ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿರುವ ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಅವರ ನಿವಾಸದ ಹೊರಗೆ ಮಂಗಳವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು 
ರಾಜ್ಯ

KC Veerendra Pappi: ಶಾಸಕ ವಿರೇಂದ್ರ ಪಪ್ಪಿ ನಿವಾಸ ಮೇಲೆ ಮತ್ತೆ ಇಡಿ ದಾಳಿ; 6 ಐಷಾರಾಮಿ ಕಾರುಗಳು ವಶ

ದಾಳಿಯ ಸಂದರ್ಭದಲ್ಲಿ, 6 ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ವೀರೇಂದ್ರ ಹೇಳಿಕೆ ಆಧರಿಸಿ ಅವರ ಮನೆ ಮೇಲೆ ದಾಳಿ ನಡೆಸಿರುವ ಇ.ಡಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ.

ಚಿತ್ರದುರ್ಗ: ವಿದೇಶಿ ಕರೆನ್ಸಿ ಹಾಗು ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಜಾರಿ ನಿರ್ದೇಶನಾಲಯ (ED) ವಶದಲ್ಲಿರುವ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಇಡಿ ಅಧಿಕಾರಿಗಳು ಮತ್ತೆ ನಿನ್ನೆ ಮಂಗಳವಾರ ಸಾಯಂಕಾಲ ದಾಳಿ ನಡೆಸಿದ್ದಾರೆ.

ದಾಳಿಯ ಸಂದರ್ಭದಲ್ಲಿ, 6 ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ವೀರೇಂದ್ರ ಹೇಳಿಕೆ ಆಧರಿಸಿ ಅವರ ಮನೆ ಮೇಲೆ ದಾಳಿ ನಡೆಸಿರುವ ಇ.ಡಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ. ಹತ್ತಕ್ಕೂ ಹೆಚ್ಚು ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆದಿದ್ದು, ಅವರ ಮನೆಯಲ್ಲಿರುವ ಐಶಾರಾಮಿ ಕಾರುಗಳ ಬಗ್ಗೆ ಪರಿಶೀಲನೆ ನಡೆಸಿ ವಶಕ್ಕೆ ಪಡೆದಿದ್ದಾರೆ. ವೀರೇಂದ್ರ ಪಪ್ಪಿಯ ಬ್ಯಾಂಕ್ ಖಾತೆಗಳ ಬಗ್ಗೆಯೂ ಮಾಹಿತಿ ಸಂಗ್ರಹಿಸಿದ್ದಾರೆ.

ಚಳ್ಳಕೆರೆ ನಗರದ ಕೋಟೆಕ್ ಮಹೇಂದ್ರ ಬ್ಯಾಂಕ್ ಹಾಗೂ ಆಕ್ಸಿಸ್ ಬ್ಯಾಂಕ್‌ಗೆ ಇ.ಡಿ ಅಧಿಕಾರಿಗಳು ತೆರಳಿದ್ದರು. ಆ ಬ್ಯಾಂಕ್‌ನಲ್ಲಿ ವೀರೇಂದ್ರ ಪಪ್ಪಿ ಹಾಗೂ ಅವರ ಕುಟುಂಬ ಸದಸ್ಯರ ಹಣ ವರ್ಗಾವಣೆ ಬಗ್ಗೆ ದಾಖಲೆಯನ್ನು ಕೂಡ ಕಲೆ ಹಾಕಿದ್ದು, 17 ಬ್ಯಾಂಕ್ ಖಾತೆಗಳ ಮೂಲಕ ಆಗಿರುವ ಹಣಕಾಸು ವರ್ಗಾವಣೆ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಜೊತೆಗೆ ಬೆಟ್ಟಿಂಗ್ ಆಪ್‌ಗಳ ಮೂಲಕ ಗಳಿಸಿದ ಹಣವನ್ನು ಈ ಬ್ಯಾಂಕ್ ಖಾತೆಗಳ ಮೂಲಕ ವರ್ಗಾವಣೆ ಮಾಡುವ ಮೂಲಕ ಅಕ್ರಮ ವ್ಯವಹಾರ ನಡೆಸಿದ್ದಾರೆಯೇ ಎಂಬುದರ ಬಗ್ಗೆಯೂ ತನಿಖೆ ನಡೆಸಿದ್ದಾರೆ.

ಮೊನ್ನೆ ಆಗಸ್ಟ್ 22ರಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿರುವ ವೀರೇಂದ್ರ ಪಪ್ಪಿ ನಿವಾಸ ಮೇಲೆ ದಾಳಿ ಮಾಡಿದ್ದ ಇಡಿ ಅಧಿಕಾರಿಗಳು ಮಧ್ಯರಾತ್ರಿವರೆಗೂ ದಾಖಲೆಗಳ ಪರಿಶೀಲನೆ ನಡೆಸಿದ್ದರು. ಅಂದು ಪಪ್ಪಿ ಮನೆಯಲ್ಲಿ ಕೋಟಿ ಕೋಟಿ ಹಣ ಜೊತೆ ಚಿನ್ನಾಭರಣ ವಿದೇಶಿ ಕರೆನ್ಸಿಯನ್ನ ಇಡಿ ವಶಕ್ಕೆ ಪಡೆದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮನ್ರೇಗಾ ಹೆಸರು ಬದಲಾವಣೆಗೆ ವಿರೋಧ: ನಾಳೆ ಕಾಂಗ್ರೆಸ್​ನಿಂದ ರಾಜಭವನ ಚಲೋ- DCM ಡಿಕೆ ಶಿವಕುಮಾರ್

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ಸಿದ್ದರಾಮಯ್ಯ ಆಕ್ರೋಶ ಬೆನ್ನಲ್ಲೇ​ ರಾಜೀವ್ ಗೌಡ ಬಂಧಿಸಿದ ಪೊಲೀಸರು!

News headlines 26-01-2026| R-Day: ಸರ್ಕಾರದ ಭಾಷಣ ಸಂಪೂರ್ಣ ಓದಿದ ರಾಜ್ಯಪಾಲರು; ಶತಾವಧಾನಿ ಗಣೇಶ್ ಸೇರಿ ರಾಜ್ಯದ 8 ಸಾಧಕರಿಗೆ ಪದ್ಮ ಪ್ರಶಸ್ತಿ; ಶಿವಮೊಗ್ಗ-ಭದ್ರಾವತಿ ರಸ್ತೆಯಲ್ಲಿ ಭೂಕುಸಿತ: ಬದಲಿ ಸಂಚಾರ ಮಾರ್ಗ

ಭಾರತದಲ್ಲಿ ಹಿಂದೂಗಳಿಂದಾಗಿ ಮುಸ್ಲಿಮರು ಸುರಕ್ಷಿತವಾಗಿದ್ದಾರೆ: ಅಸ್ಸಾಂ ಚುನಾವಣೆಗೂ ಮುನ್ನ ಮೌಲಾನಾ ಬದ್ರುದ್ದೀನ್ ಹೇಳಿಕೆ!

'Op Sindoor: ಭಾರತೀಯ ವಾಯುಪಡೆಯ ಸಾಮರ್ಥ್ಯ ನೋಡಿಯೇ ಬೆಚ್ಚಿಬಿದ್ದ ಪಾಕಿಸ್ತಾನ ಕದನ ವಿರಾಮಕ್ಕೆ ಒತ್ತಾಯಿಸಿತ್ತು': ಸ್ವಿಸ್ ವರದಿ

SCROLL FOR NEXT