ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿಸುವ ಸಿಎಂ 
ರಾಜ್ಯ

ಜಕ್ಕೂರು ಏರೋಡ್ರೋಂ ವಿಸ್ತರಣೆ, ಸ್ಥಳ ಬಳಕೆಗೆ ಚಿಂತನೆ: ಸಿಎಂ ಸಿದ್ದರಾಮಯ್ಯ

ಜಕ್ಕೂರು ಎರೋಡ್ರೋಂ ರನ್ ವೇ ವಿಸ್ತರಣೆ ಮಾಡುವುದು ಹಾಗೂ ಈ ಜಾಗವನ್ನು ಸಂಪೂರ್ಣವಾಗಿ ಸಾರ್ವಜನಿಕ ಉಪಯೋಗಕ್ಕೆ ಬಳಸಿಕೊಳ್ಳಲು ಸರ್ಕಾರದಿಂದ ಏನು ಮಾಡಬಹುದು ಎನ್ನುವ ಬಗ್ಗೆ ಚಿಂತನೆ ನಡೆದಿದೆ.

ಬೆಂಗಳೂರು: ಜಕ್ಕೂರು ಏರೋಡ್ರೋಂ ರನ್ ವೇ ವಿಸ್ತರಿಸಿಸಲು ಹಾಗೂ ಈ ಜಾಗವನ್ನು ಸಂಪೂರ್ಣವಾಗಿ ಸಾರ್ವಜನಿಕ ಉಪಯೋಗಕ್ಕೆ ಬಳಸಿಕೊಳ್ಳಲು ಏನೇನು ಮಾಡಬಹುದೆಂಬ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದರು.

ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಮತ್ತು ಏರೋಡ್ರೋಮ್ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಮುಖ್ಯಮಂತ್ರಿಗಳು ಬುಧವಾರ ಚರ್ಚೆ ನಡೆಸಿದರು.

ಜಕ್ಕೂರು ಎರೋಡ್ರೋಂ ರನ್ ವೇ ವಿಸ್ತರಣೆ ಮಾಡುವುದು ಹಾಗೂ ಈ ಜಾಗವನ್ನು ಸಂಪೂರ್ಣವಾಗಿ ಸಾರ್ವಜನಿಕ ಉಪಯೋಗಕ್ಕೆ ಬಳಸಿಕೊಳ್ಳಲು ಸರ್ಕಾರದಿಂದ ಏನು ಮಾಡಬಹುದು ಎನ್ನುವ ಬಗ್ಗೆ ಚಿಂತನೆ ನಡೆದಿದೆ. ಈ ಬಗ್ಗೆ ಸರ್ಕಾರದ ಮುಂದೆ ಎರಡು ಯೋಜನೆಗಳಿವೆ. ಇಲ್ಲಿ ಮೇಲ್ಸೇತುವೆ ಬಂದಿರುವುದರಿಂದ ಸ್ವಲ್ಪ ಅಡಚಣೆಯಾಗುತ್ತಿದೆ. ಮೇಲ್ಸೇತುವೆ ಬರುವ ಬಗ್ಗೆ ಮೊದಲೇ ತಿಳಿದಿರಲಿಲ್ಲ. ಇಲ್ಲಿ 200 ಎಕರೆಗಿಂತಲೂ ಹೆಚ್ಚಿನ ಸ್ಥಳವಿದ್ದು, ಜಕ್ಕೂರು ವೈಮಾನಿಕ ತರಬೇತಿ ಶಾಲೆ ನಡೆಯುತ್ತಿದೆ.

ರನ್ ವೇ ವಿಸ್ತರಣೆಗೆ ಪಕ್ಕದಲ್ಲಿಯೇ ಜಮೀನನ್ನು ಪಡೆಯಬೇಕು. ಇದಕ್ಕೆ ಮೂರು ಎಕರೆಗಿಂತ ಹೆಚ್ಚು ಜಮೀನಿನ ಅಗತ್ಯವಿದೆ. ಮಾಲೀಕರು ಜಮೀನನ್ನು ಕೊಡುವುದಿಲ್ಲ ಎಂದು ಹೇಳುತ್ತಿದ್ದು, ಬೆಲೆ ಕೂಡ ದುಬಾರಿ ಆಗಿದೆ. ಲಭ್ಯ ಸ್ಥಳವನ್ನು ಹೇಗೆ ಉಪಯೋಗಿಸಬೇಕು ಎಂದೂ ಚಿಂತನೆ ನಡೆಯುತ್ತಿದೆ. ವೈಮಾನಿಕ ತರಬೇತಿ ಶಾಲೆ ನಡೆಸಬೇಕೆಂದು ನ್ಯಾಯಾಲಯದ ಆದೇಶವಿದ್ದು, ನಮ್ಮ ಸರ್ಕಾರ ಇನ್ನೇನು ಮಾಡಬಹುದು ಎಂದು ಪರಿಶೀಲಿಸುತ್ತಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT