ಸಿಎಂ ಸಿದ್ದರಾಮಯ್ಯ 
ರಾಜ್ಯ

ಮದ್ದೂರಿನಲ್ಲಿ ಕಲ್ಲು ತೂರಾಟ: ಶಾಂತಿ ಕದಡುವುದೇ ಬಿಜೆಪಿ ಉದ್ದೇಶ; ಜಾತಿ, ಧರ್ಮ, ಪಕ್ಷ ಲೆಕ್ಕಿಸದೆ ಕ್ರಮ; Video

"ಅವರು(ಬಿಜೆಪಿ) ಮದ್ದೂರಿಗೆ ಹೋಗಲಿ. ಶಾಂತಿ ಕದಡುವುದೇ ಬಿಜೆಪಿಯ ಉದ್ದೇಶವಾಗಿದೆ. ಅಲ್ಲಿ ಅವರು ಬಂದ್‌ಗೆ ಕರೆ ನೀಡಿದ್ದಾರೆ. ನಾವು ಈಗಾಗಲೇ 21 ಜನರನ್ನು ಬಂಧಿಸಿದ್ದೇವೆ.

ಬೆಂಗಳೂರು: ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಘಟನೆಗೆ ಕಾರಣರಾದವರ ವಿರುದ್ಧ ಯಾವುದೇ ಜಾತಿ, ಧರ್ಮ ಅಥವಾ ಪಕ್ಷವನ್ನು ಲೆಕ್ಕಿಸದೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದಾರೆ. ಅಲ್ಲದೆ ಬಿಜೆಪಿ "ಶಾಂತಿ ಕದಡಲು ಪ್ರಯತ್ನಿಸುತ್ತಿದೆ" ಎಂದು ಆರೋಪಿಸಿದ್ದಾರೆ.

ಸೆಪ್ಟೆಂಬರ್ 7 ರಂದು ನಡೆದ ಘಟನೆಯ ನಂತರ ಮದ್ದೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉದ್ವಿಗ್ನತೆ ಹೆಚ್ಚಾಗಿದ್ದು, ಸೋಮವಾರ ಹಲವಾರು ಬಲಪಂಥೀಯ ಸಂಘಟನೆಗಳು ದೊಡ್ಡ ಪ್ರಮಾಣದ ಪ್ರತಿಭಟನೆ ನಡೆಸಿದವು. ಇಂದು ಮದ್ದೂರಿನಲ್ಲಿ ಬಿಜೆಪಿ ಬಂದ್‌ಗೆ ಕರೆ ನೀಡಿತ್ತು.

"ಅವರು(ಬಿಜೆಪಿ) ಮದ್ದೂರಿಗೆ ಹೋಗಲಿ. ಶಾಂತಿ ಕದಡುವುದೇ ಬಿಜೆಪಿಯ ಉದ್ದೇಶವಾಗಿದೆ. ಅಲ್ಲಿ ಅವರು ಬಂದ್‌ಗೆ ಕರೆ ನೀಡಿದ್ದಾರೆ. ನಾವು ಈಗಾಗಲೇ 21 ಜನರನ್ನು ಬಂಧಿಸಿದ್ದೇವೆ. ತಪ್ಪಿತಸ್ಥರ ವಿರುದ್ಧ ಯಾವುದೇ ಜಾತಿ, ಧರ್ಮವನ್ನು ಲೆಕ್ಕಿಸದೆ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳುತ್ತಿದ್ದೇವೆ. ಅವರು ಬಿಜೆಪಿ ಅಥವಾ ಕಾಂಗ್ರೆಸ್‌ನವರಾಗಿರಲಿ, ಹಿಂದೂಗಳು, ಮುಸ್ಲಿಮರು ಅಥವಾ ಕ್ರಿಶ್ಚಿಯನ್ನರಾಗಿರಲಿ, ಕಠಿಣ ಕ್ರಮ ಕೈಗೊಳ್ಳಲಾಗುವುದು" ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಈ ಹಿಂದೆ ಘಟನೆಗೆ ಸಂಬಂಧಿಸಿದಂತೆ 22 ಜನರನ್ನು ಬಂಧಿಸಲಾಗಿದೆ ಎಂದು ಹೇಳಿದ್ದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮೈಸೂರಿನಲ್ಲಿ ಬಿಜೆಪಿ ಮತ್ತು ಇತರ ಬಲಪಂಥೀಯ ಸಂಘಟನೆಗಳು ನಡೆಸುತ್ತಿದ್ದ "ಚಾಮುಂಡಿ ಬೆಟ್ಟ ಚಲೋ" ಮೆರವಣಿಗೆಯನ್ನು ಪೊಲೀಸರು ತಡೆದಿದ್ದಾರೆ ಎಂಬುದನ್ನು ಗಮನಿಸಿದರು.

