ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಕೆ.ಸಿ ವ್ಯಾಲಿ 2ನೇ ಹಂತದ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳ ಅಂತರ್ಜಲ ಅಭಿವೃದ್ಧಿಗೆ ನಾವು ಹಿಂದಿನ ಸಲ ಅಧಿಕಾರದಲ್ಲಿದ್ದಾಗ ಕೈಗೊಂಡ ಯೋಜನೆಗಳು ಈ ಭಾಗದ ರೈತರ ಜೀವನ ಮಟ್ಟವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ.

ಕೋಲಾರ: ಲಕ್ಷ್ಮೀ ಸಾಗರ ಪಂಪ್ ಹೌಸ್ ನಿಂದ ಕೋಲಾರ ಜಿಲ್ಲೆಯ ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಕೆ.ಸಿ ವ್ಯಾಲಿ 2ನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಚಾಲನೆ ನೀಡಿದರು.

ಕೋಲಾರ ತಾಲ್ಲೂಕಿನ ಲಕ್ಷ್ಮಿಸಾಗರದಲ್ಲಿ ಪಂಪ್‌ಹೌಸ್‌ ಇದ್ದು, ಮುಖ್ಯಮಂತ್ರಿ ಅಧಿಕೃತ ನಿವಾಸ ಕಾವೇರಿಯಿಂದ ಅವರು ವರ್ಚುವಲ್‌ ವೇದಿಕೆಯಲ್ಲಿ ಉದ್ಘಾಟನೆ ಮಾಡಲಿದ್ದಾರೆ.

ನಂತರ ಮಾತನಾಡಿದ ಮುಖ್ಯಮಂತ್ರಿಗಳು, ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳ ಅಂತರ್ಜಲ ಅಭಿವೃದ್ಧಿಗೆ ನಾವು ಹಿಂದಿನ ಸಲ ಅಧಿಕಾರದಲ್ಲಿದ್ದಾಗ ಕೈಗೊಂಡ ಯೋಜನೆಗಳು ಈ ಭಾಗದ ರೈತರ ಜೀವನ ಮಟ್ಟವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ. 250ಕ್ಕೂ ಹೆಚ್ಚು ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ಪ್ರತಿನಿತ್ಯ ಹರಿಸಲಾಗುತ್ತಿದೆ ಎಂದು ಹೇಳಿದರು.

ಕೆ.ಸಿ.ವ್ಯಾಲಿ ಎರಡನೇ ಹಂತದ ಯೋಜನೆಯಡಿ ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸಲಾಗುವುದು. ಮೊದಲನೇ ಹಂತದಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೋಲಾರ - ಚಿಕ್ಕಬಳ್ಳಾಪುರ ಕೆರೆಗಳನ್ನು ಯಶಸ್ವಿಯಾಗಿ ತುಂಬಿಸಲಾಗಿದೆ. ಈ ನೀರನ್ನು ಕುಡಿಯಲು ಬಳಸುವುದಿಲ್ಲ. ಕೆರೆ ತುಂಬಿಸಿದ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟ ಉತ್ತಮಗೊಂಡಿದೆ.

ಯೋಜನೆ ಬಗ್ಗೆ ಕೆಲವರು ಅಪಪ್ರಚಾರ ಮಾಡಿದರೂ, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂಬುದು ಈಗಾಗಲೇ ಸಾಬೀತಾಗಿದೆ. ಬೆಳೆಗಳಿಗೆ, ದನಕರುಗಳಿಗೆ ಯಾವುದೇ ತೊಂದರೆ ಇಲ್ಲ ಎಂದು ನಿರೂಪಿತವಾಗಿದೆ ಎಂದು ತಿಳಿಸಿದರು.

ಕೆ.ಸಿ.ವ್ಯಾಲಿ ಎರಡನೇ ಹಂತ ಡಿಸೆಂಬರ್‌ ಅಂತ್ಯದ ಒಳಗೆ ಪೂರ್ಣಗೊಳ್ಳಲಿದ್ದು, ಇದರಿಂದ 272 ಕೆರೆಗಳನ್ನು ತುಂಬಿಸಲು ಸಾಧ್ಯವಿದೆ. ಕೋಲಾರ, ಚಿಕ್ಕಬಳ್ಳಾಪುರ ಭಾಗದಲ್ಲಿ ನದಿಗಳಲಿಲ್ಲದೆ ಇರುವುದರಿಂದ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದ್ದು, ರೂ.446 ಕೋಟಿಗಳ ವೆಚ್ಚದಲ್ಲಿ ಇದನ್ನು ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026, qualifier 1: ಟಾಸ್ ಗೆದ್ದ GT ಬೌಲಿಂಗ್ ಆಯ್ಕೆ, ಕುತೂಹಲಕ್ಕೆ ಬ್ರೇಕ್, ವೆಂಕಟೇಶ್ ಅಯ್ಯರ್ ಗೆ ಸ್ಟಿಕ್ ಆದ RCB!

Bengaluru Rains: ಗುಡುಗು, ಸಿಡಿಲು ಸಹಿತ ಭಾರೀ ಮಳೆ; ಹಳಿ ಮೇಲೆ ಮರ ಬಿದ್ದು, ಮೆಟ್ರೋ ಸಂಚಾರ ವ್ಯತ್ಯಯ!

ಫೈನಲ್ ಫೈಟ್: ಸಿದ್ದರಾಮಯ್ಯ ಮನವೊಲಿಕೆಗೆ ರಾಹುಲ್ ಗಾಂಧಿ ಯತ್ನ; ಯತೀಂದ್ರಗೆ DCM ಸ್ಥಾನ, ರಾಜ್ಯಸಭೆ ಆಫರ್?

ಪಟ್ಟಕ್ಕಾಗಿ ಫೈನಲ್ ಫೈಟ್: ಮೂರು ಷರತ್ತುಗಳನ್ನು ಹೈಕಮಾಂಡ್ ಮುಂದಿಟ್ಟ ಡಿಕೆಶಿ; CM ಹುದ್ದೆಗಾಗಿ ಬಿಗಿಪಟ್ಟು!

SCROLL FOR NEXT