ಸಾಂದರ್ಭಿಕ ಚಿತ್ರ 
ರಾಜ್ಯ

The New Indian Express ವರದಿ ಫಲಶೃತಿ: ಗದಗ ಶಾಲೆಗೆ ಶೌಚಾಲಯ ನಿರ್ಮಿಸಲು ಬೆಂಗಳೂರಿನ ಸಂಸ್ಥೆ ಮುಂದು!

ವಕೀಲ್ ಹೌಸಿಂಗ್ ಡೆವಲಪ್‌ಮೆಂಟ್ ಕಾರ್ಪೊರೇಷನ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಮೊಹ್ಸಿನ್ ಅಲಿ ವಕೀಲ್ ಈ ಲೇಖನ ನೋಡಿ ವಿದ್ಯಾರ್ಥಿಗಳಿಗೆ ಶೌಚಾಲಯ ನಿರ್ಮಿಸುವ ಮೂಲಕ ಸಹಾಯ ಮಾಡಲು ಮುಂದೆ ಬಂದಿದ್ದಾರೆ.

ಗದಗ: ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ವರದಿಯ ಫರಿಣಾಮದಿಂದ ಗದಗದ ಸರ್ಕಾರಿ ಶಾಲೆಯಲ್ಲಿ ಶೌಚಾಲಯ ನಿರ್ಮಿಸಲು ಬೆಂಗಳೂರಿನ ಸಂಸ್ಥೆಯೊಂದು ಮುಂದಾಗಿದೆ. ಶಾಲೆಯಲ್ಲಿ ಶೌಚಾಲಯವಿಲ್ಲದ ಕಾರಣ ವಿದ್ಯಾರ್ಥಿಗಳು ಹೆದ್ದಾರಿ ದಾಟಿ ಹೋಗಬೇಕು ಎಂಬ ಶೀರ್ಷಿಕೆಯಡಿಯಲ್ಲಿ 'ನ್ಯೂ ​​ಸಂಡೇ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ ಭಾನುವಾರ ಲೇಖನ ಪ್ರಕಟಿಸಿತ್ತು.

ವಕೀಲ್ ಹೌಸಿಂಗ್ ಡೆವಲಪ್‌ಮೆಂಟ್ ಕಾರ್ಪೊರೇಷನ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಮೊಹ್ಸಿನ್ ಅಲಿ ವಕೀಲ್ ಈ ಲೇಖನ ನೋಡಿ ವಿದ್ಯಾರ್ಥಿಗಳಿಗೆ ಶೌಚಾಲಯ ನಿರ್ಮಿಸುವ ಮೂಲಕ ಸಹಾಯ ಮಾಡಲು ಮುಂದೆ ಬಂದಿದ್ದಾರೆ. ವ್ಯವಸ್ಥಾಪಕ ಕಾರ್ಯದರ್ಶಿ ರಮೇಶ್ ಕುಮಾರ್ ಕರೆ ಮಾಡಿ ಅವಶ್ಯಕತೆಯ ಬಗ್ಗೆ ಮಾಹಿತಿ ಪಡೆದರು. ಎರಡು ಶೌಚಾಲಯಗಳನ್ನು ನಿರ್ಮಿಸಲು ಸಿದ್ಧರಿದ್ದು ಈಗ ಗುತ್ತಿಗೆದಾರರನ್ನು ಹುಡುಕುತ್ತಿರುವುದಾಗಿ ತಿಳಿಸಿದ್ದಾರೆ.

