ಅಮಿತ್ ಶಾ ಹಾಗೂ ವಿಜಯೇಂದ್ರ 
ರಾಜ್ಯ

'ಹಿಂದೂ ವಿರೋಧಿ' ನಡೆ: ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಬಿಜೆಪಿ; ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಕೆ

ಅಮಿತ್ ಶಾ ಅವರೊಂದಿಗೆ ಸುಮಾರು 30 ನಿಮಿಷ ಚರ್ಚೆ ನಡೆಸಿದ ನಿಯೋಗವು, ಧರ್ಮಸ್ಥಳದ ವಿರುದ್ಧದ ಪಿತೂರಿಯಲ್ಲಿ ಹೊರ ರಾಜ್ಯದ ಕೆಲವರ ಕೈವಾಡ ಇದೆ. ಈ ಬಗ್ಗೆ ಉನ್ನತ ತನಿಖೆ ನಡೆಸುವ ಅಗತ್ಯ ಇದೆ ಎಂದು ಹೇಳಿದ್ದು, ಇದೇ ವೇಳೆ ಹಿಂದೂ ವಿರೋಧಿ ನಡೆ ಕುರಿತು ಕಳವಳ ವ್ಯಕ್ತಪಡಿಸಿದೆ.

ನವದೆಹಲಿ/ಬೆಂಗಳೂರು: ರಾಜ್ಯದ ಬಿಜೆಪಿ ನಿಯೋಗ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಸೋಮವಾರ ಭೇಟಿ ಮಾಡಿದ್ದು. ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಕುರಿತು ಕಳವಳ ವ್ಯಕ್ತಪಡಿಸಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಇತರೆ ನಾಯಕರಿದ್ದ ಬಿಜೆಪಿ ನಿಯೋಗ ನಿನ್ನೆ ಸಂಜೆ ಅಮಿತ್ ಶಾ ಅವರನ್ನು ಭೇಟಿ ಮಾಡಿದರು.

ಅಮಿತ್ ಶಾ ಅವರೊಂದಿಗೆ ಸುಮಾರು 30 ನಿಮಿಷ ಚರ್ಚೆ ನಡೆಸಿದ ನಿಯೋಗವು, ‘ಧರ್ಮಸ್ಥಳದ ವಿರುದ್ಧದ ಪಿತೂರಿಯಲ್ಲಿ ಹೊರ ರಾಜ್ಯದ ಕೆಲವರ ಕೈವಾಡ ಇದೆ. ಈ ಬಗ್ಗೆ ಉನ್ನತ ತನಿಖೆ ನಡೆಸುವ ಅಗತ್ಯ ಇದೆ ಎಂದು ಹೇಳಿದ್ದು, ಇದೇ ವೇಳೆ ಹಿಂದೂ ವಿರೋಧಿ ನಡೆ ಕುರಿತು ಕಳವಳ ವ್ಯಕ್ತಪಡಿಸಿದೆ ಎಂದು ತಿಳಿದುಬಂದಿದೆ.

ಅಮಿತ್ ಶಾ ಅವರೊಂದಿಗೆ ಮಾತುಕತೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ ಅವರು, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿದೆ. ಕೋಮು ಉದ್ವಿಗ್ನತೆಯ ಬಗ್ಗೆ ಗೃಹ ಸಚಿವರಿಗೆ ಮಾಹಿತಿ ನೀಡಲಾಗಿದೆ. ಧರ್ಮಸ್ಥಳ ಕೇಸ್, ಮಂಗಳೂರಿನ ಸುಹಾಸ್ ಶೆಟ್ಟಿ ಹತ್ಯೆ ಮತ್ತು ಹಿಂದೂ ಕಾರ್ಯಕರ್ತ ಗವಿಸಿದ್ಧಪ್ಪ ಹತ್ಯೆ ಘಟನೆಯ ಬಗ್ಗೆ ಮಾಹಿತಿ ನೀಡಲಾಗಿದೆ.

