ಆಲಮಟ್ಟಿ ಜಲಾಶಯ 
ರಾಜ್ಯ

ಆಲಮಟ್ಟಿ ಜಲಾಶಯ ಭರ್ತಿ: ನಾಳೆ ಕೃಷ್ಣೆಗೆ ಸಿಎಂ ಬಾಗಿನ ಅರ್ಪಣೆ

ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೆಲಿಕಾಪ್ಟರ್ ಮೂಲಕ ಆಲಮಟ್ಟಿ ತಲುಪಲಿದ್ದು, ನಂತರ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ.

ವಿಜಯಪುರ: ಉತ್ತರ ಕರ್ನಾಟಕದ ಜೀವನದಿ ಕೃಷ್ಣಾ ನದಿ ಮೈದುಂಬಿ ಹರಿಯುತ್ತಿದ್ದು, ಉತ್ತರ ಕರ್ನಾಟಕದ ಜೀವನಾಡಿಯಾಗಿರುವ ಆಲಮಟ್ಟಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಕೃಷ್ಣೆಯ ಜಲಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸೆ.6ರಂದು ಬಾಗಿನ ಅರ್ಪಿಸಲಿದ್ದಾರೆ.

ಜಲಾಶಯದ ಒಳಹರಿವು ಸ್ಥಿರವಾಗಿ ಮುಂದುವರೆದಿದೆ, ಇದರಿಂದಾಗಿ ಆಲಮಟ್ಟಿ ಜಲಾಶಯ ಭರ್ತಿಯಾಗಿದೆ. ಗುರುವಾರ ಜಲಾಶಯ ತನ್ನ ಪೂರ್ಣ ಸಂಗ್ರಹ ಸಾಮರ್ಥ್ಯವಾದ 519.60 ಮೀಟರ್ ಅನ್ನು ತಲುಪಿದ್ದು, ಅಣೆಕಟ್ಟಿನಲ್ಲಿ 123.081 ಟಿಎಂಸಿಎಫ್‌ಟಿ ನೀರು ಸಂಗ್ರಹವಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಲಾಶಯದ ಒಳಹರಿವು 59,312 ಕ್ಯೂಸೆಕ್‌ಗಳಾಗಿದ್ದು, ನಾಲ್ಕು ಕ್ರೆಸ್ಟ್ ಗೇಟ್‌ಗಳು ಮತ್ತು ಕೆಪಿಸಿಎಲ್ ಚಾನಲ್‌ಗಳ ಮೂಲಕ 50,000 ಕ್ಯೂಸೆಕ್‌ಗಳನ್ನು ಬಿಡುಗಡೆ ಮಾಡಲಾಗಿದೆ.

ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೆಲಿಕಾಪ್ಟರ್ ಮೂಲಕ ಆಲಮಟ್ಟಿ ತಲುಪಲಿದ್ದು, ನಂತರ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ಕೆಬಿಜೆಎನ್‌ಎಲ್ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯಲ್ಲಿ ಪರಿಶೀಲನಾ ಸಭೆ ನಡೆಸಿ, ಮಾಧ್ಯಮಗಳೊಂದಿಗೆ ಸಂವಾದ ನಡೆಸಲಿದ್ದಾರೆಂದು ತಿಳಿದುಬಂದಿದೆ.

ಈ ಮಧ್ಯೆ, ಹಲವಾರು ಸಂಘಟನೆಗಳು ವಿವಿಧ ವಿಷಯಗಳ ಕುರಿತು ಮನವಿ ಸಲ್ಲಿಸಲು ಸಿಎಂ ಅವರನ್ನು ಭೇಟಿ ಮಾಡಲು ಸಿದ್ಧತೆ ನಡೆಸುತ್ತಿವೆ.

ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 519 ಮೀಟರ್‌ನಿಂದ 524 ಮೀಟರ್‌ಗೆ ಹೆಚ್ಚಿಸಲು ಶೀಘ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲು ರೈತ ಸಂಘಟನೆಗಳು ಸಿಎಂ ಅವರನ್ನು ಭೇಟಿ ಮಾಡಲು ಯೋಜಿಸುತ್ತಿದ್ದರೆ, ಪಿಪಿಪಿ ಮಾದರಿಯಲ್ಲಿ ವಿಜಯಪುರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ಪ್ರಸ್ತಾವನೆಯನ್ನು ಕೈಬಿಡುವಂತೆ ಒತ್ತಾಯಿಸಲು ವಿದ್ಯಾರ್ಥಿಗಳು ಮತ್ತು ಇತರ ಸಂಘಟನೆಗಳು ಸಿಎಂ ಅವರನ್ನು ಭೇಟಿ ಮಾಡಲು ಸಿದ್ಧತೆ ನಡೆಸುತ್ತಿವೆ.

ಪ್ರಸ್ತಾವನೆಯನ್ನು ವಿರೋಧಿಸಿ ಪ್ರತಿಭಟನೆ ಈಗಾಗಲೇ ತೀವ್ರಗೊಂಡಿದ್ದು, ಹಲವಾರು ಸಂಘಟನೆಗಳು ಸರ್ಕಾರವನ್ನು ಟೀಕಿಸುತ್ತಿವೆ. ಪ್ರಸ್ತಾವನೆಯನ್ನು ಕೈಬಿಡುವಂತೆ ಮಾತ್ರವಲ್ಲದೆ ಸಂಪೂರ್ಣವಾಗಿ ಸರ್ಕಾರಿ ಸ್ವಾಮ್ಯದ ವೈದ್ಯಕೀಯ ಕಾಲೇಜನ್ನು ಸ್ಥಾಪಿಸುವಂತೆ ಒತ್ತಾಯಿಸುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗೋವಾ ನೈಟ್ ಕ್ಲಬ್​ನಲ್ಲಿ ಭೀಕರ ಅಗ್ನಿ ದುರಂತ: ಪ್ರವಾಸಿಗರು ಸೇರಿ 25 ಮಂದಿ ಸಜೀವ ದಹನ, ತನಿಖೆಗೆ ಆದೇಶ

Goa Nightclub Tragedy: ಡ್ಯಾನ್ಸ್ ಫ್ಲೋರ್‌ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಕನಿಷ್ಠ 100 ಮಂದಿ ಇದ್ದರು..!

ಕಾಂಗ್ರೆಸ್ ಕುರ್ಚಿ ಕದನ: ಸೋನಿಯಾ ಗಾಂಧಿ ನೇತೃತ್ವದ ಮಹತ್ವದ ಸಭೆ, ತೆಗೆದುಕೊಂಡ ನಿರ್ಧಾರವೇನು..?

ಗೋವಾ ನೈಟ್ ಕ್ಲಬ್​ ಅಗ್ನಿ ದುರಂತ: ಪ್ರಧಾನಿ ಮೋದಿ, ರಾಷ್ಟ್ರಪತಿ ತೀವ್ರ ಸಂತಾಪ, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

ಎಸ್‌ಸಿ-ಎಸ್‌ಟಿ ಕೋಟಾ ಹೆಚ್ಚಳಕ್ಕೆ ಪ್ರಧಾನಿ ಸಹಾಯ ಕೋರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಉಗ್ರಪ್ಪ ಒತ್ತಾಯ

SCROLL FOR NEXT