ವೀರೇಂದ್ರ ಪಪ್ಪಿ 
ರಾಜ್ಯ

ಅಕ್ರಮ ಬೆಟ್ಟಿಂಗ್ ಪ್ರಕರಣ: ವೀರೇಂದ್ರ ಪಪ್ಪಿ ಚಿನ್ನದ ಖಜಾನೆ ಕಂಡು ED ಶಾಕ್; 21 ಕೆಜಿ ಗೋಲ್ಡ್ ಬಿಸ್ಕೇಟ್ ಜಪ್ತಿ

ಒಟ್ಟು 21.43 ಕೆಜಿ ತೂಕದ 24 ಕ್ಯಾರೆಟ್ ಚಿನ್ನದ ಗಟ್ಟಿ, 10.98 ಕೆಜಿ ತೂಕದ 11 ಯೂನಿಟ್ ಚಿನ್ನ ಲೇಪಿತ ಬೆಳ್ಳಿ ಗಟ್ಟಿಗಳು ಮತ್ತು ಸುಮಾರು 1 ಕೆಜಿ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಇಡಿ ತಿಳಿಸಿದೆ.

ನವದೆಹಲಿ: ಬಂಧಿತ ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಮತ್ತು ಅವರ ಕುಟುಂಬ ಸದಸ್ಯರು ಹಾಗೂ ಸಹಚರರು ಕೋಟ್ಯಂತರ ರೂಪಾಯಿ ಮೌಲ್ಯದ ಅಂತರರಾಷ್ಟ್ರೀಯ ಪ್ರಯಾಣ ಟಿಕೆಟ್‌ಗಳನ್ನು ಬುಕ್ ಮಾಡಿದ್ದಾರೆ. ಅಲ್ಲದೆ ಆನ್‌ಲೈನ್ ಬೆಟ್ಟಿಂಗ್ ವೆಬ್‌ಸೈಟ್‌ಗಳಿಂದ ಬಂದ ಆದಾಯಕ್ಕೆ ಲಿಂಕ್ ಮಾಡಲಾದ "ಮ್ಯೂಲ್" ಖಾತೆಗಳ ಜಾಲದ ಮೂಲಕ ಇವುಗಳಿಗೆ ಹಣ ಒದಗಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ಮಂಗಳವಾರ ಆರೋಪಿಸಿದೆ.

"ಈ ಹೆಚ್ಚಿನ ಮೌಲ್ಯದ ವಹಿವಾಟುಗಳಿಗೆ ಬಳಸಲಾದ ಹಣವನ್ನು ಅಕ್ರಮ ಆನ್‌ಲೈನ್ ಚಟುವಟಿಕೆಗಳಿಂದ ಬೇರೆಡೆಗೆ ತಿರುಗಿಸಲಾಗಿದೆ ಮತ್ತು ಅವುಗಳ ಮೂಲವನ್ನು ಮರೆಮಾಚಲು ಬಹು ಮಧ್ಯವರ್ತಿ ಖಾತೆಗಳ ಮೂಲಕ ರವಾನಿಸಲಾಗಿದೆ ಎಂದು ಪುರಾವೆಗಳು ಸೂಚಿಸುತ್ತಿವೆ" ಎಂದು ಕೇಂದ್ರ ತನಿಖಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಅಕ್ರಮವಾಗಿ ಬೆಟ್ಟಿಂಗ್ ಕಂಪನಿ ನಡೆಸುತ್ತಿದ್ದ ಆರೋಪಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ವೀರೇಂದ್ರ ಪಪ್ಪಿ ಅವರನ್ನು ಪ್ರಕರಣದಲ್ಲಿ "ಪ್ರಮುಖ ಆರೋಪಿ" ಎಂದು ಹೆಸರಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 6 ರಂದು ಚಳ್ಳಕೆರೆ(ಚಿತ್ರದುರ್ಗ ಜಿಲ್ಲೆ)ಯಲ್ಲಿ ವೀರೇಂದ್ರ ಪಪ್ಪಿ ಬ್ಯಾಂಕ್ ಖಾತೆಗಳ ಮೇಲೆ ಇಡಿ ದಾಳಿ ಮಾಡಿದ್ದು, ಈ ವೇಳೆ ಒಟ್ಟು 24 ಕೋಟಿ ರೂ. ಮೌಲ್ಯದ ವಿವಿಧ ಚಿನ್ನದ ವಸ್ತುಗಳನ್ನು ವಶಪಡಿಸಿಕೊಂಡಿದೆ.

ಚಳ್ಳಕೆರೆ ಆಕ್ಸಿಸ್ ಬ್ಯಾಂಕ್ ನಲ್ಲಿದ್ದ ಚಿನ್ನ ಕಂಡು ಇಡಿ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಈ ಬ್ಯಾಂಕ್​ನಲ್ಲಿ ಕೋಟಿ ಕೋಟಿ ಮೌಲ್ಯದ ಚಿನ್ನದ ಬಿಸ್ಕೇಟ್ ಪತ್ತೆಯಾಗಿವೆ ಎಂದು ಕೇಂದ್ರ ತನಿಖಾ ಸಂಸ್ಥೆ ತಿಳಿಸಿದೆ.

