ವಿಜಯಪುರ: ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯ ಹತ್ಯೆಗೆ ಪತ್ನಿಯೇ ಯತ್ನಿಸಿರುವ ಘಟನೆ ವಿಜಯಪುರ ಜಿಲ್ಲೆಯ ಅಕ್ಕಮಹಾದೇವಿ ನಗರದಲ್ಲಿ ನಡೆದಿದೆ. ಪ್ರಿಯಕರನ ಜೊತೆ ಸೇರಿದ ಸುನಂದಾ ಪತಿ ಬೀರಪ್ಪನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಸಿದ್ದಪ್ಪ ಕ್ಯಾತಕೇರಿ ಎಂಬಾತನ ಜೊತೆ ಸುನಂದಾ ಅಕ್ರಮ ಸಂಬಂಧ ಹೊಂದಿದ್ದಾಗಿ ಬೀರಪ್ಪ ಆರೋಪಿಸಿದ್ದಾರೆ. ಕಳೆದ ಸೆಪ್ಟೆಂಬರ್ 1ರಂದು ರಾತ್ರಿ ಸಿದ್ದಪ್ಪ ಮನೆಗೆ ನುಗ್ಗಿದ್ದು ತನ್ನ ಕತ್ತು ಹಿಸುಕಿ, ಮರ್ಮಾಂಗಕ್ಕೆ ಒದ್ದು ಮಾರಾಣಂತಿಕವಾಗಿ ಹಲ್ಲೆ ನಡೆಸಿದ್ದರು ಎಂದು ದೂರಿದ್ದಾನೆ.