ಸಂಗ್ರಹ ಚಿತ್ರ 
ರಾಜ್ಯ

ಅನ್ನಭಾಗ್ಯ ಫಲಾನುಭವಿಗಳಿಗೆ ಅಕ್ಕಿಯ ಬದಲು ಪ್ರದೇಶವಾರು ಇತರ ಧಾನ್ಯಗಳ ವಿತರಣೆ: ರಾಜ್ಯ ಸರ್ಕಾರ

ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಕ್ಕಿಯ ಬದಲು ಪ್ರದೇಶವಾರು ಇತರ ಧಾನ್ಯಗಳನ್ನು ನೀಡುವ ಬಗ್ಗೆ ಪರಿಶೀಲನೆ ನಡೆಸಿ, ಕ್ರಮ ವಹಿಸಬೇಕು.

ಬೆಂಗಳೂರು: ಅನ್ನಭಾಗ್ಯ ಫಲಾನುಭವಿಗಳಿಗೆ ಅಕ್ಕಿಯ ಬದಲು ಪ್ರದೇಶವಾರು ಇತರ ಧಾನ್ಯಗಳನ್ನು ನೀಡುವ ಬಗ್ಗೆ ಪರಿಶೀಲನೆ ನಡೆಸಿ, ಕ್ರಮ ವಹಿಸಲಾಗುವುದು ಎಂದು ರಾಜ್ಯ ಸರ್ಕಾರ ಸೋಮವಾರ ಹೇಳಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಸೋಮವಾರ ನಡೆಯಿತು.

ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಬದಲು ಸ್ಥಳೀಯವಾಗಿ ಬೆಳೆದ ಆಹಾರ ಧಾನ್ಯಗಳನ್ನು ಫಲಾನುಭವಿಗಳಿಗೆ ವಿತರಿಸುವ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಪರಿಗಣಿಸುತ್ತಿದೆ ಎಂದು ಹೇಳಿದರು.

ಪಂಚ ಗ್ಯಾರಂಟಿ ಯೋಜನೆ ಅಡಿ ಇದುವರೆಗೆ ರೂ. 97,813 ಕೋಟಿ ಅನುದಾನವನ್ನು ವೆಚ್ಚ ಮಾಡಲಾಗಿದೆ. ಇದರಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1.24 ಕೋಟಿ ಫಲಾನುಭವಿಗಳಿಗೆ ಒಟ್ಟು ರೂ.50,005 ಕೋಟಿ, ಗೃಹಜ್ಯೋತಿ ಯೋಜನೆಯಡಿ 1.64 ಕೋಟಿ ಫಲಾನುಭವಿಗಳಿಗೆ ರೂ. 18,139 ಕೋಟಿ, ಯುವನಿಧಿ ಯೋಜನೆಯಡಿ 2.55 ಲಕ್ಷ ಫಲಾನುಭವಿಗಳಿಗೆ ರೂ.623 ಕೋಟಿ, ಶಕ್ತಿ ಯೋಜನೆಯಡಿ ₹544 ಕೋಟಿ ಉಚಿತ ಟಿಕೆಟ್ ಪ್ರಯಾಣಿಕರಿಗೆ ರೂ.13,903 ಕೋಟಿ ಹಾಗೂ ಅನ್ನಭಾಗ್ಯ ಯೋಜನೆಯಡಿ 72.02 ಕೋಟಿ ಫಲಾನುಭವಿಗಳಿಗೆ ಒಟ್ಟು 11,821.17 ಕೋಟಿ ವೆಚ್ಚ ಮಾಡಲಾಗಿದೆ.

