ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಚಿವ ಈಶ್ವರ್ ಖಂಡ್ರೆ 
ರಾಜ್ಯ

ಬೀದರ್: ಸಾಲ ಬಾಧೆ; ಕಾಲುವೆಗೆ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ!

ಮೃತರನ್ನು ಬೀದರ್ ನ ಮೈಲೂರಿನವರಾದ ಶಿವಮೂರ್ತಿ ಮಾರುತಿ ಬ್ಯಾನರ್ಜಿ (45) ಅವರ ಮೂವರು ಮಕ್ಕಳಾದ ಶ್ರೀಶಾಂತ (9) ರಿತಿಕ್ (7) ಹಾಗೂ ಏಳು ತಿಂಗಳ ರಾಕೇಶ ಎಂದು ಗುರುತಿಸಲಾಗಿದೆ.

ಭಾಲ್ಕಿ: ಒಂದೇ ಕುಟುಂಬದ ನಾಲ್ವರು ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನಲ್ಲಿ ಮಂಗಳವಾರ ನಡೆದಿದೆ. ಕಾರಂಜಾ ಜಲಾಶಯದ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಬೀದರ್ ನ ಮೈಲೂರಿನವರಾದ ಶಿವಮೂರ್ತಿ ಮಾರುತಿ ಬ್ಯಾನರ್ಜಿ (45) ಅವರ ಮೂವರು ಮಕ್ಕಳಾದ ಶ್ರೀಶಾಂತ (9) ರಿತಿಕ್ (7) ಹಾಗೂ ಏಳು ತಿಂಗಳ ರಾಕೇಶ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಶಿವಮೂರ್ತಿ ಅವರ ಪತ್ನಿ ರಮಾಬಾಯಿ, ಮಗ ಶ್ರೀಕಾಂತ ಬದುಕುಳಿದಿದ್ದಾರೆ.

ಸಾಲಬಾಧೆ ಆತ್ಮಹತ್ಯೆಗೆ ಕಾರಣ ಎಂಬುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಭೇಟಿ ಪರಿಶೀಲನೆ ನಡೆಸಿದರು.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಭಾಲ್ಕಿ ತಾಲೂಕ್ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಧನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅ.27ಕ್ಕೆ ವಿಚಾರಣೆ ಮುಂದೂಡಿಕೆ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!