ಬಂಧಿತ ಆರೋಪಿಗಳು 
ರಾಜ್ಯ

ಉಡುಪಿ: ಪೊಲೀಸರ ಮೇಲೆ ಕಾರು ಹತ್ತಿಸಲು ಯತ್ನಿಸಿದ ಇಬ್ಬರ ಬಂಧನ

ಬಂಧಿತ ಆರೋಪಿಗಳನ್ನು ಮೊಹಮ್ಮದ್ ಅಜೀಂ ಕಾಪು ಮತ್ತು ಬಜ್ಪೆಯ ಮೊಹಮ್ಮದ್ ರಾಜಿಕ್ ಎಂದು ಗುರುತಿಸಲಾಗಿದೆ.

ಉಡುಪಿ: ಹೆಜಮಾಡಿ ಟೋಲ್ ಪ್ಲಾಜಾ ಬಳಿ ತಮ್ಮನ್ನು ತಡೆಯಲು ಯತ್ನಿಸಿದ ಪೊಲೀಸರ ಮೇಲೆಯೇ ಕಾರು ಹರಿಸಲು ಯತ್ನಿಸಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಮೊಹಮ್ಮದ್ ಅಜೀಂ ಕಾಪು ಮತ್ತು ಬಜ್ಪೆಯ ಮೊಹಮ್ಮದ್ ರಾಜಿಕ್ ಎಂದು ಗುರುತಿಸಲಾಗಿದೆ. ಶನಿವಾರ ಈ ಇಬ್ಬರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಆಗಸ್ಟ್ 5 ರಂದು ಈ ಘಟನೆ ನಡೆದಿದ್ದು, ಹೆಜಮಾಡಿ ಟೋಲ್ ಗೇಟ್ ಬಳಿ ಎಸ್ ಯುವಿ ಕಾರು ಬಂದಿದ್ದು ಅದರಲ್ಲಿ ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಿ ಹಾಕಲಾಗಿತ್ತು. ಕಾರಿನ ಚಾಲಕನ ಬಳಿ ಪೊಲೀಸರು ಈ ಬಗ್ಗೆ ವಿಚಾರಿಸಿದಾಗ, ಆರೋಪಿಗಳು ನಮ್ಮನ್ನು ಹುಡುಕಿಕೊಂಡು ಇಲ್ಲಿಯವರೆಗೆ ಬರುತ್ತೀರಾ? ಎಂದು ಕೇಳಿ ಪೊಲೀಸರ ಮೇಲೆ ಕಾರ ಹತ್ತಿಸಲು ಪ್ರಯತ್ನಿಸಿದ್ದಾರೆ. ಬಳಿಕ ಪೊಲೀಸರು ಕಾರಿನಲ್ಲಿದ್ದ ಶಾರೋಜ್ ಸುರತ್ಕಲ್ ಎಂಬಾತನನ್ನು ವಶಕ್ಕೆ ಪಡೆದಿದ್ದು ಉಳಿದ ಆರೋಪಿಗಳು ಪೊಲೀಸ್ ಸಿಬ್ಬಂದಿಗಳ ಮೇಲೆ ಕಾರು ಚಲಾಯಿಸಿ ಗಾಯಗೊಳಿಸಿ ಪರಾರಿಯಾಗಿದ್ದರು.

ಗಂಗೊಳ್ಳಿ ಪೊಲೀಸ್ ಠಾಣಾ ಪಿಎಸ್‌ಐ ಹಾಗೂ ಸಿಬ್ಬಂದಿ ಅಲ್ಲಿನ ದನ ಕಳವು ಪ್ರಕರಣ ಒಂದರಲ್ಲಿ ಆರೋಪಿಗಳ ಪತ್ತೆಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ಟೋಲ್ ಗೇಟ್ ಬಳಿ ಕಾಯುತ್ತಿದ್ದಾಗ ಈ ಘಟನೆ ನಡೆದಿದೆ.

ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆ ಪಿಎಸ್‌ಐ ನೀಡಿದ ದೂರಿನಂತೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕಾರಿನಲ್ಲಿದ್ದ ಉಳಿದ ಆರೋಪಿಗಳಾದ ಸಫ್ಘಾನ್ ಕಾಪು, ಅಜೀಂ ಕಾಪು ಮತ್ತು ರಾಜಿಕ್ ಬಜಪೆ ಎಂಬವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಆರೋಪಿಗಳಾದ ಮಹಮ್ಮದ್ ಅಜಿಮ್ ಕಾಪು ಮತ್ತು ಮಹಮ್ಮದ್ ರಾಜಿಕ್ ಬಜಪೆ ಎಂಬವರನ್ನು ಇಂದು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಗಂಗೊಳ್ಳಿ ಪೊಲೀಸರು ಸುಂಕದಕಟ್ಟೆ ಬಳಿ ಕದ್ದ ಜಾನುವಾರುಗಳನ್ನು ಸಾಗಿಸುತ್ತಿದ್ದ ಎಸ್‌ಯುವಿಯನ್ನು ತಡೆದ ನಂತರ ಘರ್ಷಣೆ ಪ್ರಾರಂಭವಾಯಿತು ಎಂದು ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ನೆನಪಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Hockey Asia Cup 2025: ಹಾಲಿ ಚಾಂಪಿಯನ್ ದಕ್ಷಿಣ ಕೊರಿಯಾ ವಿರುದ್ಧ ಭಾರತ 4-1 ಗೆಲುವು; 8 ವರ್ಷಗಳ ಬಳಿಕ ಪ್ರಶಸ್ತಿ, ವಿಶ್ವಕಪ್ ಗೆ ಅರ್ಹತೆ!

'ತಂಡದಲ್ಲಿರಲು ಅರ್ಹನಾಗಿರುವಾಗ... ಬೇಸರ': ಕೊನೆಗೂ ಮೌನ ಮುರಿದ Shreyas Iyer

ಬಾನಂಗಳದಲ್ಲಿ 'Blood Moon': ಅಪರೂಪದ ಸಂಪೂರ್ಣ ಚಂದ್ರ ಗ್ರಹಣ ಗೋಚರ

'ಧೈರ್ಯ ತೋರಿಸಿ, ಅಮೆರಿಕದ ಆಮದುಗಳ ಮೇಲೆ ಶೇ. 75 ರಷ್ಟು ಸುಂಕ ವಿಧಿಸಿ': ಪ್ರಧಾನಿ ಮೋದಿಗೆ ಕೇಜ್ರಿವಾಲ್ ಸವಾಲು

Ashoka emblem ಧ್ವಂಸ ಪ್ರಕರಣ: 50 ಮಂದಿ ಪೊಲೀಸ್ ವಶಕ್ಕೆ! ಬುರ್ಖಾಧಾರಿ ಮಹಿಳೆಯರಿಗೂ ಸಂಕಷ್ಟ!

SCROLL FOR NEXT