ಮರಣ ಹೊಂದುವ ಫಲಾನುಭವಿಗಳ ಪಟ್ಟಿಯನ್ನು ಪ್ರತಿ ತಿಂಗಳು ಪಂಚಾಯತ್ ಹಂತದಲ್ಲಿ ನವೀಕರಿಸಿ ಸಂಬಂಧಪಟ್ಟ ಬ್ಯಾಂಕುಗಳಿಗೆ ಮಾಹಿತಿಯನ್ನು ಒದಗಿಸಬೇಕು. ಮರಣ ಹೊಂದುವ ಫಲಾನುಭವಿಗಳ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕಬೇಕು. ಪಂಚಾಯತ್ ಮಟ್ಟದಲ್ಲಿ ಫಲಾನುಭವಿಗಳ ಸೇರ್ಪಡೆ ಮತ್ತು ತೆಗೆದು ಹಾಕುವಿಕೆಗೆ ಕ್ರಮ ಕೈಗೊಳ್ಳಬೇಕು.

ಅನರ್ಹ ಬಿಪಿಎಲ್ ಕಾರ್ಡುದಾರರನ್ನು ಗುರುತಿಸಿ ಬಿಪಿಎಲ್ ಕಾರ್ಡ್ ರದ್ದುಪಡಿಸುವ ಕಾರ್ಯವನ್ನು ಪಂಚಾಯತ್ ಮಟ್ಟದಲ್ಲಿ ನಡೆಸಬೇಕು. ಈ ಕುರಿತಾಗಿರುವ ಮಾನದಂಡಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು. ಐಟಿ ರಿಟರ್ನ್ ಸಲ್ಲಿಸುವವರು ಗೃಹಲಕ್ಷ್ಮಿ ಯೋಜನೆ ಲಾಭ ಪಡೆಯುವ ಕುರಿತು ಇರುವ ಗೊಂದಲವನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕು.

ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಕ್ಕಿಯ ಬದಲು ಪ್ರದೇಶವಾರು ಇತರ ಧಾನ್ಯಗಳನ್ನು ನೀಡುವ ಬಗ್ಗೆ ಪರಿಶೀಲನೆ ನಡೆಸಿ, ಕ್ರಮ ವಹಿಸಬೇಕು. ಗ್ಯಾರಂಟಿ ಯೋಜನೆಗಳ ಲಾಭ ಎಲ್ಲಾ ಅರ್ಹ ಫಲಾನುಭವಿಗಳಿಗೆ ತಲುಪಿಸಲು ಆಂದೋಲನ ಮಾದರಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Vice President Election 2025: ನೂತನ ಉಪ ರಾಷ್ಟ್ರಪತಿಯಾಗಿ ಸಿ ಪಿ ರಾಧಾಕೃಷ್ಣನ್ ಆಯ್ಕೆ

ಮದ್ದೂರಿನಲ್ಲಿ ಕಲ್ಲು ತೂರಾಟ: ಶಾಂತಿ ಕದಡುವುದೇ ಬಿಜೆಪಿ ಉದ್ದೇಶ; ಜಾತಿ, ಧರ್ಮ, ಪಕ್ಷ ಲೆಕ್ಕಿಸದೆ ಕ್ರಮ; Video

Amruta Fadnavis: 'ನೀತಿ ಪಾಠ ಹೇಳುವವರೆ ಈ ರೀತಿಯ ಬಟ್ಟೆ ಧರಿಸಿದರೆ ಹೇಗೆ? ಮಹಾ ಸಿಎಂ 'ಫಡ್ನವೀಸ್ ಪತ್ನಿ' ವಿರುದ್ಧ ನೆಟ್ಟಿಗರ ಆಕ್ರೋಶ, Video ವೈರಲ್

ಅಕ್ರಮ ಬೆಟ್ಟಿಂಗ್ ಪ್ರಕರಣ: ವೀರೇಂದ್ರ ಪಪ್ಪಿ ಚಿನ್ನದ ಖಜಾನೆ ಕಂಡು ED ಶಾಕ್; 21 ಕೆಜಿ ಗೋಲ್ಡ್ ಬಿಸ್ಕೇಟ್ ಜಪ್ತಿ

Israel attacks: ದೋಹಾದಲ್ಲಿ 'ಹಮಾಸ್' ನಾಯಕರ ಮನೆ ಮೇಲೆ ಇಸ್ರೇಲ್ ವಾಯು ದಾಳಿ! ಹೇಡಿತನ ಎಂದ ಕತಾರ್!

SCROLL FOR NEXT