ಮಧು ಬಂಗಾರಪ್ಪ  
ರಾಜ್ಯ

18 ಸಾವಿರ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

ಕಲಬುರಗಿ ಭಾಗದಲ್ಲಿ 5 ಸಾವಿರ ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡಲಾಗಿದೆ. 800 ಕೆಪಿಎಸ್‌‍ಸಿ ಶಾಲೆಗಳನ್ನು ಪ್ರಾರಂಭಿಸಲಾಗಿದೆ.

ಬೆಂಗಳೂರು: ರಾಜ್ಯದಲ್ಲಿ 18 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ಹಮಿಕೊಂಡಿದ್ದ ಭಾರತರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣರವರ ಜನ ದಿನಾಚರಣೆ ಅಂಗವಾಗಿ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ, ರಾಜ್ಯಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಕಲಬುರಗಿ ಭಾಗದಲ್ಲಿ 5 ಸಾವಿರ ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡಲಾಗಿದೆ. 800 ಕೆಪಿಎಸ್‌‍ಸಿ ಶಾಲೆಗಳನ್ನು ಪ್ರಾರಂಭಿಸಲಾಗಿದೆ. 5 ಸಾವಿರ ದ್ವಿಭಾಷಾ ಶಾಲೆಗಳನ್ನು ಮಂಜೂರು ಮಾಡಲಾಗಿದೆ ಎಂದು ಅವರು ತಿಳಿಸಿದರು.

1 ಸಾವಿರವಿದ್ದ ಎಲ್‌ಕೆಜಿ, ಯುಕೆಜಿ ಶಾಲೆಗಳನ್ನು 4 ಸಾವಿರಕ್ಕೆ ಹೆಚ್ಚಿಸಲಾಗಿದೆ. ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೂ ಅನುಮೋದನೆ ನೀಡಲಾಗಿದೆ. 6 ದಿನಗಳ ಕಾಲ ಮಕ್ಕಳ ಹಾಜರಾತಿ ಶಾಲೆಗಳಲ್ಲಿ ಹೆಚ್ಚಲು ಮೊಟ್ಟೆ ಇಲ್ಲವೇ ಬಾಳೆಹಣ್ಣನ್ನು ನೀಡಲಾಗುತ್ತಿದೆ ಎಂದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶಾಲೆಗಳ ಮೂಲ ಸೌಕರ್ಯ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ಸಂವಿಧಾನ ಪೀಠಿಕೆಯನ್ನು ಶಿಕ್ಷಣ ಸಚಿವರು ಬೋಧಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಲಾ ಮಕ್ಕಳಿಗೆ ಶುಭ ಕೋರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!