ಗ್ರೇಟರ್‌ ಬೆಂಗಳೂರು ಪ್ರಾಧಿಕಾರ 
ರಾಜ್ಯ

ಬೆಂಗಳೂರು: 1,200 ಚದರ ಅಡಿವರೆಗಿನ ನಿವೇಶನ, 3 ಅಂತಸ್ತು ಕಟ್ಟಡಕ್ಕೆ OC ವಿನಾಯಿತಿ..!

ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ–2024ರ ಕಲಂ 241(7)ರಂತೆ ಸರ್ಕಾರಕ್ಕೆ ಪ್ರದತ್ತವಾದ ಅಧಿಕಾರದ ಅನ್ವಯ ಈ ವಸತಿ ಕಟ್ಟಡಗಳಿಗೆ ಒಸಿಯಿಂದ ವಿನಾಯಿತಿ ನೀಡಿ ಆದೇಶ ಹೊರಡಿಸಿದೆ.

ಬೆಂಗಳೂರು: ನೂತನವಾಗಿ ರಚಿಸಲಾದ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ 1,200 ಚದರಡಿ ವಿಸ್ತೀರ್ಣ ಮೀರದಂತಹ ನಿವೇಶನಗಳಲ್ಲಿ ನೆಲ ಮತ್ತು 2 ಅಂತಸ್ತು ಅಥವಾ ಸ್ಟಿಲ್ಟ್ ಮತ್ತು 3 ಅಂತಸ್ತಿನ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರದಿಂದ (ಓಸಿ) ವಿನಾಯಿತಿ ನೀಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.

ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ–2024ರ ಕಲಂ 241(7)ರಂತೆ ಸರ್ಕಾರಕ್ಕೆ ಪ್ರದತ್ತವಾದ ಅಧಿಕಾರದ ಅನ್ವಯ ಈ ವಸತಿ ಕಟ್ಟಡಗಳಿಗೆ ಒಸಿಯಿಂದ ವಿನಾಯಿತಿ ನೀಡಿ ಆದೇಶ ಹೊರಡಿಸಿದೆ.

1,200 ಚದರ ಅಡಿ ನಿವೇಶನದಲ್ಲಿ ನೆಲ ಹಾಗೂ 2 ಅಂತಸ್ತು ಅಥವಾ ಸ್ಟಿಲ್ಟ್‌ + ಮೂರು ಅಂತಸ್ತಿನ ಕಟ್ಟಡಗಳಿಗೆ ಒಸಿಯಿಂದ ವಿನಾಯಿತಿ ನೀಡಲಾಗಿದೆ. ಜಿಬಿಎ ಮುಖ್ಯ ಆಯುಕ್ತರ ಪ್ರಸ್ತಾವವನ್ನು ಕೂಲಂಕಷವಾಗಿ ಪರಿಶೀಲಿಸಿ ಸಣ್ಣ ಪ್ರಮಾಣದ ಕಟ್ಟಡಗಳಿಗೆ ಒಸಿ ವಿನಾಯಿತಿ ನೀಡುವುದರಿಂದ, ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ಒದಗಿಸಲು ಸಹಕಾರಿಯಾದಂತಾಗುತ್ತದೆ ಎಂದು ನಗರಾಭಿವೃದ್ಧಿ ಇಲಾಖೆ ಆದೇಶದಲ್ಲಿ ತಿಳಿಸಿದೆ.

ಪ್ರತಿ ವರ್ಷ 1,200 ಚದರಡಿಗಿಂತ ಕಡಿಮೆ ವಿಸ್ತೀರ್ಣದ ನಿವೇಶನಗಳಲ್ಲಿ ಸುಮಾರು ನಾಲ್ಕು ಸಾವಿರ ಕಟ್ಟಡಗಳಿಗೆ ನಕ್ಷೆ ಮಂಜೂರು ಮಾಡಲಾಗುತ್ತಿದೆ. ಜಿಬಿಎ ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆಯನ್ನು ಇದೀಗ ‘ನಂಬಿಕೆ ನಕ್ಷೆ’ ವ್ಯವಸ್ಥೆಯಡಿ ‘ಆಟೊಮೇಟೆಡ್‌ ಆನ್‌ಲೈನ್‌ ತಂತ್ರಾಂಶ’ದ ಮೂಲಕ ನೀಡಲಾಗುತ್ತಿದೆ. ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದ ದಿನದಂದೇ ಕರಡು ನಕ್ಷೆ ಮತ್ತು 15 ದಿನದಲ್ಲಿ ಅಂತಿಮ ನಕ್ಷೆ ಮಂಜೂರು ಮಾಡಿ, ಸಾರ್ವಜನಿಕರಿಗೆ ಪಾರದರ್ಶಕ ಹಾಗೂ ಕಾಲಮಿತಿಯಲ್ಲಿ ನಕ್ಷೆ ಮಂಜೂರು ಮಾಡಲಾಗುತ್ತಿದೆ.