ಇದರಲ್ಲಿ ಒಟ್ಟು 21.43 ಕೆಜಿ ತೂಕದ 24 ಕ್ಯಾರೆಟ್ ಚಿನ್ನದ ಗಟ್ಟಿ, 10.98 ಕೆಜಿ ತೂಕದ 11 ಯೂನಿಟ್ ಚಿನ್ನ ಲೇಪಿತ ಬೆಳ್ಳಿ ಗಟ್ಟಿಗಳು ಮತ್ತು ಸುಮಾರು 1 ಕೆಜಿ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಇಡಿ ತಿಳಿಸಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ನಿಬಂಧನೆಗಳ ಅಡಿಯಲ್ಲಿ ಈ ಚಿನ್ನದ ವಸ್ತುಗಳನ್ನು ಎಲ್ಲಿಂದ ವಶಪಡಿಸಿಕೊಂಡಿದೆ ಎಂಬುದನ್ನು ಏಜೆನ್ಸಿ ಹೇಳಿಲ್ಲ.

"ಈ ವಶಪಡಿಸಿಕೊಳ್ಳುವಿಕೆಯನ್ನು ಪರಿಗಣಿಸಿದ ನಂತರ, ಈ ಪ್ರಕರಣದಲ್ಲಿ ಅಪರಾಧದ ಆದಾಯದ ಸಂಚಿತ ವಶಪಡಿಸಿಕೊಳ್ಳುವಿಕೆಯು 100 ಕೋಟಿ ರೂ.ಗಳನ್ನು ಮೀರಿದೆ" ಎಂದು ಏಜೆನ್ಸಿ ತಿಳಿಸಿದೆ.

ಕಿಂಗ್ 567, ರಾಜ 567, ಲಯನ್ 567, ಪ್ಲೇ 567, ಪ್ಲೇವಿನ್ 567, ಇತ್ಯಾದಿಗಳ ಹೆಸರಿನಲ್ಲಿ ಶಾಸಕರು ಹಲವಾರು ಆನ್‌ಲೈನ್ ಬೆಟ್ಟಿಂಗ್ ಸೈಟ್‌ಗಳನ್ನು "ನಡೆಸುತ್ತಿದ್ದಾರೆ" ಎಂದು ಇಡಿ ಆರೋಪಿಸಿದೆ.

ಈ ವೆಬ್‌ಸೈಟ್‌ಗಳ ಮೂಲಕ ಸಂಗ್ರಹಿಸಿದ ಪಾವತಿಗಳನ್ನು ರೂಟಿಂಗ್ ಮಾಡಲು ಹಲವಾರು ಪಾವತಿ ಗೇಟ್‌ವೇಗಳನ್ನು ಬಳಸಲಾಗಿದೆ ಎಂದು ಇಡಿ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Vice President Election 2025: ನೂತನ ಉಪ ರಾಷ್ಟ್ರಪತಿಯಾಗಿ ಸಿ ಪಿ ರಾಧಾಕೃಷ್ಣನ್ ಆಯ್ಕೆ

ಮದ್ದೂರಿನಲ್ಲಿ ಕಲ್ಲು ತೂರಾಟ: ಶಾಂತಿ ಕದಡುವುದೇ ಬಿಜೆಪಿ ಉದ್ದೇಶ; ಜಾತಿ, ಧರ್ಮ, ಪಕ್ಷ ಲೆಕ್ಕಿಸದೆ ಕ್ರಮ; Video

ಆಜ್ ತಕ್ ನಿರೂಪಕನ ವಿರುದ್ಧ ದ್ವೇಷ ಭಾಷಣ ಆರೋಪ: ಎಫ್‌ಐಆರ್ ದಾಖಲಿಸಲು UP ನ್ಯಾಯಾಲಯ ಆದೇಶ

Amruta Fadnavis: 'ನೀತಿ ಪಾಠ ಹೇಳುವವರೆ ಈ ರೀತಿಯ ಬಟ್ಟೆ ಧರಿಸಿದರೆ ಹೇಗೆ? ಮಹಾ ಸಿಎಂ 'ಫಡ್ನವೀಸ್ ಪತ್ನಿ' ವಿರುದ್ಧ ನೆಟ್ಟಿಗರ ಆಕ್ರೋಶ, Video ವೈರಲ್

Israel attacks: ದೋಹಾದಲ್ಲಿ 'ಹಮಾಸ್' ನಾಯಕರ ಮನೆ ಮೇಲೆ ಇಸ್ರೇಲ್ ವಾಯು ದಾಳಿ! ಹೇಡಿತನ ಎಂದ ಕತಾರ್!

SCROLL FOR NEXT