ಸಾಂದರ್ಭಿಕ ಚಿತ್ರ 
ರಾಜ್ಯ

SC ಒಳಮೀಸಲಾತಿ ಅಳವಡಿಸಿಕೊಂಡು ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸಲು ರಾಜ್ಯ ಸರ್ಕಾರ ಆದೇಶ

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹಿನ್ನೆಲೆ 2024ರ ಅಕ್ಟೋಬರ್ 28ರ ನಂತರ ಹೊರಡಿಸಲಾದ ಎಲ್ಲ ನೇಮಕಾತಿ ಅಧಿಸೂಚನೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಬೇಕು.

ಬೆಂಗಳೂರು: ರಾಜ್ಯದ ವಿವಿಧ ಇಲಾಖೆ, ನಿಗಮ-ಮಂಡಳಿ, ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ 2024ರ ಅ.28ರ ಬಳಿಕ ಹೊರಡಿಸಿರುವ ಎಲ್ಲಾ ನೇರ ನೇಮಕಾತಿ ಅಧಿಸೂಚನೆಗಳನ್ನು ರದ್ದುಗೊಳಿಸುವಂತೆ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಸಚಿವ ಸಂಪುಟದ ನಿರ್ಣಯದಂತೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ(ಡಿಪಿಎಆರ್) ಸರಕಾರದ ಅಧೀನ ಕಾರ್ಯದರ್ಶಿ ವೀರಭದ್ರ ಅವರು, ಈ ಕುರಿತು ಅಧಿಕೃತ ಸುತ್ತೋಲೆ ಹೊರಡಿಸಿದ್ದು, ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹಿನ್ನೆಲೆ 2024ರ ಅಕ್ಟೋಬರ್ 28ರ ನಂತರ ಹೊರಡಿಸಲಾದ ಎಲ್ಲ ನೇಮಕಾತಿ ಅಧಿಸೂಚನೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಬೇಕು ಎಂದು ಸೂಚನೆ ನೀಡಲಾಗಿದೆ.

ಅಲ್ಲದೆ, ಈ ನೇಮಕಾತಿಗಳಿಗೆ ಪರಿಶಿಷ್ಟಜಾತಿ (ಎಸ್ಸಿ) ಒಳಮೀಸಲಾತಿ ಅಳವಡಿಸಿಕೊಂಡು ಕಾಲಮಿತಿಯೊಳಗಾಗಿ ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸುವಂತೆಯೂ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳದ ಎಲ್ಲಾ ನೇಮಕಾತಿಗಳಿಗೂ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಅನ್ವಯಿಸಿಕೊಳ್ಳುವಂತೆ ನಿರ್ಧರಿಸಲಾಗಿದೆ. ಈ ಸಂಬಂಧ ಪರಿಶಿಷ್ಟ ಜಾತಿಗಳಲ್ಲಿನ 101 ಜಾತಿಗಳಿಗೆ ರೋಸ್ಟರ್‌ ಬಿಂದುವನ್ನೂ ನಿಗದಿ ಮಾಡಲಾಗಿದೆ. ಹೀಗಾಗಿ ನೇರ ನೇಮಕಾತಿ ಅಧಿಸೂಚನೆಗಳಿಗೆ ಒಳ ಮೀಸಲಾತಿ ಅನ್ವಯ ಮಾಡಿಕೊಳ್ಳುವಂತೆ ಆದೇಶಿಸಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

India-US Relationship: ನಿಮ್ಮ ಭಾವನೆಗಳನ್ನು ಆಳವಾಗಿ ಗೌರವಿಸುತ್ತೇನೆ-ಬೆಂಬಲಿಸುತ್ತೇನೆ: ಸದಾಕಾಲ ಸ್ನೇಹಿತನಾಗಿರುತ್ತೇನೆಂದ ಟ್ರಂಪ್'ಗೆ ಮೋದಿ ಉತ್ತರ; Video

ಧರ್ಮಸ್ಥಳ ವಿಚಾರದಲ್ಲಿ ಸಂಘಟಿತ ಪಿತೂರಿ: ತಲೆಬುರುಡೆ ಪ್ರಕರಣದಲ್ಲಿ ಕೇರಳ CPI ಸಂಸದ, ಬುರುಡೆ ತಂಡ ಹೇಳಿದ್ದೇನು?

'Khalistani ಉಗ್ರ ಸಂಘಟನೆಗಳಿಗೆ ಹಣಕಾಸು ನೆರವು': ಕೊನೆಗೂ ಸತ್ಯ ಒಪ್ಪಿಕೊಂಡ Canada

Raichur: ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ಇಬ್ಬರ ಬಂಧನ, Video Viral

ಜನಾಂಗೀಯ ಹಿಂಸಾಚಾರ: ಮೊದಲ ಬಾರಿ ಮಣಿಪುರಕ್ಕೆ ಮೋದಿ ಭೇಟಿ ಸಾಧ್ಯತೆ; ಪ್ರಧಾನಿ ಸ್ವಾಗತಕ್ಕೆ ಭರ್ಜರಿ ಸಿದ್ಧತೆ

SCROLL FOR NEXT