ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರಿನಲ್ಲಿ ನವಜಾತ ಶಿಶು ಮಾರಾಟ ಜಾಲ ಪತ್ತೆ: ವೈದ್ಯ ಸೇರಿ ಇಬ್ಬರ ಬಂಧನ

ಉಡುಪಿಯ ಕಾಪು ತಾಲ್ಲೂಕು ಕಲ್ಲುಗುಡ್ಡೆಯ ನಿವಾಸಿ ಪ್ರಭಾವತಿ– ರಮೇಶ್ ಮೂಲ್ಯ ದಂಪತಿ ಅಂಗನವಾಡಿಗೆ ಶಿಶುವನ್ನು ಕರೆದುಕೊಂಡು ಬಂದಿದ್ದರು. ಶಿಶು ದಂಪತಿಯದ್ದಲ್ಲ ಎಂಬ ಶಂಕೆ ಅಂಗನವಾಡಿ ಕಾರ್ಯಕರ್ತೆಗೆ ಬಂದಿದೆ.

ಮಂಗಳೂರು: ಆಸ್ಪತ್ರೆಯಿಂದ ಕಾನೂನುಬಾಹಿರವಾಗಿ ಮಗು ಮಾರಾಟ ಮಾಡಿದ್ದ ಜಾಲವೊಂದು ಪತ್ತೆಯಾಗಿದ್ದು, ವೈದ್ಯ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಉಡುಪಿಯ ಕಾಪು ತಾಲ್ಲೂಕು ಕಲ್ಲುಗುಡ್ಡೆಯ ನಿವಾಸಿ ಪ್ರಭಾವತಿ– ರಮೇಶ್ ಮೂಲ್ಯ ದಂಪತಿ ಅಂಗನವಾಡಿಗೆ ಶಿಶುವನ್ನು ಕರೆದುಕೊಂಡು ಬಂದಿದ್ದರು. ಶಿಶು ದಂಪತಿಯದ್ದಲ್ಲ ಎಂಬ ಶಂಕೆ ಅಂಗನವಾಡಿ ಕಾರ್ಯಕರ್ತೆಗೆ ಬಂದಿದೆ. ವಿಚಾರಿಸಿದಾಗ, ಮಂಗಳೂರಿನಲ್ಲಿ ಶಿಶು ಖರೀದಿಸಿದ್ದಾಗಿ ತಿಳಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ (ಸಿಡಿಪಿಒ) ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಅವರು ಆಗಸ್ಟ್ 21 ರಂದು ಶಿರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮಕ್ಕಳಾಗದ ಪ್ರಭಾವತಿ ಮತ್ತು ಅವರ ಪತಿ ರಮೇಶ್ ಮೂಲ್ಯ ಅವರು ಆಗಸ್ಟ್ 3 ರಂದು ಮಂಗಳೂರಿನ ಕೊಲಾಕೊ ಆಸ್ಪತ್ರೆಯಲ್ಲಿ ಜನಿಸಿದ ಹೆಣ್ಣು ಮಗುವನ್ನು ತಮ್ಮದು ಎಂದು ಸುಳ್ಳು ಹೇಳಿಕೊಂಡು ಪಡೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದೂರಿನ ಆಧಾರದ ಮೇಲೆ ತನಿಖೆಗಿಳಿದ ಪೊಲೀಸರಿಗೆ ಮಗು ಮಾರಾಟ ಜಾಲ ಪತ್ತೆಯಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ನವನೀತ್ ನಾರಾಯಣ ಎಂಬಾತ ಮಾನಸಿಕ ಯುವತಿ ಮೇಲೆ ಅತ್ಯಾಚಾರ ಎಸಗಿದ್ದ. ಸಂತ್ರಸ್ತೆಗೆ ಮಗುವಾದ ಬಳಿಕ ಉಡುಪಿ ದಂಪತಿಗಳು ಆಸ್ಪತ್ರೆಯಿಂದಲೇ ಮಗುವನ್ನು ಖರೀದಿಸಿದ್ದಾರೆ.

ಬಳಿಕ ವಿಜಯಲಕ್ಷ್ಮಿ ಎನ್ನುವ ಮಧ್ಯವರ್ತಿ ಮಹಿಳೆಯ ಮೂಲಕ 4 ಲಕ್ಷ ರೂ. ಗೆ ಪಾವತಿಸಿದ್ದಾರೆ. ಮಗು ಮಾರಾಟದಲ್ಲಿ ವೈದ್ಯ ಡಾ.ಸೋಮೇಶ್ ಸೋಲೋಮನ್ ಶಾಮೀಲಾಗಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಉಡುಪಿಯ ಶಿರ್ವ ಠಾಣೆಯ ಪೊಲೀಸರು ಮೂವರನ್ನು ಬಂಧಿಸಿದ್ದು, ಮಗು ಖರೀದಿಸಿದ್ದ ಉಡುಪಿ ದಂಪತಿಗಳ ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಯುದ್ಧದ ಕುರಿತು ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಜೊತೆ ಮೋದಿ ಮಹತ್ವದ ಮಾತುಕತೆ

ಗುಜರಾತ್: ರಾಹುಲ್ ಗಾಂಧಿ ಪರ ವಕಾಲತ್ತು ವಹಿಸಿದ್ದ ವಕೀಲ ಫಿರೋಜ್ ಪಠಾಣ್ ಮೃತದೇಹ ತಾಪಿ ನದಿಯ ದಡದಲ್ಲಿ ಪತ್ತೆ!

ಭಾರತಕ್ಕೆ ಉತ್ತಮ ವಿರೋಧಪಕ್ಷಕ್ಕಾಗಿ ಅಭಿಯಾನ ಅಗತ್ಯ: ಸೀತಾರಾಮನ್

ಧರ್ಮಸ್ಥಳ ಬುರುಡೆ ರಹಸ್ಯ ಬಹಿರಂಗ: ಮುಸುಕುಧಾರಿಗೆ 'ಬುರುಡೆ' ಕೊಟ್ಟಿದ್ದು ಸೌಜನ್ಯ ಮಾವ!

ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ; ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ ಅನುಷ್ಠಾನ

SCROLL FOR NEXT