ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ 
ರಾಜ್ಯ

ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ; ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ ಅನುಷ್ಠಾನ

ಇಂದು ಜಲಸಂಪನ್ಮೂಲ ಇಲಾಖೆ ಮತ್ತು ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ಆಯೋಜಿಸಿದ್ದ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕೃಷ್ಣೆಯ ಒಡಲಿಗೆ ಗಂಗಾಪೂಜೆ ನೆರವೇರಿಸಿ, ಬಳಿಕ ಬಾಗಿನ ಅರ್ಪಿಸಿದರು.

ವಿಜಯಪುರ: ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಬಾಗಿನ ಅರ್ಪಿಸಿದರು.

ಇಂದು ಜಲಸಂಪನ್ಮೂಲ ಇಲಾಖೆ ಮತ್ತು ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ಆಯೋಜಿಸಿದ್ದ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕೃಷ್ಣೆಯ ಒಡಲಿಗೆ ಗಂಗಾಪೂಜೆ ನೆರವೇರಿಸಿ, ಬಳಿಕ ಬಾಗಿನ ಅರ್ಪಿಸಿದರು.

ನಾಡಿನಾದ್ಯಂತ ಉತ್ತಮ ಮಳೆಯಾಗಿ ಜಲಾಶಯಗಳೆಲ್ಲಾ ಮೈದುಂಬಿ ನಿಂತಿವೆ. ಇದೇ ರೀತಿ ಪ್ರಕೃತಿ ಮಾತೆ ನಮ್ಮೆಲ್ಲರನ್ನು ಪೊರೆಯಲಿ ಎಂದು ಆಶಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗುವುದು. ರೈತರು ಯಾರೂ ಪರಿಹಾರ ಕೊಡಿ ಎಂದು ನ್ಯಾಯಾಲಯಕ್ಕೆ ಹೋಗಬಾರದು. ಇದರಿಂದ ಇಡೀ ಪ್ರಕ್ರಿಯೆ ವಿಳಂಬವಾಗುತ್ತದೆ ಎಂದು ಮನವಿ ಮಾಡಿದ್ದಾರೆ.

ಕೃಷ್ಣಾ ಮೇಲ್ದಂಡೆ ಯೋಜನೆ ಕುರಿತು ರೈತ ಹೋರಾಟಗಾರರೊಂದಿಗೆ ಹಿಂದೆಯೇ ಬೆಳಗಾವಿಯಲ್ಲಿ ಸಭೆ ನಡೆಸಿದ್ದೆ. ಅಲ್ಲಿ ಎಲ್ಲರೂ ಒಪ್ಪಿಗೆ ಪತ್ರ ನೀಡಿ ಎಂದಿರುವ ಹಿನ್ನೆಲೆಯಲ್ಲಿ ಸರ್ಕಾರವೂ ಒಪ್ಪಿಕೊಂಡಿದೆ. ಉಪಮುಖ್ಯಮಂತ್ರಿಗಳು ಇತ್ತೀಚೆಗೆ ಈ ಭಾಗದ ರೈತರು, ಶಾಸಕರೊಂದಿಗೆ ಸಭೆ ಕರೆದು ಚರ್ಚಿಸಿದ್ದು , ಒಪ್ಪಿಗೆ ಆದೇಶ ನೀಡುವುದು ಒಂದು ಹಂತಕ್ಕೆ ಬಂದಿದೆ. ಎಲ್ಲರ ಒಪ್ಪಿಗೆಯ ಮೇಲೆ ಒಪ್ಪಂದ ಮಾಡಿಕೊಳ್ಳಲಾಗುವುದು. ಮುಂದಿನ ವಾರದೊಳಗೆ ಈ ಬಗ್ಗೆ ಇತ್ಯರ್ಥ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದಲ್ಲಿ 519.6 ಮೀ. ರಿಂದ 524.25 ಮೀಟರ್ ಗೆ ಎತ್ತರಿಸುವುದರಿಂದ 130 ಟಿಎಂಸಿ ನೀರನ್ನು ಸಂಗ್ರಹಿಸಿ, ಬಳಕೆ ಮಾಡಲು ಅನುಕೂಲವಾಗಲಿದೆ. 173 ಟಿಎಂಸಿ ನೀರನ್ನು 6.6 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸಬಹುದಾಗಿದೆ. ಮೂರನೇ ಹಂತದ ಬಗ್ಗೆಯೂ ತೀರ್ಮಾನವಾಗಿದ್ದು, ಗೆಜೆಟ್ ಅಧಿಸೂಚನೆಯಾಗಿಲ್ಲ. ಇದಾದರೆ ನೀರಾವರಿ ಹಾಗೂ ಅಣೆಕಟ್ಟು ಎತ್ತರಿಸುವ ಕೆಲಸಗಳು ಆಗಲು ಅನುಕೂಲವಾಗಲಿದೆ ಎಂದಿದ್ದಾರೆ.

ಈ ವಿಚಾರಗಳ ಬಗ್ಗೆ ಮೂರು ಬಾರಿ ಸಂಬಂಧಪಟ್ಟ ಕೇಂದ್ರ ಸಚಿವರು ಹಾಗೂ ಪ್ರಧಾನಿಗಳನ್ನು ಭೇಟಿ ಮಾಡಲಾಗಿದೆ. ಉಪಮುಖ್ಯಮಂತ್ರಿ ಐದು ಬಾರಿ ಭೇಟಿಯಾಗಿದ್ದಾರೆ ಎಂದರು.

ನೀರಾವರಿ ನಮ್ಮ ಆದ್ಯತಾ ವಲಯ. ರೈತರಿಗೆ ಅನುಕೂಲವಾಗಬೇಕು. ರೈತರ ಜಮೀನುಗಳಿಗೆ ನೀರು ದೊರೆತು, ರೈತರ ಉತ್ಪನ್ನಗಳು ಹೆಚ್ಚಾಗಬೇಕು ಹಾಗೂ ಅವರ ಬದುಕು ಹಸನಾಗಬೇಕು ಎನ್ನುವುದು ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಯುದ್ಧದ ಕುರಿತು ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಜೊತೆ ಮೋದಿ ಮಹತ್ವದ ಮಾತುಕತೆ

ಗುಜರಾತ್: ರಾಹುಲ್ ಗಾಂಧಿ ಪರ ವಕಾಲತ್ತು ವಹಿಸಿದ್ದ ವಕೀಲ ಫಿರೋಜ್ ಪಠಾಣ್ ಮೃತದೇಹ ತಾಪಿ ನದಿಯ ದಡದಲ್ಲಿ ಪತ್ತೆ!

ಭಾರತಕ್ಕೆ ಉತ್ತಮ ವಿರೋಧಪಕ್ಷಕ್ಕಾಗಿ ಅಭಿಯಾನ ಅಗತ್ಯ: ಸೀತಾರಾಮನ್

ಧರ್ಮಸ್ಥಳ ಬುರುಡೆ ರಹಸ್ಯ ಬಹಿರಂಗ: ಮುಸುಕುಧಾರಿಗೆ 'ಬುರುಡೆ' ಕೊಟ್ಟಿದ್ದು ಸೌಜನ್ಯ ಮಾವ!

ಬೀಡಿಗಳಿಗೆ ಬಿಹಾರದ ಹೋಲಿಕೆ: ಕೇರಳ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮುಖ್ಯಸ್ಥನ ತಲೆದಂಡ

SCROLL FOR NEXT