ಭಾರತದ ಮೇಲಿನ 'ಸುಂಕಾಸ್ತ್ರ' ನಿರ್ಣಾಯಕ: US ಸುಪ್ರೀಂ ಕೋರ್ಟ್‌ಗೆ ಡೊನಾಲ್ಡ್ ಟ್ರಂಪ್ ಮಾಹಿತಿ

SCROLL FOR NEXT