ಸಾಂದರ್ಭಿಕ ಚಿತ್ರ 
ರಾಜ್ಯ

Digital Arrest: ಔರಾದ್ ಮಾಜಿ ಶಾಸಕ ಗುಂಡಪ್ಪ ವಕೀಲ್ ಗೆ 30 ಲಕ್ಷ ರೂ ವಂಚನೆ!

ಆಗಸ್ಟ್ 12ರಂದು ಸಿಬಿಐ ಆಫೀಸರ್ ಎಂದು ಕರೆ ಮಾಡಿದ್ದ ಆನ್‌ಲೈನ್ ವಂಚಕರು ಜೆಟ್ ಏರ್ ವೇಸ್ ನರೇಶ್ ಗೋಯಲ್ ಮನಿ ಲಾಡರಿಂಗ್ ಕೇಸ್‌ನಲ್ಲಿ ಭಾಗಿಯಾಗಿದ್ದೀರಿ. ನರೇಶ್ ಗೋಯಲ್ ಜೊತೆ ಅಕ್ರಮ ವ್ಯವಹಾರ ಮಾಡಿದ್ದೀರಿಎಂದು ಹೆದರಿಸಿದ್ದರು.

ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಮಾಜಿ ಶಾಸಕ ಗುಂಡಪ್ಪ ವಕೀಲ್ ಅವರನ್ನು ಬೆದರಿಸಿದ ವಂಚಕರು 30.99 ಲಕ್ಷ ರೂ ಹಣ ದೋಚಿರುವ ಘಟನೆ ನಡೆದಿದೆ.

ಔರದ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗುಂಡಪ್ಪ ವಕೀಲ್ ಅವರು ಡಿಜಿಟಲ್ ಅರೆಸ್ಟ್‌ಗೆ 30 ಲಕ್ಷ ರೂ. ಹಣ ಕಳೆದುಕೊಂಡಿದ್ದಾರೆ. ಘಟನೆ ಸಂಬಂಧ ಬೆಂಗಳೂರು ಸಿಸಿಬಿ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಬಿಐ, ಇ.ಡಿ ಹಾಗೂ ಜಡ್ಜ್ ಹೆಸರಿನಲ್ಲಿ ವಂಚಕರು ಮಾಜಿ ಶಾಸಕರಿಂದ ಹಂತ ಹಂತವಾಗಿ 30 ಲಕ್ಷ ರೂ. ಹಣವನ್ನು ವರ್ಗಾಯಿಸಿಕೊಂಡಿದ್ದಾರೆ.

ಆಗಸ್ಟ್ 12ರಂದು ಸಿಬಿಐ ಆಫೀಸರ್ ಎಂದು ಕರೆ ಮಾಡಿದ್ದ ಆನ್‌ಲೈನ್ ವಂಚಕರು ಜೆಟ್ ಏರ್ ವೇಸ್ ನರೇಶ್ ಗೋಯಲ್ ಮನಿ ಲಾಡರಿಂಗ್ ಕೇಸ್‌ನಲ್ಲಿ ಭಾಗಿಯಾಗಿದ್ದೀರಿ. ನರೇಶ್ ಗೋಯಲ್ ಜೊತೆ ಅಕ್ರಮ ವ್ಯವಹಾರ ಮಾಡಿದ್ದೀರಿ ಎಂದು ಹೆದರಿಸಿದ್ದರು.

ಆ.13ರಂದು ಸಿಬಿಐ ಡಿಸಿಪಿ ಎಂದು ಮತ್ತೋರ್ವ ಕರೆ ಮಾಡಿ, ‘ನೀವು ಡಿಜಿಟಲ್ ಅರೆಸ್ಟ್ ಆಗಿದ್ದೀರಿ, ಕಾಲ್ ಕಟ್ ಮಾಡಬೇಡಿ’ ಎಂದು ಭಯ ಪಡಿಸಿದ್ದ. ಬಳಿಕ ಆನ್‌ಲೈನ್‌ನಲ್ಲಿ ಫೇಕ್ ಜಡ್ಜ್ ಮುಂದೆ ಹಾಜರು ಪಡಿಸಿದ್ದ ಖದೀಮರು ಕೋರ್ಟ್ ಹಾಲ್ ರೀತಿ ಸೆಟಪ್ ಮಾಡಿ ನಂಬಿಕೆ ಹುಟ್ಟಿಸಿದ್ದರು.

