ಡಿಸಿಎಂ ಡಿಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ  
ರಾಜ್ಯ

EVM ಬದಲು ಬ್ಯಾಲಟ್ ಪೇಪರ್ ಬಳಕೆಗೆ ನಿರ್ಧಾರ: ಸರ್ಕಾರದ ವಿರುದ್ಧ BJP ವಾಗ್ದಾಳಿ, ನಮ್ಮ ಅನುಭವದ ಮೇಲೆ ತೀರ್ಮಾನಿಸಿದ್ದೇವೆಂದ ಸಿಎಂ ಸಿದ್ದರಾಮಯ್ಯ

ಇವಿಎಂ ಬದಲಿಗೆ ಬ್ಯಾಲಟ್ ಪೇಪರ್ ಮೂಲಕ ಚುನಾವಣೆ ಮಾಡಬೇಕೆನ್ನುವುದು ನಮ್ಮ ಉದ್ದೇಶವಾಗಿದ್ದು, ನಮ್ಮ ಅನುಭವದ ಮೇಲೆ ನಾವು ಈ ತೀರ್ಮಾನ ಮಾಡಿದ್ದೇವೆ.

ಬೆಂಗಳೂರು: ಬ್ಯಾಲಟ್ ಪೇಪರ್ ಮೂಲಕ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇವಿಎಂ ಬದಲಿಗೆ ಬ್ಯಾಲಟ್ ಪೇಪರ್ ಮೂಲಕ ಚುನಾವಣೆ ಮಾಡಬೇಕೆನ್ನುವುದು ನಮ್ಮ ಉದ್ದೇಶವಾಗಿದ್ದು, ನಮ್ಮ ಅನುಭವದ ಮೇಲೆ ನಾವು ಈ ತೀರ್ಮಾನ ಮಾಡಿದ್ದೇವೆಂದು ಹೇಳಿದರು.

ಅನೇಕ ದೇಶಗಳು ಇವಿಎಂ ಬಳಸಿ ಪುನಃ ಬ್ಯಾಲಟ್ ಪೇಪರ್ ಮೂಲಕ ಚುನಾವಣೆ ಮಾಡುತ್ತಿವೆ. ಪಾರದರ್ಶಕ ಮತ್ತು ನಿಷ್ಪಕ್ಷಪಾತ ಚುನಾವಣೆಗಾಗಿ ಬ್ಯಾಲಟ್ ಪೇಪರ್ ಬಳಕೆಗೆ ನಾವು ನಿರ್ಧರಿಸಿದ್ದೇವೆಂದುತಿಳಇಸಿದರು.

ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮಾತನಾಡಿ, ರಾಜ್ಯ ಸರ್ಕಾರವು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮಾತ್ರ ಮತಪತ್ರ ಬಳಸಲು ತೀರ್ಮಾನಿಸಿದ್ದು, ಅದಕ್ಕೆ ಬಿಜೆಪಿ ಯಾಕೆ ಗಾಬರಿಯಾಗಬೇಕು? ಬಿಜೆಪಿ ನಾಯಕರು ಕಳ್ಳನ ಮನಸ್ಸು ಹುಳ್ಳಗೆ ಎನ್ನುವಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಟಾಂಗ್ ನೀಡಿದ್ದಾರೆ.

ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರಕ್ಕೆ ಅವಕಾಶವಿದೆ. ಅದಕ್ಕಾಗಿ ಈ ಚುನಾವಣೆಯನ್ನು ಮತಪತ್ರದ ಮೂಲಕ ನಡೆಸಲು ಸರ್ಕಾರ ತೀರ್ಮಾನಿಸಿದೆ. ಇದಕ್ಕೆ ಬಿಜೆಪಿ ಆತಂಕ ಪಡುತ್ತಿರುವುದೇಕೆ? ಬಿಜೆಪಿ ಸರ್ಕಾರದ ಅವಧಿಯಲ್ಲೇ ಇದಕ್ಕೆ ಅವಕಾಶ ನೀಡಿ ಕಾನೂನು ಮಾಡಲಾಗಿದೆ. ಅದನ್ನು ಬಳಸಿಯೇ ಈ ತೀರ್ಮಾನ ಕೈಗೊಳ್ಳಲಾಗಿದೆ. ಬಿಜೆಪಿಗರು ಕಳ್ಳನ ಮನಸ್ಸು ಹುಳ್ಳಗೆ ಎಂಬಂತೆ ವರ್ತಿಸುತ್ತಿದ್ದಾರೆ ಎಂದರು.

ನಾವು ಲೋಕಸಭೆ ಚುನಾವಣೆಗಳನ್ನು ಪರಿಶೀಲಿಸಿದ್ದೇವೆ. ಹೀಗಾಗಿ ಸಹಕಾರಿ ಸಂಘಗಳ ಚುನಾವಣೆ ನಡೆಸುವಂತೆಯೇ ಸ್ಥಳೀಯ ಸಂಸ್ಥೆ ಚುನಾವಣೆ ಮಾಡುತ್ತಿದ್ದೇವೆ. ಆದರೆ, ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗವೇ ತೀರ್ಮಾನಿಸಲಿದೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

India- US Relationship: ನಿಮ್ಮ ಭಾವನೆಗಳನ್ನು ಆಳವಾಗಿ ಗೌರವಿಸುತ್ತೇನೆ-ಬೆಂಬಲಿಸುತ್ತೇನೆ: ಸದಾಕಾಲ ಸ್ನೇಹಿತನಾಗಿರುತ್ತೇನೆಂದ ಟ್ರಂಪ್'ಗೆ ಮೋದಿ ಉತ್ತರ

ಮೋದಿ ಉತ್ತಮ-ಅದ್ಭುತ ಪ್ರಧಾನಿ, ಅವರೊಂದಿಗೆ ಎಂದಿಗೂ ಸ್ನೇಹಿತರಾಗಿರುತ್ತೇನೆ, ಭಾರತ-ಅಮೆರಿಕಾ ನಡುವೆ ವಿಶೇಷ ಬಾಂಧವ್ಯವಿದೆ: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

7 ಬಾರಿ ಸಂಚಾರಿ ನಿಯಮ ಉಲ್ಲಂಘನೆ: ಕೊನೆಗೂ ದಂಡ ಪಾವತಿಸಿದ ಸಿಎಂ Siddaramaiah, ಎಷ್ಟು ಗೊತ್ತಾ?

jersey Sponsorship: ಟೀಂ ಇಂಡಿಯಾಗೆ ಜೆರ್ಸಿ ಸ್ಪಾನ್ಸರ್‌ ಶಿಪ್ ದರ ಹೆಚ್ಚಿಸಿದ BCCI; ದ್ವಿಪಕ್ಷೀಯ, ICC ಪಂದ್ಯಗಳಿಗೆ ರೇಟು ಎಷ್ಟು ಗೊತ್ತಾ?

ಕರುಳಿನ ಆರೋಗ್ಯಕ್ಕೆ ಮನೆಮದ್ದು (ಕುಶಲವೇ ಕ್ಷೇಮವೇ)

SCROLL FOR NEXT