"ಅವರು(ಬಿಜೆಪಿ) ಮೈಸೂರಿನಲ್ಲಿ ಚಾಮುಂಡಿ ಬೆಟ್ಟ (ಬೆಟ್ಟ) ಚಲೋವನ್ನು ಯೋಜಿಸಿದ್ದರು. ಆರ್ ಎಸ್ ಎಸ್ ಸಂಘಟನೆಯವರು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರದವರು ಇದರಲ್ಲಿ ಪಾಲ್ಗೊಂಡು, ಶಾಂತಿ ಕದಡುವ ಕೆಲಸವನ್ನು ಮಾಡುತ್ತಾರೆಂಬ ಕಾರಣಕ್ಕೆ ಪೊಲೀಸರು ಚಾಮುಂಡಿ ಬೆಟ್ಟ ಚಲೋ ಗೆ ಅನುಮತಿ ನೀಡಲಿಲ್ಲ ಎಂದರು.

ಬಿಜೆಪಿಯವರು ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿರುವುದಾಗಿ ಕೇಂದ್ರ ಗೃಹ ಸಚಿವರಿಗೆ ದೂರು ನೀಡಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯಿಸಿದ ಸಿಎಂ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಜವಾಬ್ದಾರಿ ರಾಜ್ಯ ಸರ್ಕಾರದ್ದಾಗಿರುತ್ತದೆ ಎಂದರು.

ಕೇಂದ್ರದಲ್ಲಿ ರೈತ ಚಳವಳಿಯಲ್ಲಿ ಅನೇಕ ರೈತರು ಪ್ರಾಣ ಕಳೆದುಕೊಂಡ ಸಂದರ್ಭದಲ್ಲಿ ಬಿಜೆಪಿಯವರು ಎಲ್ಲಿದ್ದರು.? ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಯಾವುದೇ ಬಿಜೆಪಿಯವರು ಧ್ವನಿ ಎತ್ತಲಿಲ್ಲವೇಕೆ ಎಂದು ಮರುಪ್ರಶ್ನಿಸಿದರು. ಮಣಿಪುರದಲ್ಲಿ ಹಿಂಸಾಚಾರ ನಡೆದರೂ, ಪ್ರಧಾನಿಯವರು ಮಣಿಪುರಕ್ಕೆ ಭೇಟಿ ನೀಡಲೇ ಇಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸ್ಪರ್ಧೆಗಳ ಸಂಕೀರ್ಣ ಸಮಯಗಳೊಂದಿಗೆ ಜಗತ್ತು ಹೋರಾಡುತ್ತಿದೆ, ಭಯೋತ್ಪಾದನೆ ವಿಚಾರದಲ್ಲಿ ರಾಜಿ ಇಲ್ಲ': ಜೈಶಂಕರ್ ಖಡಕ್ ಸಂದೇಶ

'ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದರೆ 5 ವರ್ಷ ಕಾಲ ನಾನೇ ಮುಖ್ಯಮಂತ್ರಿ': ಸಿದ್ದರಾಮಯ್ಯ ಮಾರ್ಮಿಕ ಹೇಳಿಕೆ!

ಥೂ ಏನ್ ಗುರು.. ಆಗ ಅಶ್ವಿನಿ ಗೌಡ.. ಈಗ ಗಿಲ್ಲಿ.. ಕ್ಯಾಪ್ಟನ್ ಗೆ ಬೆಲೆನೇ ಇಲ್ಲ..: ರಘು ಫುಲ್ ರೋಸ್ಟ್ Video

ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌: 145 ಕೆಜಿ ತೂಕ ಎತ್ತಿ ಪದಕ ಪಡೆದ 7 ತಿಂಗಳ ಗರ್ಭಿಣಿ; ದೆಹಲಿ ಪೊಲೀಸ್ ಕಾನ್ಸ್‌ಟೇಬಲ್ ಸಾಧನೆಗೆ ಅಭಿನಂದನೆಗಳ ಮಹಾಪೂರ!

ಮೊನ್ನೆ ನೇಮಕ, ಇಂದು RSS ಕಾರ್ಯಕರ್ತನ ಹೆಸರು ತೆಗೆದು ಹಾಕಿದ ಸರ್ಕಾರ; ಸಿಎಂಗೆ ಕ್ಷಮೆ ಕೇಳುತ್ತೇನೆ!

SCROLL FOR NEXT