ಶೌಚಾಲಯವಿಲ್ಲದ ಮತ್ತು ವಿದ್ಯಾರ್ಥಿಗಳು ರಾಜ್ಯ ಹೆದ್ದಾರಿಯನ್ನು ದಾಟಬೇಕಾದ ಸರ್ಕಾರಿ ಶಾಲೆಯ ಕಥೆಯನ್ನು ನಾವು ಓದಿದ್ದೇವೆ. ಹೆದ್ದಾರಿ ದಾಟುವ ವೇಳೆ ಹೆಚ್ಚಿನ ಅಪಾಯವಿದೆ. ಆದ್ದರಿಂದ ನಮ್ಮ ಸಂಸ್ಥೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಮತ್ತು ಶೌಚಾಲಯಗಳನ್ನು ನಿರ್ಮಿಸಲು ನಿರ್ಧರಿಸಿದ್ದಾರೆ." ಹೊಂಬಳದಲ್ಲಿರುವ ವಿದ್ಯಾರ್ಥಿಗಳ ಪೋಷಕರಲ್ಲಿ ಒಬ್ಬರು, "ಯಾರಾದರೂ ಬಂದು ನಮಗೆ ಸಹಾಯ ಮಾಡಿದರೆ ನಮಗೆ ಸಂತೋಷವಾಗುತ್ತದೆ ಎಂದು ಕುಮಾರ್ ತಿಳಿಸಿದ್ದಾರೆ.

ನಮಗೆ ಶೌಚಾಲಯಗಳು ಬೇಕಾಗಿವೆ ಏಕೆಂದರೆ ಅನೇಕರು ಗೇಟ್ ಹೊರಗೆ ಹೋಗಿ ಜನನಿಬಿಡ ಹೆದ್ದಾರಿಯನ್ನು ದಾಟಬೇಕಾಗುತ್ತದೆ. ಆಸಕ್ತಿ ತೋರಿಸಿದ್ದಕ್ಕಾಗಿ ನಾವು ಕಂಪನಿಗೆ ಧನ್ಯವಾದ ಹೇಳುತ್ತೇವೆ ಮತ್ತು ಈ ವಿಷಯವನ್ನು ವರದಿ ಮಾಡಿದ್ದಕ್ಕಾಗಿ TNIE ಗೆ ಧನ್ಯವಾದ ಹೇಳುತ್ತೇವೆ ಎಂದು ಶಾಲಾ ಸಿಬ್ಬಂದಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನೇಪಾಳ ಬಿಕ್ಕಟ್ಟು: ಭಾರತದಲ್ಲಿ ಕಟ್ಟೆಚ್ಚರ; ಸಹಾಯವಾಣಿ ಆರಂಭ; ಕಠ್ಮಂಡುವಿಗೆ ವಿಮಾನ, ಬಸ್ ಸೇವೆ ರದ್ದು!

ಸಿದ್ದು ಸರ್ಕಾರದ ವಿರುದ್ಧ SC ಒಳಮೀಸಲಾತಿ ಕಿಚ್ಚು: ಫ್ರೀಡಂಪಾರ್ಕ್‌ನಲ್ಲಿ ಸ್ಪೃಶ್ಯ ಸಮುದಾಯದಿಂದ ಉಗ್ರ ಹೋರಾಟ, ಆತ್ಮಹತ್ಯೆಗೆ ಮಹಿಳೆ ಯತ್ನ!

ರಾಜ್ಯದ ಜನತೆಗೆ ಬಿಗ್ ಶಾಕ್; 3.65 ಲಕ್ಷ ಅನರ್ಹ BPL ಕಾರ್ಡ್ ರದ್ದು: CM ಸಿದ್ದರಾಮಯ್ಯ

Punjab: ದಲಿತ ಮಹಿಳೆಗೆ ಕಿರುಕುಳ ಪ್ರಕರಣದಲ್ಲಿ AAP ಶಾಸಕ ದೋಷಿ; ಸೆ.12ಕ್ಕೆ ಶಿಕ್ಷೆ ತೀರ್ಪು ಪ್ರಕಟ!

ಬಿಹಾರಕ್ಕೆ ಮೋದಿ ಬಂಪರ್ ಗಿಫ್ಟ್: 7,616 ಕೋಟಿ ರೂ. ರೈಲು, ರಸ್ತೆ ಯೋಜನೆಗಳಿಗೆ ಕೇಂದ್ರ ಅನುಮೋದನೆ

SCROLL FOR NEXT