ಮುಂದಿನ ನಾಲ್ಕು ದಿನಗಳಲ್ಲಿ, ವಂಚಕರು ಅವರನ್ನು ವೀಡಿಯೊ ಕರೆಗಳ ಮೂಲಕ ಪದೇ ಪದೇ ಪ್ರಶ್ನಿಸಿದರು, ಅವರ ಕುಟುಂಬ, ಬ್ಯಾಂಕ್ ಮತ್ತು ಆಸ್ತಿ ವಿವರಗಳನ್ನು ಪಡೆದುಕೊಂಡರು. ನಮ್ಮದು ತಪ್ಪಿಲ್ಲ ಎಂದು ಮುಚ್ಚಳಿಕೆ ಬರೆದುಕೊಡಿ ಎಂದು ಮೊದಲು 10 ಲಕ್ಷ ರೂ. ಹಣ ವರ್ಗಾಯಿಸಿಕೊಂಡಿದ್ದರು. ಬಳಿಕ ಪ್ರಾಪರ್ಟಿ ತನಿಖೆ ಮಾಡಬೇಕೆಂದು 20 ಲಕ್ಷ ರೂ. ಡೆಪಾಸಿಟ್ ಮಾಡಿಸಿಕೊಂಡಿದ್ದರು. ಹೀಗೆ ಆನ್‌ಲೈನ್‌ ವಂಚಕರ ಮಾತು ನಂಬಿ ಹಂತ-ಹಂತವಾಗಿ 30.99 ಲಕ್ಷ ರೂ. ಹಣ ವರ್ಗಾವಣೆ ಮಾಡಿದ್ದಾರೆ.

ಹಣ ಹಾಕಿಸಿಕೊಂಡು ತನಿಖೆ ಮುಗಿದ ನಂತರ ಮರಳಿ ಕೊಡುವುದಾಗಿ ನಂಬಿಸಿದ್ದರು. ಹಣ ಮರಳಿ ಬಾರದಿದ್ದಾಗ ಮಾಜಿ ಶಾಸಕ ಗುಂಡಪ್ಪ ವಕೀಲ್ ಸಿಸಿಬಿ ಸೈಬರ್ ಕ್ರೈಂ (CCB) ಪೊಲೀಸರಿಗೆ ದೂರು ನೀಡಿದ್ದಾರೆ. ಗುಂಡಪ್ಪ ವಕೀಲ್ ನೀಡಿದ ದೂರಿನ ಅನ್ವಯ ಎಫ್‌ಐಆರ್ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮದ್ದೂರು: ಅದ್ಧೂರಿ ಸಾಮೂಹಿಕ ಗಣೇಶ ವಿಸರ್ಜನೆ; ಬಿಜೆಪಿ ನಾಯಕರು ಭಾಗಿ, ಸರ್ಕಾರದ ವಿರುದ್ಧ ವಾಗ್ದಾಳಿ; Video

ನೇಪಾಳ ಬಳಿಕ ಈಗ ಫ್ರಾನ್ಸ್‌ನಲ್ಲಿ ಭುಗಿಲೆದ್ದ ಹಿಂಸಾಚಾರ: 200 ಮಂದಿ ಬಂಧನ; ಅಧಿಕಾರ ಕಳೆದುಕೊಂಡ ಫ್ರಾನ್ಸ್ ಪ್ರಧಾನಿ!

'ಕಣ್ಣೀರಿನೊಂದಿಗೆ ಡ್ಯಾನ್ಸ್ ಮಾಡಲು ಸಾಧ್ಯವಿಲ್ಲ': ಪ್ರಧಾನಿ ಮೋದಿ ಸ್ವಾಗತಕ್ಕೆ ಕುಕಿ ಸಮುದಾಯ ವಿರೋಧ

'ನೇಪಾಳ ಪರಿಸ್ಥಿತಿ ನೋಡಿ': AAP ಶಾಸಕ ಮೆಹ್ರಾಜ್ ಮಲಿಕ್ ವಿರುದ್ಧ FIR ದಾಖಲಿಸಿದ್ದಕ್ಕೆ ಮುಫ್ತಿ ಆಕ್ರೋಶ, ಸರ್ಕಾರಕ್ಕೆ ಎಚ್ಚರಿಕೆ!

ದೆಹಲಿ: ಕಾರಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಕ್ಯಾಬ್ ಚಾಲಕನ ಬಂಧನ

SCROLL FOR NEXT