ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸುತ್ತಿರುವುದು. 
ರಾಜ್ಯ

‘ಗಾಂಧಿ ಭಾರತ ಶತಮಾನೋತ್ಸವ’ ಸಮಾರೋಪ'; ಅರ್ಥಪೂರ್ಣ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ಮಹಾತ್ಮ ಗಾಂಧೀಜಿ ಅವರ ಗ್ರಾಮ ಸ್ವರಾಜ್ ಪರಿಕಲ್ಪನೆಯಡಿ ಮಹಾ ಪಂಚಾಯತ್ ಸಮ್ಮೇಳನವನ್ನು ನವೆಂಬರ್ 14ರಂದು ಆಯೋಜಿಸಲಾಗುವುದು. ಈ ಬೃಹತ್ ಸಮ್ಮೇಳನದಲ್ಲಿ ಭಾಗವಹಿಸಲು ಗ್ರಾಮ ಪಂಚಾಯತ್‌ಗಳ ಮಾಜಿ ಹಾಗೂ ಹಾಲಿ ಸದಸ್ಯರನ್ನು ಆಹ್ವಾನಿಸಬೇಕು.

ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ‘ಗಾಂಧಿ ಭಾರತ ಶತಮಾನೋತ್ಸವ’ದ ಅಂಗವಾಗಿ 2025ರ ಡಿಸೆಂಬರ್ 26ರಂದು ಗಾಂಧಿ ಭಾರತ ಶತಮಾನೋತ್ಸವ ಸಮಾರೋಪ ಸಮಾರಂಭವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಶನಿವಾರ ಸೂಚನೆ ನೀಡಿದರು.

ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ‘ಗಾಂಧಿ ಭಾರತ ಶತಮಾನೋತ್ಸವ’ ಸಮಿತಿ ಸಭೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಗಾಂಧಿ ಭಾರತ ಶತಮಾನೋತ್ಸವ ಅಂಗವಾಗಿ ಕಳೆದ ಡಿಸೆಂಬರ್ 26 ರಂದು ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿದ್ದು, ಡಿಸೆಂಬರ್ 26, 2025 ರಂದು ಗಾಂಧಿ ಭಾರತ ಶತಮಾನೋತ್ಸವ ಕಾರ್ಯಕ್ರಮ ಸಮಾಪನೆಗೊಳ್ಳಲಿದೆ. ಈ ಅವಧಿಯಲ್ಲಿ ನಿರಂತರ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಮಹಾತ್ಮ ಗಾಂಧೀಜಿ ಅವರ ಗ್ರಾಮ ಸ್ವರಾಜ್ ಪರಿಕಲ್ಪನೆಯಡಿ ಮಹಾ ಪಂಚಾಯತ್ ಸಮ್ಮೇಳನವನ್ನು ನವೆಂಬರ್ 14ರಂದು ಆಯೋಜಿಸಲಾಗುವುದು. ಈ ಬೃಹತ್ ಸಮ್ಮೇಳನದಲ್ಲಿ ಭಾಗವಹಿಸಲು ಗ್ರಾಮ ಪಂಚಾಯತ್‌ಗಳ ಮಾಜಿ ಹಾಗೂ ಹಾಲಿ ಸದಸ್ಯರನ್ನು ಆಹ್ವಾನಿಸಬೇಕು. ಡಿಸೆಂಬರ್ ತಿಂಗಳಲ್ಲಿ ಪಂಚಾಯತ್ ರಾಜ್ ಕಾಯ್ದೆ ಮತ್ತು ಗ್ರಾಮ ಸ್ವರಾಜ್ ಕುರಿತಾಗಿ ಎರಡು ದಿನಗಳ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣವನ್ನು ಆಯೋಜಿಸಲಾಗುವುದು.

ಗಾಂಧೀಜಿ ಅವರು ಭೇಟಿ ನೀಡಿರುವ ಸ್ಮರಣಾರ್ಥ ರಾಜ್ಯದ 120 ಸ್ಥಳಗಳಲ್ಲಿ ಸ್ತಂಭಗಳನ್ನು ನವೆಂಬರ್ ಕೊನೆಯ ಒಳಗಾಗಿ ನಿರ್ಮಿಸಲಾಗುವುದು. ಗಾಂಧಿ ಭಾರತ ಅಂಗವಾಗಿ ರಾಜ್ಯಾದ್ಯಂತ ಜ್ಯೋತಿ ಯಾತ್ರೆಗಳನ್ನು ಆಯೋಜಿಸಲಾಗುವುದು. ಮಹಾತ್ಮ ಗಾಂಧೀಜಿ ಅವರ ಧ್ಯಾನಸ್ಥ ಭಂಗಿಯ ಭಾವಚಿತ್ರ ಹಾಗೂ ಅವರು ಬೋಧಿಸಿದ ಸಪ್ತ ಸಾಮಾಜಿಕ ಪಾತಕಗಳನ್ನು ಎಲ್ಲಾ ಶಾಲೆಗಳಲ್ಲಿ ಬರೆದು ಅಳವಡಿಸುವ ಕಾರ್ಯವನ್ನು ಪೂರ್ಣಗೊಳಿಸಬೇಕು.