ನಾವು ಔಪಚಾರಿಕ ವರದಿಯನ್ನು ಸಲ್ಲಿಸಿಲ್ಲ. ರಾಜ್ಯದ ಪರಿಸ್ಥಿತಿ ಹದಗೆಡುತ್ತಿರುವ ಬಗ್ಗೆ ಮತ್ತು ಕಾಂಗ್ರೆಸ್ ಸರ್ಕಾರವು ಹಿಂದೂ ಕಾರ್ಯಕರ್ತರು ಮತ್ತು ಸಂಸ್ಥೆಗಳನ್ನು ಪದೇ ಪದೇ ಗುರಿಯಾಗಿಸಿಕೊಂಡಿರುವ ಬಗ್ಗೆ ಗೃಹ ಸಚಿವರಿಗೆ ತಿಳಿಸಿದ್ದೇವೆ. ನಿಷ್ಕ್ರಿಯತೆ ಅಥವಾ ಸಮಾಧಾನಗೊಳಿಸುವ ಮೂಲಕ ಹಿಂದೂ ವಿರೋಧಿ ಭಾವನೆಯನ್ನು ಬೆಳೆಸಲಾಗುತ್ತಿದೆ ಎಂಬುದು ಸ್ಪಷ್ಟವಾಗಿದೆ. ಪರಿಸ್ಥಿತಿಯನ್ನು ಅರಿತುಕೊಂಡು, ಅಗತ್ಯವಿದ್ದರೆ, ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಮತ್ತು ಕೋಮು ಸಾಮರಸ್ಯವನ್ನು ಕಾಪಾಡಲು ಕೇಂದ್ರವು ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಲಾಗಿದೆ.

ಈ ನಡುವೆ ಬಿಜೆಪಿ ನಿಯೋಗದ ಸಲಹೆಗಳನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ನಿಯೋಗದಲ್ಲಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮಂಗಳೂರು ಸಂಸದ ಬ್ರಿಜೇಶ್ ಚೌಟ, ಉಡುಪಿ ಸಂಸದ ಶ್ರೀನಿವಾಸ್ ಪೂಜಾರಿ, 'ಧರ್ಮಸ್ಥಳ ಚಲೋ' ರ್ಯಾಲಿಯನ್ನು ಆಯೋಜಿಸಿದ್ದ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್, ಶಾಸಕ ಹರೀಶ್ ಪೂಂಜಾ ಮತ್ತು ಇತರರು ಇದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮದ್ದೂರಿನಲ್ಲಿ ಕಲ್ಲು ತೂರಾಟ: ಶಾಂತಿ ಕದಡುವುದೇ ಬಿಜೆಪಿ ಉದ್ದೇಶ; ಜಾತಿ, ಧರ್ಮ, ಪಕ್ಷ ಲೆಕ್ಕಿಸದೆ ಕ್ರಮ

ಮದ್ದೂರಿನಲ್ಲಿ ಕಲ್ಲು ತೂರಾಟ: ಲೈಟ್ ಆಫ್ ಮಾಡಿರುವುದು ಅನುಮಾನ ಮೂಡಿಸುತ್ತಿದೆ - IGP

Asia Cup 2025: "Kisne Bola?".. ಪತ್ರಕರ್ತನಿಗೆ Suryakumar Yadav ಖಡಕ್ ಉತ್ತರ, ಪಾಕ್ ಕ್ಯಾಪ್ಟನ್‌ಗೆ ಓಪನ್ ಚಾಲೆಂಜ್!

ಬೆಂಗಳೂರಿನಲ್ಲಿ ಮತ್ತೊಂದು ಡಿಜಿಟಲ್ ಅರೆಸ್ಟ್ ಹಗರಣ: 70 ವರ್ಷದ ವ್ಯಕ್ತಿಗೆ 30 ಲಕ್ಷ ರೂ.ಗೂ ಹೆಚ್ಚು ವಂಚನೆ!

ಮುಂದಿನ ಜನ್ಮದಲ್ಲಿ 'ಮುಸ್ಲಿಂ' ಆಗಿ ಹುಟ್ಟುವ ಆಸೆ: ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ ವಿರುದ್ಧ ಬಿಜೆಪಿ ಕಿಡಿ! Video

SCROLL FOR NEXT