ಸ್ವಾಧೀನಾನುಭವ ಪ್ರಮಾಣ ಪತ್ರ ನೀಡುವ ಪ್ರಕ್ರಿಯೆಯು ಸ್ಥಳ ಪರಿಶೀಲನೆ, ನಿರ್ಮಾಣ ಮಾಡಿರುವ ಕಟ್ಟಡ ಹಾಗೂ ಅನುಮೋದಿತ ಕಟ್ಟಡ ನಕ್ಷೆಯ ತುಲನಾತ್ಮಕ ಪರಿಶೀಲನೆಯನ್ನು ಒಳಗೊಂಡಿರುತ್ತದೆ. ಇದರಿಂದ ಸ್ಥಳೀಯ ಸಂಸ್ಥೆಗಳ ಮೇಲೆ ಹೆಚ್ಚಿನ ಕೆಲಸದ ಹೊರೆ ಉಂಟಾಗುತ್ತದೆ. ಅಲ್ಲದೆ, ಸಾರ್ವಜನಿಕರಿಗೆ ಸೇವೆ ನೀಡುವಲ್ಲಿ ವಿಳಂಬವಾಗುವ ಸಾಧ್ಯತೆಗಳಿವೆ. ‘ನಂಬಿಕೆ ನಕ್ಷೆ’ ವ್ಯವಸ್ಥೆಯಲ್ಲಿ ತ್ವರಿತವಾಗಿ ನಕ್ಷೆ ಮಂಜೂರು ಮಾಡುವುದನ್ನು ಗಮನದಲ್ಲಿರಿಸಿಕೊಂಡು ಸಣ್ಣ ಪ್ರಮಾಣದ ಕಟ್ಟಡಗಳಿಗೆ ಒಸಿಯಿಂದ ವಿನಾಯಿತಿ ನೀಡುವುದು ಸೂಕ್ತವಾಗಿರುತ್ತದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.

ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ– 2024ರಲ್ಲಿ ‘ಸ್ವಾಧೀನಾನುಭವ ಪ್ರಮಾಣ ಪತ್ರದಿಂದ ವಿನಾಯಿತಿ ಪಡೆಯುವ ಕಟ್ಟಡಗಳ ವರ್ಗವನ್ನು ಸರ್ಕಾರ ಅಧಿಸೂಚಿಸಬಹುದು’ ಎಂದು ಹೇಳಲಾಗಿದೆ.

ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆಯ ಅಧ್ಯಾಯ 7ರ ನಿಬಂಧನೆಗಳನ್ವಯ ಕಟ್ಟಡ ಮತ್ತು ನಗರ ಯೋಜನಾ ನಿಯಮಗಳ ನಿಯಂತ್ರಣ, ಮೇಲ್ವಿಚಾರಣೆಗಳನ್ನು ಕಾರ್ಯಗತಗೊಳಿಸಲು ಕಾರ್ಯಪಡೆಯೊಂದಿಗೆ ಆಡಳಿತ ರಚನೆಯನ್ನು ಜಿಬಿಎ ಮುಖ್ಯ ಆಯುಕ್ತರು ವಿನ್ಯಾಸಗೊಳಿಸಬೇಕು ಎಂದೂ ಆದೇಶದಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನೇಪಾಳ ಬಿಕ್ಕಟ್ಟು: ಭಾರತದಲ್ಲಿ ಕಟ್ಟೆಚ್ಚರ; ಸಹಾಯವಾಣಿ ಆರಂಭ; ಕಠ್ಮಂಡುವಿಗೆ ವಿಮಾನ, ಬಸ್ ಸೇವೆ ರದ್ದು!

Asia Cup 2025: ಮೊದಲ ಪಂದ್ಯದಲ್ಲೇ India ಅತ್ಯುತ್ತಮ ಪ್ರದರ್ಶನ; 57 ರನ್‌ಗಳಿಗೆ UAE ಆಲೌಟ್!

2,929 ಕೋಟಿ ರೂ ವಂಚನೆ ಆರೋಪ: Anil Ambani ವಿರುದ್ಧ ಹೊಸ ಪ್ರಕರಣ ದಾಖಲು

ಗುಜರಾತ್ ಫ್ಲೋರೋ ಕೆಮಿಕಲ್ ಕಂಪನಿಯಲ್ಲಿ ವಿಷಕಾರಿ ಅನಿಲ ಸೋರಿಕೆ: ಓರ್ವ ಸಾವು, 12 ಮಂದಿ ಆಸ್ಪತ್ರೆಗೆ ದಾಖಲು

ಸಿದ್ದರಾಮಯ್ಯ ಸರ್ಕಾರದ ವಿರುದ್ಧ SC ಒಳಮೀಸಲಾತಿ ಕಿಚ್ಚು: ಫ್ರೀಡಂ ಪಾರ್ಕ್‌ನಲ್ಲಿ ಸ್ಪೃಶ್ಯ ಸಮುದಾಯದಿಂದ ಉಗ್ರ ಹೋರಾಟ, ಆತ್ಮಹತ್ಯೆಗೆ ಮಹಿಳೆ ಯತ್ನ!

SCROLL FOR NEXT