ರಂಗಾಯಣದ ವತಿಯಿಂದ ಗಾಂಧಿ ವರ್ಸಸ್ ಗಾಂಧಿ, ಪಾಪು-ಬಾಪು ಹಾಗೂ ಮಹಾತ್ಮರ ಬರುವಿಗಾಗಿ ಎಂಬ ಮೂರು ನಾಟಕಗಳನ್ನು ನಿರ್ಮಿಸಿ ರಾಜ್ಯಾದ್ಯಂತ ಪ್ರದರ್ಶಿಸಲು ಕ್ರಮ ಕೈಗೊಳ್ಳಲಾಗಿದೆ. ರಾಜ್ಯದ 16 ಜಿಲ್ಲೆಗಳಲ್ಲಿ ಈಗಾಗಲೇ ಗಾಂಧಿ ಭವನ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ನಿವೇಶನ ಇನ್ನೂ ಸಿಗದ ಜಿಲ್ಲೆಗಳಲ್ಲಿ ಆಯಾ ಜಿಲ್ಲಾಧಿಕಾರಿಗಳು ಮುತುವರ್ಜಿ ವಹಿಸಿ ಸ್ಥಳ ಗುರುತಿಸಿ ಕಾಮಗಾರಿ ಆರಂಭಿಸಬೇಕು. ಎಲ್ಲಾ ಜಿಲ್ಲೆಗಳಲ್ಲಿ ನಿರ್ಮಾಣ ಕಾರ್ಯ ಪೂರ್ಣಗೊಳಿಸಿ ನಿರಂತರವಾಗಿ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Russia-Ukraine War: ರಷ್ಯಾ ದಾಳಿಯಿಂದ ಶಿಶು ಸೇರಿದಂತೆ ನಾಲ್ವರು ಸಾವು,18 ಮಂದಿಗೆ ಗಾಯ, ಪ್ರತೀಕಾರವಾಗಿ ಉಕ್ರೇನ್ ಮಾಡಿದ್ದೇನು?

ರಷ್ಯಾದಿಂದ ತೈಲ ಖರೀದಿಸಿ ಭಾರತ ಲಾಭ ಗಳಿಸುತ್ತಿದೆ ಹೇಳಿಕೆ: ಸತ್ಯ ಪರಿಶೀಲಿಸಿ ಬೂಟಾಟಿಕೆ ಎಂದ 'X', ಎಲಾನ್ ಮಸ್ಕ್ ವಿರುದ್ಧ ಪೀಟರ್ ನವರೊ ಸಿಡಿಮಿಡಿ

ಬೆಂಗಳೂರು: 'ರಸ್ತೆ ಗುಂಡಿ'ಗಳನ್ನು ವೀಕ್ಷಿಸಲು ತಮ್ಮ ಬೈಕ್​​ನಲ್ಲಿ ಸಿಟಿ ರೌಂಡ್ ಹೊಡೆದ ಡಿಕೆಶಿ! Video

ತಿಹಾರ್ ಜೈಲು ಪರಿಶೀಲಿಸಿದ ಬ್ರಿಟನ್ ತಂಡ: ವಿಜಯ್ ಮಲ್ಯ, ನೀರವ್ ಮೋದಿ ಗಡಿಪಾರು ಸನ್ನಿಹಿತ..?

ಬಾನು ಮುಷ್ತಾಕ್ ಕನ್ನಡದ ವಿರುದ್ಧ ಮಾತನಾಡಿದ್ದಕ್ಕೆ ಯಾವುದೇ ಸಾಕ್ಷಿಯಿಲ್ಲ, ನಿಸಾರ್ ಅಹ್ಮದ್ ಉದ್ಘಾಟಿಸಿದಾಗೇಕೆ ಮೌನವಾಗಿದ್ದಿರಿ?

SCROLL FOR NEXT