ಪ್ರತಾಪ್ ಸಿಂಹ, ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ಗೆ ಆಹ್ವಾನ: ಹೈಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ; ಸಿದ್ದರಾಮಯ್ಯ ಹೇಳಿದ್ದು ಏನು?

ಬಾನು ಮುಷ್ತಾಕ್ ಆಹ್ವಾನ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿ ಎಂದು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ರಾಜ್ಯ ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಬೆಂಗಳೂರು: ಈ ಬಾರಿಯ ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್‌ ಗೆ ಆಹ್ವಾನವನ್ನು ಆರಂಭದಿಂದಲೂ ವಿರೋಧಿಸಿಕೊಂಡು ಬಂದಿರುವ ಮಾಜಿ ಸಂಸದ ಪ್ರತಾಪ್ ಸಿಂಹ ಇದೀಗ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ.

ಬಾನು ಮುಷ್ತಾಕ್ ಆಹ್ವಾನ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿ ಎಂದು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ರಾಜ್ಯ ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.

ದಸರಾ ಉದ್ಘಾಟನೆ ವೇಳೆ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಬೇಕು. ವೇದ ಮಂತ್ರ, ಧಾರ್ಮಿಕ ಆಚರಣೆಗಳೊಂದಿಗೆ ಉದ್ಘಾಟನೆಯ ಸಂಪ್ರದಾಯವಿದೆ. ಬಾನು ಮುಷ್ತಾಕ್ ಹಿಂದೂ ವಿರೋಧಿ, ಕನ್ನಡ ವಿರೋಧಿ ಭಾವನೆ ಹೊಂದಿದ್ದಾರೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಬಾನು ಮುಷ್ತಾಕ್ ಅವರ ಆಯ್ಕೆ ಮಾಡಿದೆ ಎಂದು ಟೀಕಿಸಿದ್ದಾರೆ.

ಮೈಸೂರಿನ ರಾಜಮನೆತನದವರೂ ಸರ್ಕಾರದ ನಡೆ ವಿರೋಧಿಸಿದ್ದಾರೆ. ಆದರೂ ಸರ್ಕಾರದ ನಿರ್ಧಾರದಿಂದ ಹಿಂದೂಗಳ ಭಾವನೆಗೆ ಘಾಸಿ ಉಂಟು ಮಾಡಿದ್ದಾರೆ. ಹೀಗಾಗಿ ಬಾನು ಮುಷ್ತಾಕ್ ಅವರಿಗೆ ನೀಡಿದ ಆಹ್ವಾನ ಹಿಂಪಡೆಯುವಂತೆ ನಿರ್ದೇಶಿಸುವಂತೆ ಮನವಿ ಮಾಡಿದ್ದಾರೆ. ಹೈಕೋರ್ಟ್ ನಲ್ಲಿ ಈ ಅರ್ಜಿ ವಿಚಾರಣೆಗೆ ಬರಬೇಕಿದೆ.

'ಕೋರ್ಟ್​ಗೆ ಹೋಗಲಿ, ಬಹಳ ಸಂತೋಷ'

ಮತ್ತೊಂದೆಡೆ ವಿಜಯಪುರದ ಆಲಮಟ್ಟಿಯಲ್ಲಿ ಮಾತಾಡಿದ ಸಿಎಂ‌ ಸಿದ್ದರಾಮಯ್ಯ, ಪ್ರತಾಪ್ ಸಿಂಹ ಕೋರ್ಟ್​ಗೆ ಹೋಗಿದ್ದು ಬಹಳ ಸಂತೋಷ, ಅದನ್ನು ಕೋರ್ಟ್ ತೀರ್ಮಾನ ಮಾಡುತ್ತೆ ಎಂದಿದ್ದಾರೆ. ಈ ಹಿಂದೆ ನಿಸಾರ್ ಅಹ್ಮದ್ ದಸರಾ ಉದ್ಘಾಟನೆ ಮಾಡಿದಾಗ ಅವ್ರು ಯಾಕೆ ಕೋರ್ಟ್​ಗೆ ಹೋಗಲಿಲ್ಲ. ಟಿಪ್ಪು ಸುಲ್ತಾನ್​ ಮಾಡಿದ್ರಲ್ಲ ಆಗ ಯಾಕೆ ಏನು ಮಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.

ಪ್ರತಾಪ್ ಸಿಂಹ ಕೋರ್ಟ್​ಗೆ ಹೋಗಲಿ, ನಾವು ಕೂಡ ಕಾನೂನು ಹೋರಾಟ ಮಾಡ್ತೇವೆ. ಅವ್ರು ಇದರಲ್ಲಿ ರಾಜಕೀಯ ಹೋರಾಟ ಮಾಡಿದ್ರೆ, ಎಲ್ಲದಕ್ಕೂ ನಾವು ಉತ್ತರ ನೀಡುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಂದೇ ಮಾತರಂ 150ನೇ ವಾರ್ಷಿಕೋತ್ಸವ: ಲೋಕಸಭೆಯಲ್ಲಿಂದು ಚರ್ಚೆ, ಎಲ್ಲರ ಚಿತ್ತ ಪ್ರಧಾನಿ ಮೋದಿಯತ್ತ

ಬೆಳಗಾವಿ ಚಳಿಗಾಲ ಅಧಿವೇಶನ: ಸರ್ಕಾರ-ವಿಪಕ್ಷಗಳ ನಡುವೆ ಜಟಾಪಟಿ ಸಾಧ್ಯತೆ; ನಾಡದ್ರೋಹಿ MES ಮತ್ತೆ ಕ್ಯಾತೆ, 'ಮಹಾ ಮೇಳವ' ಸಮಾವೇಶಕ್ಕೆ ಮುಂದು..!

'ಮುಖ್ಯಮಂತ್ರಿಗಳೇ ಗಮನ ಕೊಡಿ': ಬಸ್ ಇಲ್ಲ.. ನಿತ್ಯ ಶಾಲೆಗೆ ಕಾಡಿನಲ್ಲಿ 14 ಕಿ.ಮೀ ನಡೆದೇ ಸಾಗುವ ವಿದ್ಯಾರ್ಥಿಗಳು!

ಬಾಬರ್ ಒಬ್ಬ ಆಕ್ರಮಣಕಾರ, ಬಾಬ್ರಿ ವಿಚಾರವನ್ನು ಭಾರತದ ಭ್ರಾತೃತ್ವ ಭಾವನೆಗೆ ಹೋಲಿಸದಿರಿ...

Goa Nightclub Tragedy: ನಾಲ್ವರ ಬಂಧನ, ಮೂವರು ಅಧಿಕಾರಿಗಳು ಅಮಾನತು

SCROLL FOR NEXT